ಕಂಕನಾಡಿ ಹಳೆ ಮಾರುಕಟ್ಟೆ ಶೀಘ್ರ ತೆರವು; ತಾತ್ಕಾಲಿಕ ಮಾರುಕಟ್ಟೆ ಸಿದ್ಧ

Team Udayavani, Mar 17, 2020, 4:58 AM IST

KANKANADY-MARKET

ಮಹಾನಗರ: ಹಲವು ಸಮಸ್ಯೆಗಳಿಂದ ನಲುಗುತ್ತಿರುವ ಕಂಕನಾಡಿಯ ಹಳೆ ಮಾರುಕಟ್ಟೆಯನ್ನು ಕೆಡವಿ ಸುಮಾರು 41 ಕೋ.ರೂ. ವೆಚ್ಚದಲ್ಲಿ ಹೊಸ ಮಾರುಕಟ್ಟೆ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಿಸುವ ಮಂಗಳೂರು ಪಾಲಿಕೆಯ ಪ್ರಸ್ತಾವನೆ ಇದೀಗ ಅನುಷ್ಠಾನ ಹಂತಕ್ಕೆ ಬಂದಿದೆ.

ಹೊಸ ಮಾರುಕಟ್ಟೆ ನಿರ್ಮಾಣ ಹಿನ್ನೆಲೆ ಯಲ್ಲಿ ಹಳೆ ಮಾರುಕಟ್ಟೆಯನ್ನು ಕೆಡವಿ ತೆರವುಗೊಳಿಸುವ ಪ್ರಕ್ರಿಯೆ ಶೀಘ್ರದಲ್ಲಿ ನಡೆಯಲಿದ್ದು, ಪರ್ಯಾಯವಾಗಿ ಮಾರಾಟಗಾರರಿಗೆ ತಾತ್ಕಾಲಿಕ ಮಾರು ಕಟ್ಟೆಯನ್ನು ಹತ್ತಿರದ ಬಸ್‌ನಿಲ್ದಾಣದ ಒಂದು ಭಾಗದಲ್ಲಿ ಸಿದ್ಧಗೊಳಿಸಲಾಗಿದೆ.

1 ಕೋ.ರೂ. ವೆಚ್ಚದಲ್ಲಿ ತಾತ್ಕಲಿಕ ಮಾರುಕಟ್ಟೆ
ಹಳೆಯ ಕಟ್ಟಡದಲ್ಲಿರುವ ವ್ಯಾಪಾರಿಗಳ ಅನುಕೂಲಕ್ಕಾಗಿ ಸುಮಾರು 1 ಕೋ.ರೂ. ವೆಚ್ಚದಲ್ಲಿ ಕೆಲವು ತಿಂಗಳ ಹಿಂದೆ ಆರಂಭಿಸಿದ್ದ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಮುಗಿದಿದೆ. ಹಳೆಯ ಮಾರುಕಟ್ಟೆಯಲ್ಲಿರುವವರು ತಾತ್ಕಾಲಿಕ ಮಾರುಕಟ್ಟೆಗೆ ತೆರಳುವಂತೆ ಈಗಾಗಲೇ ಪಾಲಿಕೆಯಿಂದ ಸೂಚನೆ ನೀಡಲಾಗಿದೆ. ತತ್‌ಕ್ಷಣವೇ ತಾತ್ಕಾಲಿಕ ಮಾರುಕಟ್ಟೆಗೆ ಸ್ಥಳಾಂತರ ಆಗುವಂತೆ ವ್ಯಾಪಾರಿಗಳಿಗೆ ಪಾಲಿಕೆ ಸೂಚಿಸಿದೆ. ಹಳೆಮಾರುಕಟ್ಟೆಯಲ್ಲಿ ಒಟ್ಟು 98 ಅಂಗಡಿ ಮಳಿಗೆಗಳು ಮತ್ತು ಮಧ್ಯೆ ಮೀನು ಮಾರುಕಟ್ಟೆಯಿದೆ. ಅದಕ್ಕೆ ಪೂರಕವಾಗಿ ಹೊಸ ತಾತ್ಕಾಲಿಕ ಮಾರು ಕಟ್ಟೆಯಲ್ಲಿಯೂ ಪುಟ್ಟ ಗಾತ್ರದ 98 ಅಂಗಡಿ ಮಳಿಗೆಗಳನ್ನು ಮತ್ತು ಪ್ರತ್ಯೇಕ ಮೀನು ಮಾರುಕಟ್ಟೆ ನಿರ್ಮಿಸಲಾಗಿದೆ.

24 ವರ್ಷಗಳ ಹಳೆಯ ಮಾರುಕಟ್ಟೆ
ಕಂಕನಾಡಿಯ ಈಗಿನ ಮಾರುಕಟ್ಟೆಯು ಸುಮಾರು 24 ವರ್ಷಗಳ ಹಳೆಯದಾಗಿದೆ. ಇಲ್ಲಿ ಮೂಲ ಸೌಕರ್ಯದ ಕೊರತೆ ಇದೆ. ವ್ಯಾಪಾರಿಗಳು, ಗ್ರಾಹಕರಿಗೆ ಅಗತ್ಯದ ವ್ಯವಸ್ಥೆಗಳು ಇಲ್ಲಿ ಸೂಕ್ತ ರೀತಿಯಲ್ಲಿ ಲಭ್ಯವಿಲ್ಲ.

ಜತೆಗೆ, ಹಳೆಯ ಕಟ್ಟಡ ಶಿಥಿಲ ವಾಗಿದ್ದು, ನೀರು ಸೋರುವ, ಬಿರುಕು ಬಿಟ್ಟ ಗೋಡೆಗಳು ಆತಂಕಕ್ಕೆ ಕಾರಣವಾಗಿದೆ. ಸುಮಾರು 98ರಷ್ಟು ಅಂಗಡಿಗಳು ಇಲ್ಲಿವೆ. ಮಳೆಗಾಲದಲ್ಲಿ ಮಳೆ ನೀರು ಒಳಗೆ ಬರುವುದು ಇಲ್ಲಿ ಸಾಮಾನ್ಯ. ಶೌಚಾಲಯದ ಸಮಸ್ಯೆ ಇಲ್ಲಿ ಕೇಳುವವರೇ ಇಲ್ಲ. ಎಲ್ಲೆಲ್ಲೂ ಇಕ್ಕಟ್ಟು. ಉಸಿರು ಬಿಗಿಹಿಡಿಯುವ ಪರಿಸ್ಥಿತಿ. ಶಿಥಿಲಾವಸ್ಥೆಯ ಕಟ್ಟಡ ವನ್ನು ದುರಸ್ತಿ ಮಾಡುವುದು ಕೂಡ ಕಷ್ಟ ಸಾಧ್ಯವಾದ ಹಿನ್ನೆಲೆಯಲ್ಲಿ ಹೊಸ ಮಾರುಕಟ್ಟೆ ಇಲ್ಲಿ ನಿರ್ಮಾಣ ವಾಗಲಿದೆ. ಹಳೆ ಮಾರುಕಟ್ಟೆಯ ಮುಂಭಾಗದ ಗ್ರೌಂಡ್‌ನ‌ ಅರ್ಧ ಭಾಗದಲ್ಲಿ ತಾತ್ಕಾಲಿಕವಾಗಿ ಮಾರುಕಟ್ಟೆ ನಿರ್ಮಿಸಲಾಗಿದೆ. ಇನ್ನುಳಿದ ಜಾಗದಲ್ಲಿ ಪಾರ್ಕಿಂಗ್‌, ತಳ್ಳುಗಾಡಿಗಳ ವ್ಯಾಪಾರ ನಡೆ ಯುತ್ತಿದೆ. ಇದನ್ನು ತೆರವು ಮಾಡು ವಂತೆ ಇದೀಗ ಹಳೆ ಮಾರು ಕಟ್ಟೆಯ ವ್ಯಾಪಾರಿಗಳು ಪಾಲಿಕೆಗೆ ಮನವಿ ಮಾಡಿದ್ದಾರೆ. ತಾತ್ಕಾಲಿಕ ಮಾರುಕಟ್ಟೆಗೆ ಇದು ಬಹುದೊಡ್ಡ ಸಮಸ್ಯೆ ಆಗಲಿದೆ, ಹೊಸ ಕಟ್ಟಡ ನಿರ್ಮಾಣದ ಕಲ್ಲು, ಮಣ್ಣು, ಸಿಮೆಂಟ್‌, ಕಬ್ಬಿಣ, ಶೇಖರಿಸಲು ವ್ಯವಸ್ಥೆ ಮಾಡಬೇಕಿದೆ. ಹೀಗಾಗಿ ಪಾರ್ಕಿಂಗ್‌ ವ್ಯವಸ್ಥೆ ಇಲ್ಲಿ ಸುಧಾರಿಸಬೇಕಿದೆ.

ಹೈಟೆಕ್‌ ಮಾರುಕಟ್ಟೆ ನಿರ್ಮಾಣ
ಈಗಿನ ಹಳೆ ಮಾರುಕಟ್ಟೆಯನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಮಾರುಕಟ್ಟೆ ನಿರ್ಮಾಣವಾಗಲಿದೆ. ಕಾಮಗಾರಿ ಆರಂಭವಾಗಿ ಎರಡು ವರ್ಷಗಳಲ್ಲಿ ಪೂರ್ಣವಾಗಲಿದೆ. ಸುಸಜ್ಜಿತ ರೀತಿಯಲ್ಲಿ ಮಾರುಕಟ್ಟೆ ರಚನೆ ಆದರೆ, ಮಾಲ್‌ಗ‌ಳಲ್ಲಿನ ಮಾರುಕಟ್ಟೆ ರೀತಿಯ ವಾತಾವರಣವಿರಲಿದೆ. ಮಾರಾಟಗಾರರಿಗೆ ಪ್ರತ್ಯೇಕ-ಪ್ರತ್ಯೇಕ ವ್ಯವಸ್ಥೆ, ಗ್ರಾನೈಟ್‌ ಅಳವಡಿಕೆ, ಒತ್ತಡ ಮುಕ್ತ, ಸ್ವತ್ಛತೆಗೆ ವಿಶೇಷ ಗಮನ ನೀಡಲಾಗುತ್ತದೆ. ಹೂ, ತರಕಾರಿ, ಮೀನು, ಮಾಂಸ ಸಹಿತ ವಿವಿಧ ಮಾರಾಟಗಾರರಿಗೆ ನಿಗದಿತ ವ್ಯವಸ್ಥೆಗಳು, ಆಕರ್ಷಕ ಹೊರಭಾಗ, ಪೂರ್ಣ ಮಟ್ಟದ ಶೌಚಾಲಯ, ಮಾರುಕಟ್ಟೆಗೆ ಆಕರ್ಷಣೀಯ ಸ್ಪರ್ಶ ಸಹಿತ ಹಲವಾರು ವಿಶೇಷತೆಗಳು ಹೈಟೆಕ್‌ ಮಾರುಕಟ್ಟೆಯಲ್ಲಿ ದೊರೆಯಲಿದೆ.

ಹೊಸ ಮಾರುಕಟ್ಟೆ ನಿರ್ಮಾಣ
ಬಹುನಿರೀಕ್ಷೆಯ ಕಂಕನಾಡಿಯ ಹೊಸ ಮಾರುಕಟ್ಟೆ ನಿರ್ಮಾಣಕ್ಕೆ ಎಲ್ಲ ಸಿದ್ಧತೆ ನಡೆಸಲಾಗಿದೆ. ತಾತ್ಕಾಲಿಕ ಮಾರುಕಟ್ಟೆ ಸಿದ್ಧವಾಗಿದ್ದು, ಒಂದೆ ರಡು ದಿನದಲ್ಲಿ ಹಳೆ ಮಾರುಕಟ್ಟೆಯ ವ್ಯಾಪಾರಿ ಗಳು ಸ್ಥಳಾಂತರವಾಗಲಿ ದ್ದಾರೆ. ಬಳಿಕ ಹೊಸ ಮಾರುಕಟ್ಟೆ ಕಾಮ ಗಾರಿ ಆರಂಭವಾಗಲಿದೆ.
 -ನವೀನ್‌ಡಿ’ಸೋಜಾ, ಮನಪಾ ಸದಸ್ಯ

ತಾತ್ಕಾಲಿಕ ಮಾರುಕಟ್ಟೆಗೆ ಸ್ಥಳಾಂತರಕ್ಕೆ ಸೂಚನೆ
ಕಂಕನಾಡಿಯಲ್ಲಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ ಪೂರ್ಣ ವಾಗಿದೆ. ಹಳೆ ಮಾರುಕಟ್ಟೆಯಲ್ಲಿ ವ್ಯಾಪಾರ ನಡೆಸುವವರು ತತ್‌ಕ್ಷಣವೇ ತಾತ್ಕಾಲಿಕ ಮಾರುಕಟ್ಟೆಗೆ ಸ್ಥಳಾಂತರವಾಗುವಂತೆ ಸೂಚನೆ ನೀಡಲಾಗಿದೆ. ಅಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ. ಬಳಿಕ ಹಳೆ ಮಾರುಕಟ್ಟೆ ಕೆಡವಿ ಹೊಸ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.
ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಆಯುಕ್ತರು ಮನಪಾ

ಟಾಪ್ ನ್ಯೂಸ್

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.