ಶೃಂಗೇರಿ ಶಾಸಕರ ಪುತ್ರಿಯ ಸರಳ ವಿವಾಹ
ಸರಳವಾಗಿ ವಿವಾಹ ಸಮಾರಂಭ ನಡೆಸಲು ನಿರ್ಧಾರ ಸಮುದಾಯ ಭವನದ ಬದಲು ತೋಟದ ಮನೆಯಲ್ಲೇ ಮದುವೆ
Team Udayavani, Mar 15, 2020, 3:28 PM IST
ಚಿಕ್ಕಮಗಳೂರು: ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಭೀತಿ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡರ ಮಗಳ ವಿವಾಹ ಸಮಾರಂಭಕ್ಕೂ ಬಿಸಿ ಮುಟ್ಟಿಸಿದೆ.
ಕೊರೊನಾ ವೈರಸ್ ತಡೆಗೆ ರಾಜ್ಯ ಸರ್ಕಾರ ಜನಸಂದಣಿ ಸೇರುವ ಸಮಾರಂಭಗಳಿಗೆ ಬ್ರೇಕ್ ಹಾಕಿರುವ ಹಿನ್ನೆಲೆಯಲ್ಲಿ ಶಾಸಕರ ಪುತ್ರಿಯ ವಿವಾಹವನ್ನು ಸರಳವಾಗಿ ನಡೆಸಲು ಎರಡೂ ಕುಟುಂಬಗಳ ಹಿರಿಯರು ಮತ್ತು ಸ್ನೇಹಿತರು ತೀರ್ಮಾನಿಸಿದ್ದಾರೆ.
ಈ ಕುರಿತು ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ರಾಜೇಗೌಡ, ತಮ್ಮ ಮಗಳು ಡಾ|ಸಂಜನಾ ಮತ್ತು ಕಾಫಿ ಬೆಳೆಗಾರ ಅತ್ತಿಕಟ್ಟೆ ಜಗನ್ನಾಥ್ ಅವರ ಪುತ್ರ ವಚನ್ ಅವರ ವಿವಾಹ ಸಮಾರಂಭ ಮಾ.19ಕ್ಕೆ ಚಿಕ್ಕಮಗಳೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಬೇಕಿತ್ತು. ಆದರೆ, ರಾಜ್ಯದಲ್ಲಿ ಕೊರೊನಾ ವೈರಸ್ ಕಂಡು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಹೆಚ್ಚಿನ ಜನರ ಸಮ್ಮುಖದಲ್ಲಿ ವಿವಾಹ ಸಮಾರಂಭ ನಡೆಸದೆ ಸರಳವಾಗಿ ನಡೆಸಲಾಗುವುದು ಎಂದು ತಿಳಿಸಿದರು.
ವಿವಾಹ ಸಮಾರಂಭಕ್ಕೆ ಕುಟುಂಬ ಸದಸ್ಯರು, ಬಂಧುಗಳು, ಸ್ನೇಹಿತರು ಹಾಗೂ ಹಿತೈಷಿಗಳು ಸೇರಿದಂತೆ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ ಇತ್ತು. ಈಗಾಗಲೇ ಆಹ್ವಾನ ಪತ್ರಿಕೆ ಹಂಚಲಾಗಿತ್ತು. ಆದರೆ ರಾಜ್ಯ ಸರ್ಕಾರ ಕೊರೊನಾ ವೈರಸ್ ಸೋಂಕಿನ ಭೀತಿಯಿಂದಾಗಿ ಮದುವೆ, ಜಾತ್ರೆ, ಸಭೆ, ಸಮಾರಂಭಗಳಂತಹ ಹೆಚ್ಚು ಜನ ಸೇರುವ ಸಮಾರಂಭಗಳನ್ನು ಒಂದು ವಾರದ ಮಟ್ಟಿಗೆ ಮುಂದೂಡುವಂತೆ ಆದೇಶ ನೀಡಿದೆ. ಹಾಗಾಗಿ, ಸಮುದಾಯ ಭವನದ ಬದಲಿಗೆ ಖಾಂಡ್ಯಾ ಹೋಬಳಿಯಲ್ಲಿರುವ ಬಾಸಾಪುರ ಎಸ್ಟೇಟ್ ನ ಮನೆಯಲ್ಲಿಯೇ ವಧು ಮತ್ತು ವರನ ಕುಟುಂಬ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಸರಳ ವಿವಾಹ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಮಾ.18ರಂದು ಬುಧವಾರ ವಿವಾಹದ ದೇವತಾ ಕಾರ್ಯ ಹಾಗೂ ಮಾ.19ರಂದು ಗುರುವಾರ ವಿವಾಹ ಕಾರ್ಯಕ್ರಮ ಸರಳವಾಗಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ವರನ ತಂದೆ ಅತ್ತಿಕಟ್ಟೆ ಜಗನ್ನಾಥ್ ಮಾತನಾಡಿ, ಮಾ.21 ರಂದು ಚಿಕ್ಕಮಗಳೂರು ಕ್ಲಬ್‌ನಲ್ಲಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸರಕಾರದ ಆದೇಶದ ಹಿನ್ನೆಲೆಯಲ್ಲಿ ಆರಕ್ಷತೆಯನ್ನೂ ಮುಂದೂಡಲಾಗಿದೆ. ವಿವಾಹಕ್ಕೆ ಸಾವಿರಾರು ಮಂದಿ ಆಗಮಿಸುವ ನಿರೀಕ್ಷೆ ಇತ್ತು. ಆದರೆ, ಮಾರಕ ರೋಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವುದು ಪ್ರತಿಯೊಬ್ಬರ ಕರ್ತವ್ಯ. ಅದರಂತೆ ಸರಳ ವಿವಾಹಕ್ಕೆ ಎರಡೂ ಕುಟುಂಬಗಳು ಮಾತುಕತೆ ನಡೆಸಿ ತೀರ್ಮಾನಕ್ಕೆ ಬಂದಿರುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕ ರಾಜೇಗೌಡರ ಆಪ್ತರಾದ ಎಸ್.ವಿ.ಮಂಜುನಾಥ್, ಶ್ರೀಧರ್, ಮಲ್ಲೇಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.