ಶೇ.50ರಷ್ಟು ಜನರು ಬಳಸಲ್ಲ ಶೌಚಾಲಯ

ಕೊಂಕಲ್‌ ವ್ಯಾಪ್ತಿಯಲ್ಲಿ 845 ಶೌಚಾಲಯ ನಿರ್ಮಾಣ

Team Udayavani, Mar 16, 2020, 12:24 PM IST

16-March-8

ವಡಗೇರಾ: ಪ್ರಸ್ತುತ ಶೌಚಾಲಯ ಎಲ್ಲರಿಗೂ ಅತ್ಯಗತ್ಯ. ಇದನ್ನು ತಿಳಿದರೂ ಜನರು ಶೌಚಾಲಯ ಸುವ್ಯವಸ್ಥಿತ ನಿರ್ಮಾಣ ಹಾಗೂ ಬಳಕೆಗೆ ಮುಂದಾಗುತ್ತಿಲ್ಲ. ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸರ್ಕಾರ ಪ್ರೋತ್ಸಾಹಧನ ನೀಡುತ್ತಿದೆ. ಅದಕ್ಕೆ ಒಂದು ಪೈಸೆಯೂ ಸೇರಿಸಿ ನಿರ್ಮಿಸಿಕೊಳ್ಳದೇ ಪ್ರೋತ್ಸಾಹ ಧನದಲ್ಲಿಯೇ ಶೌಚಗೃಹ ನಿರ್ಮಾಣ ಮಾಡಿಕೊಳ್ಳುವ ಇರಾದೆ ಹೊಂದಿದ್ದಾರೆ.

ವಡಗೇರಾ ತಾಲೂಕು ಕೊಂಕಲ್‌ ಗ್ರಾಪಂ ವ್ಯಾಪ್ತಿಯ ಅನಕಸೂಗರ,  ರಿಹಾಳ, ಗೊಂದೆನೂರು, ಚನ್ನೂರು, ಕೂಂಕಲ್‌ ಗ್ರಾಮಗಳಲ್ಲಿ ಒಟ್ಟು 1400 ಕುಟುಂಬಗಳಿದ್ದು, 9 ಸಾವಿರದಷ್ಟು ಜನಸಂಖ್ಯೆ ಇದೆ. ಆದರೆ ಇಲ್ಲಿ ಒಟ್ಟು 845 ವೈಯಕ್ತಿಕ ಶೌಚಾಲಯಗಳು ನಿರ್ಮಾಣವಾಗಿವೆ. ಇದರಲ್ಲಿ ಶೇ.50ರಷ್ಟು ಜನರು ಶೌಚಾಲಯ ಬಳಸುತ್ತಿಲ್ಲ ಎನ್ನುವುದು ದುರಾದೃಷ್ಟ.

ಇನ್ನೂ ಸ್ವಂತ ಜಾಗವಿಲ್ಲದ ಜನರು ಶೌಚಾಲಯ ನಿರ್ಮಿಸಿಕೊಳ್ಳಲು ಆಗುತ್ತಿಲ್ಲ. ಅಂಥವರಿಗಾಗಿ ಸರ್ಕಾರ ಸಮುದಾಯ ಶೌಚಾಲಯ ಯೋಜನೆ ಜಾರಿಗೊಳಿಸಿದೆ. ಆದರೆ ಈ ಗ್ರಾಪಂ ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯಗಳ ನಿರ್ಮಾಣ ಮಾಡಿಲ್ಲ ಎಂದು ಜನರು ಬೇಸರ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಮಹಿಳೆಯರು ತೀವ್ರ ಮುಜುಗರ ಅನುಭವಿಸುವಂತಾಗಿದೆ.

ಶೌಚಾಲಯ ಇಲ್ಲದಿರುವುದು ಒಂದು ಕಡೆಯಾದರೆ, ನಿರ್ಮಾಣ ಗೊಂಡಿರುವ ಶೌಚಾಲಯಗಳಲ್ಲಿ ಶುಚಿತ್ವ ಕಾಪಾಡದಿರುವುದರಿಂದ ಅವುಗಳು ಕೂಡ ಬಳಕೆಗೆ ಬಾರದಂತಾಗಿವೆ. ಕೆಲವು ಶೌಚಾಲಯಗಳು ಜಾನುವಾರುಗಳಿಗೆ ಮೇವು ಇಡುವುದಕ್ಕೆ ಮತ್ತು ಅಡುಗೆ ಮಾಡುವುದಕ್ಕೆ ಕಟ್ಟಿಗೆಗಳನ್ನು ಸಂಗ್ರಹಿಸುವ ಕೊಠಡಿಗಳಾಗಿ ಮಾರ್ಪಟ್ಟಿವೆ.

ಶೌಚಾಲಯಗಳಿದ್ದರೂ ಅವುಗಳ ಸದ್ಬಳಕೆಯಾಗುತ್ತಿಲ್ಲ. ಹಾಗಾಗಿ ಸಾರ್ವಜನಿಕರು ಬಯಲನ್ನು ಮರೆತಿಲ್ಲ. ನೂತನ ಶೌಚಾಲಯಗಳು ಕೂಡ ಗಬ್ಬುನಾರುತ್ತಿವೆ. ರೆಡಿಮೇಡ್‌ ಶೌಚಾಲಯಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಗ್ರಾಪಂ ಅಧಿಕಾರಿಗಳು ಸ್ಥಳ ಪರಿಶೀಲಿಸದೇ ಬಿಲ್‌ ಪಾವತಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೇವಲ ನಾಮಕೇ ವಾಸ್ತೆ ಎನ್ನುವಂತೆ ಶೌಚಾಲಯಗಳು ನಿರ್ಮಾಣವಾಗಿವೆ. ಆದರೆ ಬಳಕೆಗೆ ಬಾರದಂತಾಗಿವೆ. ಈ ಬಗ್ಗೆ ಸಾರ್ವಜನಿಕರು ವೈಯಕ್ತಿಕ ಶೌಚಾಲಯ ಬಳಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಜಾಗೃತಿ ಮೂಡಿಸಬೇಕಿದೆ.

ಗ್ರಾಮದಲ್ಲಿ ಮಹಿಳೆಯರು ನಿತ್ಯ ಬಯಲಿಗೆ ತೆರಳಬೇಕಿದೆ. ಯಾವಾಗ ಕತ್ತಲಾಗುತ್ತದೋ ಎನ್ನುವುದನ್ನು ಕಾಯಬೇಕಿದೆ. ಜಮೀನುಗಳಲ್ಲಿ ಹೋಗಲು ಸೋಲಾರ್‌ ವಿದ್ಯುತ್‌ ಉತ್ಪನ್ನ ಮಾಡುವ ಉಪಕರಣಗಳಿವೆ. ಮಹಿಳೆಯರು ಸಾಮೂಹಿಕ ಶೌಚಾಲಯವಿಲ್ಲದೇ ತೀವ್ರ ಮುಜುಗರ ಅನುಭವಿಸುವಂತಾಗಿದೆ. ಸಮುದಾಯ ಶೌಚಾಲಯ ನಿರ್ಮಿಸಿಕೊಡಬೇಕು.
ಮಲ್ಲಮ್ಮ ಅನಕಸೂಗೂರ,
ಗ್ರಾಮಸ್ಥೆ

ಬೇಸ್‌ ಲೈನ್‌ ಸರ್ವೆಯಿಂದ ಹೊರಗುಳಿದ ಕುಟುಂಬಗಳ 208 ಅರ್ಜಿ ಪಡೆಯಲಾಗಿದೆ. ನಿವೇಶನದ ಸಮಸ್ಯೆಯಿದೆ ಮತ್ತು ಹೊಸದಾಗಿ ಶೌಚಾಲಯ ನಿರ್ಮಿಸಿಕೊಳ್ಳುವವರಿಗೆ ಅರ್ಜಿ ಕರೆಯಲಾಗಿದೆ. ಬಯಲು ಮುಕ್ತ ಗ್ರಾಮ ಪಂಚಾಯಿತಿನ್ನಾಗಿಸಲು ಗುರಿ ಹೊಂದಿದ್ದೇವೆ.
ಪವೀಣಕುಮಾರ,
ಪಿಡಿಒ ಕೊಂಕಲ್‌

ನಿಂಗಣ್ಣ ಕುರಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.