ಮೂವರಿಗೆ ಕೊರೊನಾ ಶಂಕೆ
Team Udayavani, Mar 16, 2020, 3:04 AM IST
ವಿಜಯಪುರ: ಮೆಕ್ಕಾ ಪ್ರವಾಸ ಮುಗಿಸಿ ವಿಜಯಪುರ ಜಿಲ್ಲೆಗೆ ಬಂದಿರುವ 25 ವರ್ಷದ ಯುವಕನಲ್ಲಿ ಕೊರೊನಾ ಲಕ್ಷಣ ಕಂಡು ಬಂದಿವೆ. ಹೀಗಾಗಿ ಆ ಯುವಕನ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಶಂಕಿತ ರೋಗಿ ಮಾ.5ರಂದು ಮೆಕ್ಕಾದಿಂದ ವಿಜಯಪುರಕ್ಕೆ ಮರಳಿದ್ದ. ಆತನಲ್ಲಿ ಕೆಮ್ಮು-ನೆಗಡಿಯಂಥ ರೋಗ ಲಕ್ಷಣಗಳಿದ್ದರೂ ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಿರಲಿಲ್ಲ.
ಇದೀಗ ಯುವಕನ ಪೋಷಕರು ಧೈರ್ಯ ಹೇಳಿ ವೈದ್ಯಕೀಯ ಪರೀಕ್ಷೆಗೆ ಒಪ್ಪಿಸಿದ್ದಾರೆ. ಪರೀಕ್ಷೆ ಬಳಿಕ ಯುವಕನನ್ನು ವಿಜಯಪುರ ಜಿಲ್ಲಾಸ್ಪತ್ರೆ ಐಸೋಲೇಷನ್ ವಿಶೇಷ ಘಟಕದಲ್ಲಿ ಇರಿಸಿ ವೈದ್ಯಕೀಯ ನಿಗಾ ಇರಿಸಲಾಗಿದೆ.ಶಂಕಿತನ ಗಂಟಲು ದ್ರವ ಮಾದರಿಯನ್ನು ತಪಾಸಣೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಾವೇರಿಯಲ್ಲೂ ಇಬ್ಬರಿಗೆ ಕೊರೊನಾ ಶಂಕೆ: ಹಾನಗಲ್ಲ ಪಟ್ಟಣದ ವೃದ್ಧ ಹಾಗೂ ಆತನ 3 ವರ್ಷದ ಮೊಮ್ಮಗನಲ್ಲಿ ಶಂಕಿತ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿದ್ದು, ಇಬ್ಬರನ್ನೂ ಜಿಲ್ಲಾಸ್ಪತ್ರೆ ಪ್ರತ್ಯೇಕ ವಾರ್ಡ್‌ನಲ್ಲಿರಿಸಲಾಗಿದೆ. ಆರೋಗ್ಯಾಧಿಕಾರಿಗಳು ಈ ಇಬ್ಬರ ರಕ್ತ ಮತ್ತು ಕಫ ಮಾದರಿಯನ್ನು ಭಾನುವಾರ ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಶಂಕಿತ ಕೊರೊನಾ ಸೋಂಕು ಲಕ್ಷಣ ಹೊಂದಿರುವ ಅಜ್ಜ ಹಾಗೂ ಮೊಮ್ಮಗ ಹಾನಗಲ್ಲ ಪಟ್ಟಣದವರಾಗಿದ್ದಾರೆ. 60 ವರ್ಷದ ಈ ವೃದ್ಧ ಹಜ್ ಯಾತ್ರೆ ಮುಗಿಸಿ ಮಾ.3ರಂದು ಹುಬ್ಬಳ್ಳಿಗೆ ಬಂದಿದ್ದರು. ಅಲ್ಲಿ ಕೆಲ ದಿನ ಸಂಬಂಧಿ ಕರ ಮನೆಯಲ್ಲಿ ವಾಸವಾಗಿ ಮಾ.12ರಂದು ಹಾನಗಲ್ಲಿನ ಮನೆಗೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.