ಕೊರೊನಾಗೆ ಕರುನಾಡು ಭಣಭಣ
Team Udayavani, Mar 16, 2020, 3:10 AM IST
ಕೊರೊನಾ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಎಲ್ಲಾ ಸಾರ್ವಜನಿಕ ಕಾರ್ಯಕ್ರಮ, ಸಭೆ, ಸಮಾರಂಭ, ಮಾಲ್, ಥಿಯೇಟರ್‌ಗಳನ್ನು ಬಂದ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಲಾಗಿದೆ. ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳ ಭೇಟಿಯನ್ನು ಮುಂದೂಡುವಂತೆ ದೇವಾಲಯಗಳ ಆಡಳಿತ ಮಂಡಳಿಗಳು ಭಕ್ತರಿಗೆ ಮನವಿ ಮಾಡಿವೆ.
ದೊಡ್ಡ ದೊಡ್ಡ ಕಾರ್ಯಕ್ರಮಗಳು, ಮದುವೆ ಸಮಾರಂಭಗಳನ್ನು ಏರ್ಪಡಿಸಿ ತಮ್ಮ ಪ್ರತಿಷ್ಠೆ ಪ್ರದರ್ಶಿಸುತ್ತಿದ್ದ ಗಣ್ಯರು, ನಾಯಕರು ವೈರಸ್‌ಗೆ ಹೆದರಿ ಕಾರ್ಯಕ್ರಮಗಳನ್ನು ಸರಳ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಬಹುತೇಕ ಜಾತ್ರೆ, ರಥೋತ್ಸವ, ಸಭೆ, ಸಮಾರಂಭಗಳು ರದ್ದಾಗಿವೆ. ಹೀಗಾಗಿ, ಎಲ್ಲೆಡೆ ಅಘೋಷಿತ ಬಂದ್ ವಾತಾವರಣ ಕಂಡು ಬರುತ್ತಿದ್ದು, ಕರುನಾಡಿನ ಬಹುತೇಕ ಜನನಿಬಿಡ ಪ್ರದೇಶಗಳು ಜನರಿಲ್ಲದೆ ಭಣಗುಡುತ್ತಿವೆ.
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದ್ದು, ಪ್ರವಾಸಿ ತಾಣಗಳು ಬಿಕೋ ಎನ್ನುತ್ತಿವೆ. ಭಕ್ತರು ಕೂಡ ದೇವಾಲಯಗಳತ್ತ ಮುಖ ಮಾಡುತ್ತಿಲ್ಲ. ಹೀಗಾಗಿ, ಪ್ರವಾಸಿಗರನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಇಲ್ಲಿನ ವ್ಯಾಪಾರಸ್ಥರು ವ್ಯಾಪಾರವಿಲ್ಲದೆ ಕಂಗಾಲಾಗಿದ್ದಾರೆ.
ಉತ್ತರ ಕರ್ನಾಟಕದ ಐತಿಹಾಸಿಕ ಬಾದಾಮಿ, ಪಟ್ಟದಕಲ್ಲು, ಶಿವಯೋಗ ಮಂದಿರ, ಮಹಾಕೂಟ, ಹಂಪಿ, ಜೋಗ ಮತ್ತಿತರ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಲ್ಲ. ಸೋಂಕು ವಿದೇಶಿಗರಿಂದ ಹರಡುತ್ತದೆ ಎಂದು ಬಹುತೇಕರು ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿಲ್ಲ. ಬನಶಂಕರಿ ದೇವಸ್ಥಾನದಲ್ಲಿ ಪ್ರತಿನಿತ್ಯದ ಅನ್ನದಾಸೋ ಹವನ್ನೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಗುಳೇದಗುಡ್ಡ ಸಮೀಪದ ಕೆಲವಡಿ ಶ್ರೀಲಕ್ಷ್ಮೀ ರಂಗನಾಥಸ್ವಾಮಿ, ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಪಟ್ಟಲದಮ್ಮ, ಗೊರವನಹಳ್ಳಿ ಗ್ರಾಮದೇವತೆ ಮಾರಮ್ಮ, ಸೇರಿದಂತೆ ಬಹುತೇಕ ಕಡೆ ಜಾತ್ರೆ, ದೇವತಾ ಉತ್ಸವ, ಅಗ್ನಿಕೊಂಡೋತ್ಸವಗಳನ್ನೇ ರದ್ದು ಮಾಡಲಾಗಿದೆ. ಮಾ.22ರವರೆಗೆ ಅರಮನೆ, ಮೃಗಾಲಯ ಬಂದ್ ಮಾಡಲಾಗಿದ್ದು, ಮೈಸೂರು, ಪ್ರವಾಸಿಗರಿಲ್ಲದೇ ಬಿಕೋ ಎನ್ನುತ್ತಿದೆ.
ಹೀಗಾಗಿ, ಟಾಂಗಾ ಗಾಡಿ ಮಾಲೀಕರ ಬದುಕಿನ ಜಟಕಾ ಬಂಡಿ ಸಾಗದಾಗಿದೆ. ನಿತ್ಯ ಕುದುರೆಯೊಂದಕ್ಕೆ 300 ರೂ. ವ್ಯಯಿಸಬೇಕು. ಕುದುರೆಗೆ ಖರ್ಚು ಮಾಡಲಿಕ್ಕೂ ಹಣ ದುಡಿಯೋಕಾಗುತ್ತಿಲ್ಲ. ಯಾವೊಬ್ಬ ಪ್ರವಾಸಿಗನೂ ಟಾಂಗಾ ಗಾಡಿ ಏರುವ ಯೋಚನೆಯನ್ನೇ ಮಾಡುತ್ತಿಲ್ಲ ಎಂಬುದು ಟಾಂಗಾವಾಲರ ಅಳಲು.
ಲೈಟಿಂಗ್ಸ್, ಬೋಟಿಂಗ್ ಸ್ಥಗಿತ: ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ಕೆಆರ್‌ಎಸ್ ಬೃಂದಾವನದಲ್ಲಿ ರಾತ್ರಿ ವೇಳೆ ಕಾರಂಜಿಗೆ ಅಳವಡಿಸಿದ್ದ ಬಣ್ಣ, ಬಣ್ಣದ ಲೈಟಿಂಗ್ಸ್ ಹಾಗೂ ಎಂಡಿಎಫ್ ಸೌಂಡ್ಸ್ ಅನ್ನು ಸ್ಥಗಿತಗೊಳಿಸಲಾಗಿದೆ.
ರಂಗನತಿಟ್ಟು ಪಕ್ಷಿಧಾಮಕ್ಕೆ ನಿತ್ಯ 2-3 ಸಾವಿರ ಪ್ರವಾಸಿಗರು ಆಗಮಿಸಿ ದರೆ, ಕೆಆರ್‌ಎಸ್ ಬೃಂದಾವನ ವೀಕ್ಷಣೆಗೆ ಕನಿಷ್ಠ 5 ಸಾವಿರ ಮಂದಿ ಪ್ರವಾಸಿಗರು ಆಗಮಿಸುತ್ತಿದ್ದರು. ಎರಡು ಪ್ರವಾಸಿ ತಾಣಗಳ ಪ್ರವೇಶ ಶುಲ್ಕದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಿತ್ಯ ಹರಿದು ಬರುತ್ತಿದ್ದ ಲಕ್ಷಾಂತರ ರೂ. ನಷ್ಟವಾಗಿದೆ.
ಇದೇ ವೇಳೆ, ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ, ನಿಮಿಷಾಂಬ ದೇವಾಲಯ, ಬಲಮುರಿ, ಎಡಮುರಿ, ಸ್ನಾನಘಟ್ಟ ಸೇರಿದಂತೆ ಕಾವೇರಿ ನದಿ ತೀರದ ಪ್ರದೇಶಗಳಿಗೂ ಪ್ರವಾಸಿಗರು ಸುಳಿಯುತ್ತಿಲ್ಲ. ನಂಜನಗೂಡು ಶ್ರೀಕಂಠೇಶ್ವರಸ್ವಾಮಿ, ಮಲೆ ಮಹದೇಶ್ವರ ಸ್ವಾಮಿ, ಕೊಲ್ಲೂರು ಮೂಕಾಂಬಿಕೆ, ಶೃಂಗೇರಿ, ಗೋಕರ್ಣ ಸೇರಿದಂತೆ ರಾಜ್ಯದ ಬಹುತೇಕ ದೇವಾಲಯಗಳಲ್ಲಿ ಭಕ್ತರ ಆಗಮನದಲ್ಲಿ ಕಡಿತವಾಗಿದೆ.
ಸಫಾರಿ ಬಂದ್: ಮಾ.22ರವರೆಗೆ ಬಂಡೀಪುರದಲ್ಲಿ ಸಫಾರಿ ನಿಷೇಧಿಸಲಾಗಿದ್ದು, ಸುತ್ತಮುತ್ತಲಿನ ರೆಸಾರ್ಟುಗಳನ್ನು ಬಂದ್ ಮಾಡಲಾಗಿದೆ. ಬಂಡೀಪುರ ಸುತ್ತಲಿನ ಕಂಟ್ರಿ ಕ್ಲಬ್, ಸರಾಯ್, ವಿಂಡ್ ಫ್ಲವರ್, ಜಂಗಲ್ ಲಾಡ್ಜ್ ಸೇರಿದಂತೆ ಪ್ರತಿಷ್ಠಿತ ರೆಸಾರ್ಟ್‌ಗಳು ಗ್ರಾಹಕ ರಿಲ್ಲದೆ ಭಣಗುಡುತ್ತಿವೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಮಾ.22 ರವರೆಗೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ, ಭಾನುವಾರ ವೀರನಹೊಸಹಳ್ಳಿಯಲ್ಲಿ ಕೇವಲ 15 ಮಂದಿ ಮಾತ್ರ ಸಫಾರಿಗೆ ತೆರಳಿದ್ದರು. ನಾಗರಹೊಳೆ ಉದ್ಯಾನದಂಚಿನಲ್ಲಿನ ಜೆಎಲ್‌ಆರ್, ಕಿಂಗ್ಸ್ ಕೋರ್ಟ್ ಹಾಗೂ ಜಂಗಲ್ ಇನ್ ರೆಸಾರ್ಟ್‌ಗಳಲ್ಲಿಯೂ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.
ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಎಲ್ಲಾ ನಿಲ್ದಾಣಗಳಲ್ಲಿಯೂ ಗೃಹ ಇಲಾಖೆಯಿಂದ ಕೊರೊನಾ ವೈರಸ್ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.ಆರೋಗ್ಯ ದೃಷ್ಟಿಯಿಂದ ಸಾರ್ವಜನಿಕರು ಸ್ವತ್ಛತೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.
-ಬಸವರಾಜ ಬೊಮ್ಮಾಯಿ, ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.