ನಿರ್ಭಯಾ ಹಂತಕರ ಗಲ್ಲಿಗೇರಿಸಲು ಸಿದ್ಧತೆ
Team Udayavani, Mar 15, 2020, 9:34 PM IST
ನವದೆಹಲಿ: ಇದೇ ತಿಂಗಳ 20ರಂದು ನಿರ್ಭಯಾ ಹಂತಕರನ್ನು ಗಲ್ಲಿಗೇರಿಸುವಂತೆ ನ್ಯಾಯಾಲಯದ ಆದೇಶ ಜಾರಿಯಾಗಿರುವ ಹಿನ್ನೆಲೆಯಲ್ಲಿ, ಗಲ್ಲಿಗೇರಿಸುವ ದಿನಕ್ಕಿಂತ ಮೂರು ದಿನಗಳ ಮುಂಚಿತವಾಗಿಯೇ ವಧಾಕಾರನನ್ನು ತಿಹಾರ್ ಜೈಲಿಗೆ ಕರೆಯಿಸಿಕೊಳ್ಳಲು ಜೈಲಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ವಧಾಕಾರ ಪವನ್ ಜಲ್ಲಾದ್ ಸೇವೆ ಸಲ್ಲಿಸುತ್ತಿರುವ ಉತ್ತರ ಪ್ರದೇಶದ ಕಾರಾಗೃಹದ ಅಧಿಕಾರಿಗಳಿಗೆ ಪತ್ರ ಬರೆದಿರುವ ತಿಹಾರ್ ಜೈಲಧಿಕಾರಿಗಳು, ಆತನನ್ನು ಮೂರು ದಿನ ಮುಂಚಿತವಾಗಿ ಕಳುಹಿಸಬೇಕೆಂದು ಕೋರಿದ್ದಾರೆ. ನ್ಯಾಯಾಲಯದ ಆದೇಶದಂತೆ, ಮಾ. 20ರ ಬೆಳಗಿನ ಜಾವ 5:30ಕ್ಕೆ ಹಂತಕರಾದ ಮುಕೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಹಾಗೂ ಅಕ್ಷಯ್ ಕುಮಾರ್ ಸಿಂಗ್ (31) ಅವರನ್ನು ಗಲ್ಲಿಗೇರಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.