ಕೊರೊನಾ ಬಗ್ಗೆ ಗ್ರಾಮೀಣರಲ್ಲಿ ಹೆಚ್ಚಿನ ಜಾಗೃತಿ ಅಗತ್ಯ

ವೈರಸ್‌ ಬಗ್ಗೆ ಆತಂಕ ಬೇಡ ಎಚ್ಚರಿಕೆ ಇರಲಿ: ಶಾಸಕ ನಾಗೇಂದ್ರ

Team Udayavani, Mar 15, 2020, 6:13 PM IST

15-March-27

ಬಳ್ಳಾರಿ: ಕೊರೊನಾ ವೈರಸ್‌ ಬಗ್ಗೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ವೈರಸ್‌ ಬಗ್ಗೆ ಗ್ರಾಮೀಣ ಜನರಲ್ಲಿರುವ ಆತಂಕ ದೂರ ಮಾಡಬೇಕು ಎಂದು ಗ್ರಾಮೀಣ ಶಾಸಕ ಬಿ.ನಾಗೇಂದ್ರ ಹೇಳಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೊರೊನಾ ವೈರಸ್‌ ಕುರಿತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸುವ ಕುರಿತು ಶನಿವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕೊರೊನಾ ವೈರಸ್‌ ಬಗ್ಗೆ ಜನರಲ್ಲಿ ಆತಂಕ ಬೇಡವಾದರೂ ಎಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ವೈರಸ್‌ ಬಗ್ಗೆ ಹೆಚ್ಚಾಗಿ ಜಾಗೃತಿ ಮೂಡಿಸಬೇಕು. ಗ್ರಾಮೀಣ ಭಾಗದಲ್ಲಿ ಡಂಗೂರವೇ ಮಾಧ್ಯಮ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಡಂಗೂರ ಸಾರಿಸಲು ಕ್ರಮಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು. ಅದಕ್ಕಾಗಿ ಶಾಸಕರ ಅನುದಾನವನ್ನು ಬಳಸಿಕೊಂಡು ಅಗತ್ಯ ಕ್ರಮಕೈಗೊಳ್ಳಬೇಕು. ಕರಪತ್ರ ಮುದ್ರಿಸಿ ಹಂಚಬೇಕು. ಅಗತ್ಯವಿರುವ ಕಡೆ ಬ್ಯಾನರ್‌, ಫ್ಲೆಕ್ಸ್ ಗಳನ್ನು ಅಳವಡಿಸಬೇಕು. ಆರೋಗ್ಯ ಸಚಿವರ ತವರಲ್ಲೇ ಕೊರೊನಾ ವೈರಸ್‌ ಪ್ರಕರಣ ದಾಖಲಾದರೆ ನಮಗೆ ಕೆಟ್ಟ ಹೆಸರು ಬರುತ್ತದೆ. ಆದ್ದರಿಂದ ವೈರಸ್‌ ಬಗ್ಗೆ ಜಾಗೃತಿ ಮೂಡಿಸುವ ಎಲ್ಲ ಕ್ರಮಗಳನ್ನು ಕೈಗೊಂಡು ಜನರಲ್ಲಿ ತಿಳಿವಳಿಕೆ ಮೂಡಿಸಬೇಕು. ಅದಕ್ಕಾಗಿ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದವರು ಕೋರಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್‌.ಎಲ್‌. ಜನಾರ್ದನ್‌ ಮಾತನಾಡಿ, ದೇಶದಲ್ಲೇ ಕೇರಳ ರಾಜ್ಯದಲ್ಲಿ ಅತಿಹೆಚ್ಚು 19 ಪ್ರಕರಣಗಳು ಪತ್ತೆಯಾಗಿವೆ. ಉತ್ತರ ಪ್ರದೇಶದಲ್ಲಿ 11, ಮಹಾರಾಷ್ಟ್ರದಲ್ಲಿ 14, ಕರ್ನಾಟಕ ರಾಜ್ಯದಲ್ಲಿ 6 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಈಗಾಗಲೇ ಒಬ್ಬರು ಮೃತಪಟ್ಟಿದ್ದಾರೆ. ಕೊರೊನಾ ವೈರಸ್‌ ಶಂಕಿತವೆಂದು ಗೊತ್ತಾಗುತ್ತಿದ್ದಂತೆ 14 ದಿನಗಳ ಕಾಲ ಪ್ರತ್ಯೇಕವಾಗಿ ಚಿಕಿತ್ಸೆ ನೀಡಬೇಕು. ದೇಶ ವಿದೇಶದಿಂದ ಬರುವವರಿಗೆ ರಾಜ್ಯದ ಮಂಗಳೂರು, ಕಾರವಾರ ಜಿಲ್ಲೆಗಳಲ್ಲಿ ತಪಾಸಣಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಐದು ಕಡೆ ಪ್ರಯೋಗ ಶಾಲೆಗಳನ್ನು ತೆರೆಯಲಾಗಿದೆ. ಕೆಮ್ಮು, ಜ್ವರ, ನಗೆಡಿ ಇರುವವರು ಮಾತ್ರ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಬೇಕು. ಸ್ವಚ್ಚತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ಕೊರೊನಾ ವೈರಸ್‌ ಕುರಿತ ಜಾಗೃತಿ ಪೋಸ್ಟರ್‌ನ್ನು ಶಾಸಕ ನಾಗೇಂದ್ರ ಇದೇ ವೇಳೆ ಬಿಡುಗಡೆಗೊಳಿಸಿದರು.

ಸಭೆಯಲ್ಲಿ ತಾಪಂ ಅಧ್ಯಕ್ಷೆ ಎಸ್‌.ಆರ್‌.ಲೀಲಾವತಿ, ಉಪಾಧ್ಯಕ್ಷೆ ಪುಷ್ಪಾವತಿ, ಇಒ ಮಡಗಿನ ಬಸಪ್ಪ, ಸಹಾಯಕ ನಿರ್ದೇಶಕ ಆರ್‌.ಕೆ. ಬಸವರಾಜ್‌, ಡಾ| ಎನ್‌. ಆರ್‌.ಶ್ರೀಧರ್‌, ಜಿಲ್ಲಾ ಆರೋಗ್ಯ ಶಿಕ್ಷಣಾ ಧಿಕಾರಿ ಈಶ್ವರ್‌ ದಾಸಪ್ಪನವರ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.