![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 15, 2020, 3:05 AM IST
ಮುಳಬಾಗಿಲು: ಕೊರೊನಾ ದಾಳಿಗೆ ಹೆದರಿದ ಪೊಲೀಸ್ ಪೇದೆಯೊಬ್ಬ, “ನನ್ನ ತಂದೆ-ತಾಯಿಗೆ ನಾನೊಬ್ಬನೇ ಮಗನಾಗಿದ್ದು, 100 ದಿನ ರಜೆ ನೀಡಬೇಕು’ ಎಂದು ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆ ಪೇದೆ ಪ್ರಶಾಂತ್, ಈ ಪತ್ರ ಬರೆದಿದ್ದಾರೆ.
“ನಾನು 2 ವರ್ಷಗಳಿಂದ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ದಿನ ನಿತ್ಯ 24 ಗಂಟೆ ಹಾಗೂ ವಾರ ಪೂರ್ತಿ ಜನರ ಸಂಪರ್ಕದಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಈಗ ಕೊರೊನಾ ವೈರಸ್ ಎಲ್ಲಿ ನನಗೆ ಹರಡುತ್ತೋ ಎಂದು ಭಯದಿಂದ ಬದುಕುವಂತಾಗಿದೆ. ನನ್ನ ತಂದೆ-ತಾಯಿಗೆ ನಾನೊಬ್ಬನೇ ಮಗ. ಈ ವೈರಸ್ ತಮ್ಮ ಮಗನಿಗೆ ಎಲ್ಲಿ ಹರಡುತ್ತದೆಯೋ ಎಂದು ಅವರು ಭಯ ಬೀಳುತ್ತಿದ್ದಾರೆ.
ಹೀಗಾಗಿ, ನನಗೆ ನೂರು ಅಥವಾ ನೂರಕ್ಕಿಂತ ಹೆಚ್ಚು ದಿನಗಳ ಕಾಲ ರಜೆ ನೀಡಬೇಕು’ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಾರ್ತಿಕ್ ರೆಡ್ಡಿಯವರು, ಶನಿವಾರ ಸದರಿ ಪೇದೆಯನ್ನು ಕಚೇರಿಗೆ ಕರೆಸಿ, ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.