ದ.ಕ ಜಿಲ್ಲೆಯ ಎಲ್ಲಾ ದೇವಾಲಯಗಳ ಸೇವೆಗಳು ರದ್ದು: ಕೊರೊನಾ ಪ್ರಯೋಗಾಲಯ ಶೀಘ್ರದಲ್ಲಿ ಆರಂಭ
Team Udayavani, Mar 17, 2020, 1:04 PM IST
ಮಂಗಳೂರು: ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ದೇವಾಸ್ಥಾನಗಳಲ್ಲಿ ಸೇವೆಗಳು ರದ್ದಾಗಲಿದ್ದು, ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ ಮಾಹಿತಿ ನೀಡಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ನೀಡಿದ ಅವರು, ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ-ಹವನ ಮಾಡಲು ಅವಕಾಶವಿರುವುದಿಲ್ಲ. ದರ್ಶನಕ್ಕೆ ಮಾತ್ರ ವ್ಯವಸ್ಥೆ ಮಾಡಿಕೊಡಲಾಗುವುದು. ದೇವಸ್ಥಾನದ ಉತ್ಸವಗಳಿದ್ದರೆ ಸಿಬ್ಬಂದಿಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ ಎಂದರು.
ರೈಲ್ವೇ ನಿಲ್ದಾಣಗಳಲ್ಲಿ ಇಂದಿನಿಂದ ನಿರಂತರವಾಗಿ ತಪಾಸಣೆ ಇರಲಿದ್ದು, ಬೀಚ್ ಗಳ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ ಎಂದರು.
ಕೊರೊನಾ ವೈರಸ್ ಬಗ್ಗೆ ದೇಶಾದ್ಯಂತ ಭಯಾನಕ ವಾತವರಣ ಸೃಷ್ಠಿಯಾಗಿದೆ. ಸರ್ಕಾರ ಇದನ್ನು ಸವಾಲಾಗಿ ಸ್ವೀಕರಿಸಿದೆ. ಕರ್ನಾಟಕಕ್ಕೆ ಬರುತ್ತಿರುವ ಪ್ರತಿಯೊಬ್ಬರನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗಿದೆ. ಈವರೆಗೂ 1.75 ಸಾವಿರ ಜನರ ಸ್ಕ್ಯಾಂನಿಗ್ ಮಾಡಲಾಗಿದೆ ಎಂದು ಆರೋಗ್ಯಾಧಿಕಾರಿಗಳ ಸಭೆಯಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಈವರೆಗೆ 10 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿದೆ. ಕಲಬುರುಗಿಯಲ್ಲಿ ಮೃತಪಟ್ಟ ವ್ಯಕ್ತಿಯ 4 ಮಂದಿ ಸಂಬಂಧಿಕರ ಪರೀಕ್ಷೆ ಮಾಡಲಾಗಿದೆ. ಅವರಲ್ಲಿ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕಾಸರಗೋಡುವಿನಲ್ಲಿ ಪಾಸಿಟಿವ್ ಪ್ರಕರಣ ಪತ್ತೆ ವಿಚಾರ: ದುಬೈನಿಂದ ಮಂಗಳೂರಿಗೆ ಬಂದ ವ್ಯಕ್ತಿಯಲ್ಲಿ ಪಾಸಿಟಿವ್ ಪ್ರಕರಣ ಕಂಡು ಬಂದಿದೆ. ಜಿಲ್ಲಾಧಿಕಾರಿಗಳು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಆತನ ಪರಿಚಯಸ್ಥರು, ಸ್ನೇಹಿತರು, ಸಂಬಂಧಿಕರ ಮಾಹಿತಿಯನ್ನೂ ಕಲೆಹಾಕುತ್ತಿದ್ದಾರೆ.
ಮಂಗಳೂರಿನಲ್ಲಿ ಕೊರೊನಾ ಶಂಕಿತರ ಗಂಟಲು ದ್ರವ ಪರೀಕ್ಷಾ ಲ್ಯಾಬ್ ತೆರೆಯಲು ಸರ್ಕಾರ ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಯಲ್ಲಿ ಒಂದು ಲ್ಯಾಬ್ ತೆರೆಯಲಾಗುವುದು ಎಂದು ಸಚಿವ ಬಿ ಶ್ರೀರಾಮುಲು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.