ಕರಡಿ ದಾಳಿ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಕಾಡಿನಲ್ಲಿ ಗುಂಡಿಕ್ಕಿ ಕೊಂದ ಐವರ ಸೆರೆ
Team Udayavani, Mar 16, 2020, 10:48 AM IST
ಬೆಳಗಾವಿ: ಖಾನಾಪುರದ ಅರಣ್ಯ ಪ್ರದೇಶದಲ್ಲಿ ವಾರದ ಹಿಂದೆ ವ್ಯಕ್ತಿಯೋರ್ವ ಕರಡಿ ದಾಳಿಯಿಂದ ಮೃತಪಟ್ಟಿದ್ದಾನೆ ಎಂದುಕೊಂಡಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಈ ವ್ಯಕ್ತಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಖಾನಾಪುರ ತಾಲೂಕಿನ ಅಮಟೆ ಗ್ರಾಮದ ದೇವಿದಾಸ ರಾಜಾರಾಮ ಗಾವಕರ, ಸಂತೋಷ ಸೋಮಾ ಗಾವಕರ, ವಿಠ್ಠಲ ಗಣಪತಿ ನಾಯಕ, ರಾಮಾ ಗಣಪತಿ ನಾಯಕ ಹಾಗೂ ಜಾಂಬೋಟಿಯ ಪ್ರಶಾಂತ ಗಣಪತಿ ಸುತಾರ ಎಂಬವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಮೂರು ಬಂದೂಕು, ಕಾಡತೂಸು ಹಾಗೂ ಎರಡು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ಮಾ. 11ರಂದು ಅಮಟೆ ಗ್ರಾಮದ ಹೊರವಲಯದಲ್ಲಿರುವ ಅರಣ್ಯ ಪ್ರದೇಶದಲ್ಲಿ ದನ ಕರುಗಳನ್ನು ಮೇಯಿಸಲು ಹೋಗಿದ್ದ ತಾನಾಜಿ ಟೋಪಾ ನಾಯಕ ಎಂಬಾತನ ಮೇಲೆ ಕರಡಿ ದಾಳಿ ನಡೆಸಲಾಗಿದೆ ಎಂದು ಈತನ ಪತ್ನಿ ತೇಜಸ್ವಿನಿ ತಾನಾಜಿ ನಾಯಕ ಖಾನಾಪುರ ಠಾಣೆಯಲ್ಲಿ ದೂರು ನೀಡಿದ್ದಳು. ನಂತರ ಸಂಶಯಗೊಂಡು ಮಾ. 14ಕ್ಕೆ ಬಂದು ತನ್ನ ಪತಿಯ ಸಾವಿನಲ್ಲಿ ಶಂಕೆ ಇದ್ದು, ಹೀಗಾಗಿ ಪತಿಯನ್ನು ಹತ್ಯೆ ಮಾಡಲಾಗಿದೆ ಎಂದು ದೂರು ನೀಡಿದ್ದಳು.
ಬೈಲಹೊಂಗಲ ಡಿಎಸ್ ಪಿ ಜೆ.ಎಂ. ಕರುಣಾಕರಶೆಟ್ಟಿ ನೇತೃತ್ವದಲ್ಲಿ ಖಾನಾಪುರ ಸಿಪಿಐ ಸುರೇಶ ಶಿಂಗಿ, ಪಿಎಸ್ ಐ ಬಸನಗೌಡ ಪಾಟೀಲ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.