ಖಾಸಗಿ ಕಂಪನಿಗೆ ನೀರಿನ ಘಟಕ ನಿರ್ವಹಣೆ ಹೊಣೆ
Team Udayavani, Mar 16, 2020, 3:45 PM IST
ಸಾಂದರ್ಭಿಕ ಚಿತ್ರ
ರಾಮದುರ್ಗ: ಮೂಲ ಸೌಕರ್ಯ ಒದಗಿಸಿ ಗ್ರಾಮೀಣ ಜನತೆಗೆ ಆರೋಗ್ಯಯುತ ಬದುಕನ್ನು ಕಲ್ಪಿಸುವುದು ಸರಕಾರದ ಕೆಲಸ. ಆ ನಿಟ್ಟಿನಲ್ಲಿ ಸರಕಾರ ಕಡಿಮೆ ದರದಲ್ಲಿ ಗ್ರಾಮೀಣ ಮಟ್ಟದಲ್ಲಿ ಶುದ್ಧ ಕುಡಿಯುವ ನೀರು ದೊರಕಲಿ ಎಂಬ ಉದ್ದೇಶದಿಂದ ಪ್ರತಿಯೊಂದು ಹಳ್ಳಿಗೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಆದರೆ ಸ್ಥಳೀಯ ಆಡಳಿತ ಯಂತ್ರದ ನಿಷ್ಕಾಳಜಿತನದಿಂದ ಹಾಗೂ ನಿರ್ವಹಣೆ ಕೊರತೆಯಿಂದಾಗಿ ಎಲ್ಲ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ.
ತಾಲೂಕಿನ 37 ಗ್ರಾಪಂಗಳಲ್ಲಿ 131 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಅವುಗಳಲ್ಲಿ 28 ಘಟಕಗಳು ಪ್ರಾರಂಭಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಪ್ರಾರಂಭಗೊಂಡಿರುವ 103 ಘಟಕಗಳು ನಿರ್ವಹಣೆ ತೊಂದರೆಯಿಂದಾಗಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ ಕೊಳವೆ ಬಾವಿಗಳ ನೀರಿಗೆ ಮೊರೆ ಹೋಗಬೇಕಾದ ಪರಿಸ್ಥಿತಿ ಬಂದಿದೆ ಎಂದು ಸ್ಥಳೀಯರು ಆರೋಪ.
ಪ್ಲೋರೈಡ್ ನೀರಿನ ಬಳಕೆಯಿಂದಾಗಿ ಜನರು ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಿರುವುದನ್ನು ಅರಿತ ಸರಕಾರ ಜನತೆಯ ಆರೋಗ್ಯ ರಕ್ಷಿಸುವ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಸಾವಿರಾರು ಕೋಟಿ ಹಣ ವಿನಿಯೋಗಿಸುತ್ತಿದೆ. ಆದರೆ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಸರಕಾರಿ ಯೋಜನೆಗಳು ಸಫಲತೆ ಕಾಣುವಲ್ಲಿ ವಿಫಲವಾಗಿವೆ ಎಂಬುದಕ್ಕೆ ಶುದ್ಧ ಕುಡಿಯುವ ನೀರಿನ ಘಟಕಗಳೇ ಸಾಕ್ಷಿ. ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವ ದೃಷ್ಟಿಯಿಂದ ಖಾಸಗಿ ಕಂಪನಿಗಳಿಗೆ ಗುತ್ತಿಗೆ ನೀಡಲಾಗಿದ್ದರೂ ಅವರು ಸಹ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದರಿಂದಾಗಿ ಇನ್ನೂ ಅನೇಕ ಹಳ್ಳಿಗಳ ಜನರು ಶುದ್ಧ ಕುಡಿಯುವ ನೀರಿಗಾಗಿ ಪರಿತಪಿಸಬೇಕಾಗಿದೆ. ಅಧಿಕಾರಿಗಳ ಲೆಕ್ಕದಲ್ಲಿ ಬಹುತೇಕ ಘಟಕಗಳು ಪ್ರಾರಂಭವಾಗಿವೆ ಎಂದು ಹೇಳಿದರೂ ವಾಸ್ತವ ಬೇರೆಯಾಗಿದೆ.
ವರ್ಷವಾದರೂ ಪ್ರಾರಂಭಗೊಳ್ಳದ ಘಟಕಗಳು: ಶುದ್ಧ ಕುಡಿಯುವ ನೀರಿರ ಘಟಕಗಳನ್ನು ನಿರ್ಮಿಸಿ ವರ್ಷವಾದರೂ ಇನ್ನೂ ಅಂದಾಜು 28 ಘಟಕಗಳು ಪ್ರಾರಂಭಗೊಂಡಿಲ್ಲ. ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರೆ ಕೆಲ ತಾಂತ್ರಿಕ ತೊಂದರೆಗಳಿಂದ ವಿಳಂಬವಾಗಿದೆ. ಆದಷ್ಟು ಬೇಗ ಪ್ರಾರಂಭಿಸಲಾಗುವುದು ಎಂಬ ಭರವಸೆ ನೀಡುತ್ತಿದ್ದಾರೆ.
ನಿರ್ವಹಣೆ ಜವಾಬ್ದಾರಿ: ಈ ಹಿಂದ ಬೇರೆ-ಬೇರೆ ಕಂಪನಿಗಳಿಗೆ ನಿರ್ವಹಣೆ ಜವಾಬ್ದಾರಿ ನೀಡಲಾಗಿತ್ತು. ಅವು ಸರಿಯಾಗಿ ನಿರ್ವಹಣೆ ಮಾಡದ ಕಾರಣದಿಂದಾಗಿ ಅವುಗಳನ್ನು ತೆಗೆದು ಹಾಕಿ 131 ಘಟಕಗಳಲ್ಲಿ 88 ಘಟಕಗಳನ್ನು ಗುಡ್ ವ್ಹಿಲ್ ಕಂಪನಿಗೆ ಎರಡು ದಿನಗಳ ಹಿಂದೆ ಟೆಂಡರ್ ನೀಡಲಾಗಿದೆ. ಇನ್ನೂಳಿದ 43 ಘಟಕಗಳನ್ನು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ನಿರ್ವಹಿಸಲಾಗುತ್ತಿದೆ.
ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಪಿಡಿಒಗಳಿಗೆ ಸೂಚಿಸಲಾಗಿದೆ. ಈ ಹಿಂದೆ ಗುತ್ತಿಗೆ ಪಡೆದ ಕೆಲ ಕಂಪನಿಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡದ ಕಾರಣದಿಂದಾಗಿ ಇನ್ನೂ ಕೆಲ ಘಟಕಗಳು ಪ್ರಾರಂಭವಾಗಿಲ್ಲ. ಈಗ ಅದನ್ನು ಬೇರೆ ಕಂಪನಿಗಳಿಗೆ ಟೆಂಡರ್ ನೀಡಲಾಗಿದ್ದು,ತ್ವರಿತಗತಿಯಲ್ಲಿ ಸರಿಪಡಿಸಿ ಸಾರ್ವಜನಿಕರಿಗೆ ನೀರು ದೊರೆಯುವಂತೆ ಮಾಡಲಾಗುವುದು. -ಮುರಳಿಧರ ದೇಶಪಾಂಡೆ, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ ರಾಮದುರ್ಗ
-ಈರನಗೌಡ ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.