ಚಕ್ರವರ್ತಿ ಸೂಲಿಬೆಲೆ ಹಾಗೂ ತೇಜಸ್ವಿ ಸೂರ್ಯ ಹೊಗಳು ಭಟ್ಟರು: ಕಿಡಿಕಾರಿದ ಬೇಳೂರು ಗೋಪಾಲಕೃಷ್ಣ
Team Udayavani, Mar 14, 2020, 4:49 PM IST
ಶಿವಮೊಗ್ಗ: ಚಕ್ರವರ್ತಿ ಸೂಲಿಬೆಲೆ ಹಾಗೂ ತೇಜಸ್ವಿ ಸೂರ್ಯ ಹೊಗಳು ಭಟ್ಟರು. ಕೇಂದ್ರ ಸರ್ಕಾರದ ಬಗ್ಗೆ ಹೊಗಳಿ ಮಾತನಾಡುತ್ತಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸೈನಿಕರು ಸತ್ತಿಲ್ಲವೇ? ಪುಲ್ವಾಮಾ ದಾಳಿಯಲ್ಲೇ 40ಕ್ಕೂ ಹೆಚ್ಚು ಸೈನಿಕರು ಮೃತಪಟ್ಟಿದ್ದಾರೆ ಎಂದರು.
ಈರುಳ್ಳಿ ಬೆಲೆ 200 ರೂಪಾಯಿ ತಲುಪಿದಾಗ ಈ ಇಬ್ಬರು ಎಲ್ಲಿಗೆ ಹೋಗಿದ್ದರು, ಏಕೆ ಮಾತನಾಡಲಿಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಗಗನಕ್ಕೇರಿದರೂ ತುಟಿಬಿಚ್ಚುತ್ತಿಲ್ಲ. ಇದೇನಾ ಅಚ್ಛೇ ದಿನ್ ಎಂದು ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು.
ಎಸ್.ಎಲ್.ಬೈರಪ್ಪ ಬಿಜೆಪಿಯ ಏಜೆಂಟ್ ಹಾಗಾಗಿಯೇ ಅವರ ಹೆಸರಿನಲ್ಲಿ ಬಜೆಟ್ ನಲ್ಲಿ ಐದುಕೋಟಿ ಮೀಸಲಿಟ್ಟಿದ್ದಾರೆ. ಆದರೆ ಭೈರಪ್ಪ ಅವರ ಗ್ರಾಮಕ್ಕೆ ಯಾವ ಉದ್ದೇಶಕ್ಕೆ ಹಣ ನೀಡಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಶಾಲೆಗಳೇ ಇಲ್ಲ. ಭೈರಪ್ಪ ಅವರ ಊರಿಗೆ ನೀಡಿದ ಅನುದಾನವನ್ನು ಉತ್ತರ ಕರ್ನಾಟಕದ ಶಾಲೆಗಳಿಗೆ ನೀಡಬಹುದಿತ್ತು ಎಂದರು.
ನಲಪಾಡ್ ಕಾರು ಆಕ್ಸಿಡೆಂಟ್ ಆದಾಗ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡಿದ್ದರು. ಅದೇ ಅಶೋಕ್ ಕಾರು ಅಪಘಾತವಾದಾಗ ಯಾರೂ ಚಕಾರವೆತ್ತಲಿಲ್ಲ. ನಲಪಾಡ್ ಪ್ರಕರಣದಲ್ಲಿ ಮಾತನಾಡಿದ್ದ ಆರ್.ಅಶೋಕ್ ತನ್ನ ಮಗನ ಕಾರು ಅಪಘಾತವಾಗುತ್ತಿದ್ದಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ಟೀಕಿಸಿದರು.
ಶರತ್ ಬಚ್ಚೇಗೌಡ ಪಕ್ಷದಿಂದ ದೂರ ಹೋದರೆ ಪಕ್ಷಕ್ಕೆ ತಾಯಿಗೆ ದ್ರೋಹ ಮಾಡಿದಂತೆ ಎಂದು ಸಿ.ಟಿ.ರವಿ ಹಾಗೂ ಆರ್.ಅಶೋಕ್ ಹೇಳುತ್ತಾರೆ. ಅದೇ ಕಾಂಗ್ರೆಸ್ ನ 17 ಜನ ಶಾಸಕರನ್ನು ಬಿಜೆಪಿಗೆ ಸೆಳೆದರು ಅದಕ್ಕೇನು ಹೇಳುತ್ತಾರೆ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.