ಕೊರೊನಾ ಭೀತಿ: ಮಾರ್ಚ್ 22ರವರೆಗೆ ಮೈಸೂರು ಪ್ಯಾಲೆಸ್ ಬಂದ್
Team Udayavani, Mar 15, 2020, 10:05 AM IST
ಮೈಸೂರು: ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚುತ್ತಿರುವ ಕಾರಣ ಯಾವುದೇ ಸಭೆ ಸಮಾರಂಭ ಮಾಡದಂತೆ, ಶಾಲೆಗಳು ಚಿತ್ರ ಮಂದಿರಗಳನ್ನು ಮುಚ್ಚುವಂತೆ ರಾಜ್ಯ ಸರಕಾರ ಆದೇಶಿಸಿದೆ. ಇದರಂತೆ ಪ್ರಸಿದ್ದ ಮೈಸೂರು ಅರಮನೆಯನ್ನು ಮಾರ್ಚ್ 22ರವರೆಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.
ಮೈಸೂರು ಅರಮನೆ ಸಮಿತಿ ಶನಿವಾರ ಈ ಮಾಹಿತಿ ನೀಡಿದ್ದು, ಮಾರ್ಚ್ 15ರಿಂದ 22ರವರೆಗೆ ಒಂದು ವಾರದ ಮಟ್ಟಿಗೆ ಪ್ರವಾಸಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಯಾಗಿದೆ.
ಶುಕ್ರವಾರ ಮಧ್ಯಾಹ್ನ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕರ್ನಾಟಕದಲ್ಲಿ ಒಂದು ವಾರದ ಮಟ್ಟಿಗೆ ಶಾಲಾ ಕಾಲೇಜುಗಳು, ಚಿತ್ರಮಂದಿರಗಳು, ಜಾತ್ರೆಗಳು, ಜಿಮ್ ಗಳು, ಸ್ವಿಮ್ಮಿಂಗ್ ಪೂಲ್ ಗಳು, ಸಭೆ ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದರು.
ರಾಜ್ಯದಲ್ಲಿ ಇದುವರೆಗೆ ಒಟ್ಟು ಆರು ಜನರಿಗೆ ಕೊರೊನಾ ಸೋಂಕು ತಾಗಿದ್ದು, ಕಲಬುರಿಯ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು 93 ಜನ ಕೊರೊನಾ ಸೋಂಕು ಪೀಡಿತರಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.