“ವಿರಾಟಪರ್ವ’ ಟೀಸರ್ ಬಂತು
ಹೊಸಬರಿಗೆ ಮೆಚ್ಚುಗೆ
Team Udayavani, Mar 16, 2020, 7:01 AM IST
ಕನ್ನಡದಲ್ಲಿ ದಿನದಿಂದ ದಿನಕ್ಕೆ ಹೊಸಬರ ಸಿನಿಮಾಗಳು ಬರುತ್ತಲೇ ಇವೆ. ಹೀಗೆ ಬರುವ ಒಂದಷ್ಟು ಮಂದಿ ಹೊಸಬರು ಕಂಟೆಂಟ್ ನಂಬಿಕೊಂಡು ಬರುತ್ತಾರೆ. ಅದೇ ಕಾರಣದಿಂದ ಸ್ಟಾರ್‌ಗಳ ಕಮರ್ಷಿಯಲ್ ಸಿನಿಮಾಗಳ ಮಧ್ಯೆ ಹೊಸಬರ ಕಂಟೆಂಟ್ ಆಧರಿತ ಚಿತ್ರಗಳು ಕೂಡಾ ಸದ್ದು ಮಾಡುತ್ತಿವೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ “ವಿರಾಟಪರ್ವ’. ಹೀಗೊಂದು ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು.
ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೊದಲ ಹಂತವಾಗಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಚಿತ್ರದ ಮೇಲಿನ ಭರವಸೆಯನ್ನು ಹೆಚ್ಚಿಸುವಂತಿದ್ದು, ಸಾಕಷ್ಟು ಕುತೂಹಲಕಾರಿ ಅಂಶಗಳನ್ನು ಒಳಗೊಂಡಿದೆ. ಈ ಚಿತ್ರವನ್ನು ಅನಂತ್ ಶೈನ್ ನಿರ್ದೇಶಿಸಿದ್ದಾರೆ. ಈ ಹಿಂದೆ “ಮುದ್ದು ಮನಸೇ’ ಎಂಬ ಸಿನಿಮಾ ಮಾಡಿದ್ದ ಅನಂತ್ ಅವರಿಗೆ ಇದು ಎರಡನೇ ಸಿನಿಮಾ. ಈ ಚಿತ್ರವನ್ನು ಸುನೀಲ್ ರಾಜ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ವಿನೀತ್ ರಾಜ್ ಮೆನನ್ ಅವರು ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.
ಶಿವು ಬಿ.ಕೆ.ಕುಮಾರ್ ಹಾಗು ಶಿವಸೀನ ಚಿತ್ರಕ್ಕೆ ಛಾಯಾಗ್ರಾಹಕರು. ವೆಂಕಿ, ಜ್ಞಾನೇಶ್, ವಿಜಯ್ ಸಂಕಲನವಿದೆ. ಮೋಹನ್ ಅವರ ನೃತ್ಯ ನಿರ್ದೇಶನವಿದೆ. ಮಾಸ್ ಮಾದ ಹಾಗು ವಿಕ್ರಮ್ ಅವರ ಆ್ಯಕ್ಷನ್ ಚಿತ್ರಕ್ಕಿದೆ. ಇನ್ನು, ನಾಗೇಂದ್ರ ಪ್ರಸಾದ್,ಕವಿರಾಜ್, ಯೋಗರಾಜ್‌ಭಟ್ ಅವರು ಗೀತೆಗಳನ್ನು ರಚಿಸಿದ್ದಾರೆ. ಸಂದೀಪ್ ಮತ್ತು ರಘು ಸಂಭಾಷಣೆ ಬರೆದಿದ್ದಾರೆ. ಹಿನ್ನೆಲೆ ಸಂಗೀತವನ್ನು ರಿತ್ವಿಕ್ ಮಾಡುತ್ತಿದ್ದಾರೆ. ಚಿತ್ರದಲ್ಲಿ ಅರು ಗೌಡ, ಯಶ್ ಶೆಟ್ಟಿ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಚಿತ್ರ ಏಪ್ರಿಲ್‌ನಲ್ಲಿ ತೆರೆಕಾಣುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.