ಕೊರೊನಾ: ಮುನ್ನೆಚ್ಚರಿಕೆ ಆದೇಶ ಕಟ್ಟುನಿಟ್ಟಾಗಿ ಪಾಲಿಸಿ


Team Udayavani, Mar 16, 2020, 3:00 AM IST

corona-munne

ಚಾಮರಾಜನಗರ: ಕೊರೊನಾ ವೈರಸ್‌ ಹರಡದಂತೆ ವಹಿಸಬೇಕಿರುವ ಮುಂಜಾಗ್ರತಾ ಕ್ರಮಗಳ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಹೊರಡಿಸಲಾಗಿರುವ ಆದೇಶವನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್‌ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ನಡೆಯುವ ಸಂತೆ, ಜಾತ್ರೆ, ಉತ್ಸವ ಇನ್ನಿತರ ಜನಸಂದಣಿ ಸೇರುವಂತಹ ಕಾರ್ಯಕ್ರಮ ರದ್ದುಪಡಿಸಲಾಗಿದೆ.

ಚಲನಚಿತ್ರ ಮಂದಿರಗಳು, ನಾಟಕ ಪ್ರದರ್ಶನ ನಡೆಸದಿರಲು ಆದೇಶಿಸಲಾಗಿದೆ. ಜನದಟ್ಟಣೆ ಸೇರುವಂತಹ ಸರ್ಕಾರಿ ಸಮಾರಂಭ ರದ್ದುಗೊಳಿಸಲಾಗಿದೆ. ಬೇಸಿಗೆ ಶಿಬಿರ, ಕ್ರೀಡಾಕೂಟ, ವಿಚಾರ ಸಂಕಿರಣದಂತಹ ಮತ್ತಿತರ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಮದುವೆಗೆ ಹೆಚ್ಚಿನ ಜನಸಂದಣಿಯಾಗದಂತೆ ಸರಳವಾಗಿ ಆಯೋಜಿಸಲು ಸೂಚಿಸಲಾಗಿದೆ ಎಂದರು.

ಸುರಕ್ಷತಾ ಕ್ರಮ ಕೈಗೊಳ್ಳಿ: ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಹೊರಡಿಸಲಾಗಿರುವ ಆದೇಶ, ಸೂಚನೆ ಪಾಲಿಸುವಂತೆ ಜನರಿಗೆ ಮನವರಿಕೆ ಮಾಡಿಕೊಡಬೇಕಿದೆ. ಗುಂಪು, ಜನಸಂದಣಿ ಸೇರುವಂತಹ ಕಾರ್ಯಕ್ರಮ ಮುಂದೂಡುವಂತೆ ಜಾಗೃತಿಗೊಳಿಸಲು ಗ್ರಾಮೀಣ ಭಾಗಗಳಲ್ಲಿ ಅಧಿಕಾರಿಗಳು ವ್ಯಾಪಕ ಪ್ರಚಾರ ಮಾಡಬೇಕು. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಇದರ ಆದೇಶವು ಕಟ್ಟುನಿಟ್ಟಿನ ಪಾಲನೆಯಾಗಬೇಕು. ಹಾಸ್ಟೆಲ್‌ಗ‌ಳಲ್ಲಿಯೂ ವಿದ್ಯಾರ್ಥಿಗಳ ಆರೋಗ್ಯ ಕಾಳಜಿಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಮೂವರು ವಿದೇಶದಿಂದ ಬಂದವರು: ಜಿಲ್ಲೆಯಲ್ಲಿ ಮೂವರು ವಿದೇಶ ಪ್ರಯಾಣಿಸಿ ಬಂದವರಾಗಿದ್ದಾರೆ. ಆರೋಗ್ಯ ಕಾಳಜಿಯಿಂದ ಈ ಮೂವರನ್ನು ಮನೆಯಲ್ಲಿಯೇ (ಹೋಮ್‌ ಐಸೋಲೇಷನ್‌) ಇರಿಸಿದ್ದು, ಇವರ ಆರೋಗ್ಯದ ಮೇಲೆ ಮೇಲೆ ಗಮನ ಹರಿಸಲಾಗಿದೆ. ವಿದೇಶಗಳಿಂದ ಬಂದವರ ಬಗ್ಗೆ ಮಾಹಿತಿ ಕಲೆ ಹಾಕಬೇಕು. ಜಿಲ್ಲೆಯ ಜನರು ವಿದೇಶಗಳಿಂದ ಪ್ರಯಾಣಿಸಿ ಬಂದಿದ್ದಲ್ಲಿ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಅರಿವು ಮೂಡಿಸಬೇಕು. ಹೋಟೆಲ್‌, ರೆಸಾರ್ಟ್‌ಗಳಲ್ಲಿ ವಿದೇಶ, ಹೊರಭಾಗದಿಂದ ಬಂದಿರುವವರ ಪಟ್ಟಿ ಪಡೆದು ಪರಿಶೀಲಿಸಬೇಕು ಎಂದು ತಿಳಿಸಿದರು.

ಮುನ್ನೆಚ್ಚರಿಕೆ ಕ್ರಮ ಅನುಷ್ಠಾನಗೊಳಿಸಿ: ತಹಶೀಲ್ದಾರರು, ತಾಪಂ ಕಾರ್ಯನಿವಾಹಕ ಅಧಿಕಾರಿಗಳು, ವೈದ್ಯಾಧಿಕಾರಿಗಳು ಸಮನ್ವಯದಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಷ್ಠಾನ ಮಾಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿಯೂ ಮಾಹಿತಿ ಪಡೆದುಕೊಳ್ಳಬೇಕು. ಮುಖಗವಸು ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮುಖಗವಸು ಮಾರಾಟ ಮಾಡುವ ಅಂಗಡಿಗಳಲ್ಲಿ ಮುಖಗವಸು ಬೆಲೆಯನ್ನು ಗ್ರಾಹಕರಿಗೆ ಎದ್ದುಕಾಣುವಂತೆ ಪ್ರದರ್ಶಿಸಬೇಕು ಎಂದು ನಿರ್ದೇಶನ ನೀಡಿದರು.

ಸುಳ್ಳು ಹರಡಿದ ಇಬ್ಬರ ಬಂಧನ: ಕೊರೊನಾ ವೈರಸ್‌ ಸಂಬಂಧ ಅನಗತ್ಯವಾಗಿ ಸುಳ್ಳುಸುದ್ದಿ, ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಕೊರೊನಾ ವೈರಸ್‌ ಪತ್ತೆಯಾಗಿದೆ ಎಂಬ ಸುಳ್ಳುಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಮುಂದೆಯೂ ಕೊರೊನಾ ಕುರಿತು ವದಂತಿ, ಅತಂಕ ಉಂಟುಮಾಡುವವರ ವಿರುದ್ದ ಕ್ರಮ ವಹಿಸಲಾಗುತ್ತದೆ. ಈ ಬಗ್ಗೆಯೂ ವ್ಯಾಪಕವಾಗಿ ಜನರಲ್ಲಿ ತಿಳಿವಳಿಕೆ ನೀಡಬೇಕಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕೆಲ ಅಧಿಕಾರಿಗಳು ಗೈರಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಗೈರು ಹಾಜರಾದವರಿಗೆ ನೋಟಿಸ್‌ ಜಾರಿ ಮಾಡುವಂತೆ ಸೂಚಿಸಿದರು. ಸಭೆಯಲ್ಲಿ ಜಿಪಂ ಸಿಇಒ ಹರ್ಷಲ್‌ ಭೋಯರ್‌ ನಾರಾಯಣ್‌ರಾವ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ. ರವಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ನಿರ್ದೇಶಕ ಕೆ.ಸುರೇಶ್‌, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹೊನ್ನೇಗೌಡ, ತಹಶೀಲ್ದಾರ್‌ ಜೆ.ಮಹೇಶ್‌, ನಂಜುಂಡಯ್ಯ, ತಾಲೂಕು ಆರೋಗ್ಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಕೊರೊನಾ ವೈರಸ್‌ ಹರಡುವಿಕೆ ತಡೆಗಟ್ಟುವಲ್ಲಿ ಪೊಲೀಸ್‌ ಇಲಾಖೆ ಎಲ್ಲಾ ಸಹಕಾರವನ್ನು ಅಧಿಕಾರಿಗಳಿಗೆ ನೀಡಲಿದೆ. ಸುಳ್ಳು ವದಂತಿ ಹರಡುವವರ ಬಗ್ಗೆಯೂ ತುರ್ತಾಗಿ ಕ್ರಮ ತೆಗೆದುಕೊಳ್ಳಲಿದೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿಯನ್ನು ಹರಡಿದ ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
-ಎಚ್‌.ಡಿ. ಆನಂದಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.