84 ಕೋಟಿ ಎಸ್‌ಡಿಆರ್‌ಎಫ್ ನಿಧಿ ಬಳಸಲು ಕೇಂದ್ರದ ಸೂಚನೆ
Team Udayavani, Mar 16, 2020, 7:51 PM IST
ಬೆಂಗಳೂರು: ಕರೊನಾ ವೈರಸ್ ನಿಯಂತ್ರಣಕ್ಕೆ 84 ಕೋಟಿ ರೂ.ಖರ್ಚು ಮಾಡಲು ರಾಜ್ಯಕ್ಕೆ ಕೇಂದ್ರ ಗೃಹ ಇಲಾಖೆ ನಿರ್ದೇಶನ ನೀಡಿದೆ .
ಕಂದಾಯ ಸಚಿವ ಆರ್. ಅಶೋಕ್ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಕೃತಿ ವಿಕೋಪ ನಿರ್ವಹಣಾ ನಿಧಿಯಲ್ಲಿ ಮೀಸಲಿರುವ 84 ಕೋಟಿ ಖರ್ಚು ಮಾಡಲು ಕಂದಾಯ ಇಲಾಖೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕರೊನಾ ನಿಯಂತ್ರಣಕ್ಕೆ ಬೇಕಾದ ಔಷಧ, ಸ್ವಚ್ಚತೆ, ಸ್ಯಾನಿಟೇಷನ್, ಉಪಕರಣಗಳ ಖರೀದಿ, ಪೊಲೀಸ್ ಭದ್ರತೆ ಹಾಗೂ ಅಗ್ನಿಶಾಮಕ ಇಲಾಖೆಗೆ ಹಣ ಬಳಕೆ ಮಾಡಲು ಎಸ್‌ಡಿಆರ್‌ಎಫ್ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಎಸ್ ಡಿ ಆರ್ ಎಫ್ ಮೀಸಲು ಹಣದಲ್ಲಿ ಶೇ.25ರಷ್ಟು ಹಣ ಬಳಸಲು ಕೇಂದ್ರ ಅನುಮತಿ ದೊರೆತಿದೆ. ಕರೊನಾ ವೈರಸ್ ರಾಷ್ಟ್ರೀಯ ವಿಪತ್ತು ಎಂಬ ಕಾರಣಕ್ಕೆ ಕೇಂದ್ರದ ಹಣ ಬಳಕೆಗೆ ಅನುಮತಿ ನೀಡಲಾಗಿದೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಜತೆ ಸಭೆ ನಡೆಸಿ ಹಣ ಬಳಕೆ ಕುರಿತು ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗುವುದು. ಇದುವರೆಗೆ ರಾಜ್ಯ ಸರ್ಕಾರವೇ ಹಣ ಖರ್ಚು ಮಾಡಬೇಕಿತ್ತು. ಈಗ ಕೇಂದ್ರದ ಹಣ ಖರ್ಚು ಮಾಡಲು ಅನುಮತಿ ನೀಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.