COVID 19 :ರಾಜ್ಯದಲ್ಲಿ ಮೆಟ್ರೋ ರೈಲುಗಳು ಖಾಲಿ ಖಾಲಿ, 300 ಬಸ್ ಸಂಚಾರ ಸ್ಥಗಿತ
300 ಬಸ್‌ಗಳ ಸಂಚಾರ ಸ್ಥಗಿತ, 10 ನಿಮಿಷಕ್ಕೊಂದು ಮೆಟ್ರೋ ಓಡಿಸಲು ನಿರ್ಧಾರ
Team Udayavani, Mar 14, 2020, 6:46 PM IST
ಬೆಂಗಳೂರು: ಕೊರೊನಾ ನಿಯಂತ್ರಣ ಸಲುವಾಗಿ ರಾಜ್ಯ ಘೋಷಿತ ಬಂದ್‌ಗೆ ಸರಕಾರ ಕರೆ ನೀಡಿದೆ. ಈ ಹಿನ್ನೆಲೆ ಕಾರ್ಪೋರೆಟ್ ಉದ್ಯೋಗಿಗಳು ಮನೆಯತ್ತ ಮುಖ ಮಾಡಿದರೆ, ಬೆಂಗಳೂರು ನಿವಾಸಿಗಳು ಕಟ್ಟುನಿಟ್ಟಾಗಿ ಸರಕಾರ ಆಜ್ಞೆಯನ್ನು ಪಾಲಿಸುತ್ತಿದ್ದಾರೆ. ಪರಿಣಾಮ ರಾಜ್ಯ ರಾಜಧಾನಿಯ ರೋಡ್‌ಗಳು, ಬಸ್ ನಿಲ್ದಾಣಗಳು, ಮೆಟ್ರೋ ನಿಲ್ದಾಣಗಳು ಖಾಲಿ ಹೊಡೆಯುತ್ತಿವೆ.
ರಸ್ತೆಗಿಳಿಯದ 300 ಬಸ್‌ಗಳು
ಕೊರೊನಾ ಭೀತಿಗೆ ಬೆಚ್ಚಿ ಬಿದ್ದಿರುವ ಸಾರ್ವಜನಿಕರು ಸಾರಿಗೆ ಸೇವೆಗಳಿಗೆ ವಿದಾಯ ಹೇಳುತ್ತಿದ್ದಾರೆ. ಕೊರೊನಾ ಕಾರಣ ಕೆಎಸ್‌ಆರ್‌ಟಿಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದ್ದು, 300 ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬೆಳಿಗ್ಗೆಯಿಂದ 300 ಬಸ್‌ಗಳನ್ನು ನಿಲ್ಲಿಸಲಾಗಿದ್ದು, ಪರಿಸ್ಥಿತಿ ನೋಡಿಕೊಂಡು ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಸಂಚಾರಿ ವಿಭಾಗದ ಮುಖ್ಯಸ್ಥ ಪ್ರಭಾಕರ ರೆಡ್ಡಿ ಮಾಹಿತಿ ನೀಡಿದ್ದಾರೆ.
ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ
ಬೆಂಗಳೂರಿನಲ್ಲಿ ಕೊರೊನಾ ಭೀತಿಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿತವಾಗಿದೆ. ಸುಮಾರು ಶೇ. 70 ರಿಂದ 80% ಪ್ರಯಾಣಿಕರ ಪ್ರಮಾಣ ಕುಸಿದಿದೆ. ಕಳೆದ ಎರಡು ದಿನಗಳಿಂದ ಮೆಟ್ರೋ ಬೋಗಿಗಳು ಖಾಲಿ ಖಾಲಿಯಾಗಿದ್ದು, ಇಂದು ಕೂಡ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ನಿತ್ಯ 4 ಲಕ್ಷ ಪ್ರಯಾಣಿಕರು ಮೆಟ್ರೋ ಬಳಸುತ್ತಿದ್ದರು, ಆದರೆ ಎರಡು ಮೂರು ದಿನಗಳಿಂದ 3 ಲಕ್ಷ 20 ಸಾವಿರ ಮಂದಿ ಪ್ರಯಾಣಿಕರು ಬರುತ್ತಿದ್ದಾರೆ. ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ ಹಿನ್ನಲೆ ಎಚ್ಚೆತ್ತುಕೊಂಡ ಬೆಂಗಳೂರು ಮೆಟ್ರೋ ನಿಗಮ, ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾದ ಕಾರಣ ಮೆಟ್ರೋ 8 ನಿಮಿಷಕ್ಕೆ ಬದಲಾಗಿ 10 ನಿಮಿಷಕ್ಕೆ ಒಂದರಂತೆ ಓಡಾಟ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಮೊದಲು ನೇರಳೆ ಹಾಗೂ ಹಸಿರು ಮಾರ್ಗದಲ್ಲಿ 8 ನಿಮಿಷಕ್ಕೊಂದು ಮೆಟ್ರೋ ಓಡಾಟ ಮಾಡಲಾಗುತ್ತಿದ್ದು, ಇದೀಗ ಪ್ರಯಾಣಿಕರು ಬಾರದ ಕಾರಣ 10 ನಿಮಿಷಕ್ಕೊಂದು ಮೆಟ್ರೋ ಓಡಿಸಲು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.