ಗ್ರಾಮದೇವಿ ದೇಗುಲದಲ್ಲಿ ಸಪ್ತಪದಿ
Team Udayavani, Mar 16, 2020, 11:12 AM IST
ಕಲಘಟಗಿ: ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪಟ್ಟಣದ ಗ್ರಾಮದೇವಿ ದೇವಸ್ಥಾನದ ಸಹಯೋಗದೊಂದಿಗೆ ಏ. 26 ರಂದು ಪಟ್ಟಣದ ಹೊರವಲಯದಲ್ಲಿರುವ ಹನ್ನೆರಡು ಮಠದ ಆವರಣದಲ್ಲಿ ಸಪ್ತಪದಿ ಸಾಮೂಹಿಕ ಸರಳ ವಿವಾಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಸಿ.ಎಂ.ನಿಂಬಣ್ಣವರ ತಿಳಿಸಿದರು.
“ಸಪ್ತಪದಿ’ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ಯಶಸ್ಸಿಗಾಗಿ ತಾಪಂ ಸಭಾಭವನದಲ್ಲಿ ಆಯೋಜಿಸಿದ್ದ ತಾಲೂಕಿನ ಎಲ್ಲ ಇಲಾಖೆಗಳ ಅನುಷ್ಠಾನ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರೆಲ್ಲರೂ ಒಂದೇ ಎಂದು ಸರಳತೆ ಮತ್ತು ಸಜ್ಜನತೆಯನ್ನು ತೋರುವ ನಿಟ್ಟಿನಲ್ಲಿ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಸರಕಾರದಿಂದ ಆಯೋಜಿಸಲಾಗುತ್ತಿದೆ.
ಈ ಕಾರ್ಯಕ್ರಮದಡಿ ಮದುವೆಯಾಗುವ ವಧು-ವರರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ವರನಿಗೆ 5 ಸಾವಿರ, ವಧುವಿಗೆ 10 ಸಾವಿರ ಮತ್ತು ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಸೇರಿ 40 ಸಾವಿರ ರೂ. ಹೀಗೆ ಒಂದು ಜೋಡಿಗೆ ಅಂದಾಜು 55 ಸಾವಿರ ರೂ. ವೆಚ್ಚ ಮಾಡಲಾಗುತ್ತದೆ ಎಂದರು.
ಸಾರ್ವಜನಿಕರಲ್ಲಿ ಈ ಕಾರ್ಯಕ್ರಮದ ಕುರಿತು ಮಾಹಿತಿ ತಲುಪಿಸುವ ಅಗತ್ಯತೆ ಇದ್ದು, ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಸಂಘ-ಸಂಸ್ಥೆಯವರು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಆರ್ಥಿಕ ದುರ್ಬಲರ ಮೊಗದಲ್ಲಿ ಸಂತೋಷವನ್ನು ಕಾಣಲು ಮುಂದಾಗಬೇಕೆಂದರು. ಈಗಾಗಲೇ ಸಪ್ತಪದಿ ಸಾಮೂಹಿಕ ಸರಳ ವಿವಾಹ ಪ್ರಚಾರದ ರಥಕ್ಕೆ ಚಾಲನೆ ನೀಡಲಾಗಿದ್ದು, ತಾಲೂಕಿನಾದ್ಯಂತ ಸಂಚರಿಸಲಿದೆ. ಸರ್ಕಾರದ ನಿಯಮದಂತೆ ವಿವಾಹವಾಗುವ ಗಂಡಿಗೆ 21 ವರ್ಷ ಹಾಗೂ ಹೆಣ್ಣುಮಗಳಿಗೆ 18 ವರ್ಷ ತುಂಬಿರಬೇಕು. ಅಗತ್ಯ ದಾಖಲೆಗಳೊಂದಿಗೆ ವಧು-ವರರು ಮಾ. 27ರ ಒಳಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಥವಾ ತಹಶೀಲ್ದಾರ್ ಕಚೇರಿಯಲ್ಲಿ ನೋಂದಾಯಿಸಿ ಕೊಳ್ಳಬೇಕೆಂದು ತಿಳಿಸಿದರು.
ತಾಪಂ ಅಧ್ಯಕ್ಷೆ ಸುನಿತಾ ಮ್ಯಾಗಿನಮನಿ, ಉಪಾಧ್ಯಕ್ಷ ಚಂದ್ರಗೌಡ ಪಾಟೀಲ, ಸ್ಥಾಯಿ ಸಮಿತಿಯ ರಾಜು ವಾಲಿಕಾರ, ಸದಸ್ಯರಾದ ವಿಜಯಲಕ್ಷ್ಮೀ ಆಡಿನವರ, ಕವಿತಾ ಬಡಿಗೇರ, ಸಿದ್ಧಲಿಂಗ ಕುಂಬಾರ, ಈರಯ್ಯ ಸಿದ್ದಾಪುರ, ತಹಶೀಲ್ದಾರ್ ಅಶೋಕ ಶಿಗ್ಗಾವಿ, ಪಪಂ ಮುಖ್ಯಾಧಿಕಾರಿ ಬಿ. ಚಂದ್ರಶೇಖರ, ಸಹಾಯಕ ಕೃಷಿ ನಿರ್ದೇಶಕ ಎಂ.ಎಫ್. ಕಟ್ಟೇಗೌಡರ, ಜಿಪಂ ಮಾಜಿ ಸದಸ್ಯ ವೈ.ಬಿ. ದಾಸನಕೊಪ್ಪ, ಮಾಂತೇಶ ತಹಶೀಲ್ದಾರ, ವಜ್ರಕುಮಾರ ಮಾದನಭಾವಿ, ಪಪಂ ಸದಸ್ಯ ಕೃಷ್ಣಾ ತಹಶೀಲ್ದಾರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.