ರೈಲು ನಿಲ್ದಾಣದಲ್ಲಿಲ್ಲ ಕೊರೊನಾ ಎಚ್ಚರ
Team Udayavani, Mar 17, 2020, 3:51 PM IST
ಯಾದಗಿರಿ: ಕೊರೊನಾ ಎಲ್ಲೆಡೆ ಆತಂಕ ಸೃಷ್ಟಿಸಿದೆ. ಹೊರ ರಾಜ್ಯದ ಜನರು ಆಗಮಿಸುವ ಮತ್ತು ನಿರ್ಗಮಿಸುವ ಪ್ರಮುಖ ಸಂಚಾರ ತಾಣವಾದ ನಗರದ ರೈಲು ನಿಲ್ದಾಣದಲ್ಲಿ ಕೊರೊನಾ ಕುರಿತು ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದು ಕಂಡು ಬಂದಿದೆ.
ನಗರದ ರೈಲು ನಿಲ್ದಾಣದಿಂದ ನಿತ್ಯ ತೆಲಂಗಾಣ ಸೇರಿದಂತೆ ಜಿಲ್ಲೆಯ ಜನರು ಮಹಾರಾಷ್ಟ್ರ, ಬೆಂಗಳೂರು ಹಾಗೂ ಚೆನ್ನೈ ಮಾರ್ಗವಾಗಿ ಸಂಚರಿಸುವ ರೈಲುಗಳಲ್ಲಿ ಪ್ರಯಾಣಿಸುತ್ತಾರೆ. ರೈಲು ಮಾರ್ಗವಾಗಿ ಪ್ರಾಯಾಣಿಸುವ ಕೆಲವರು ಬಾಯಿ ಮತ್ತು ಮೂಗಿಗೆ ಕೈ ವಸ್ತ್ರ, ಮಾಸ್ಕ್ ಬಳಸುತ್ತಿದ್ದಾರೆ. ರೈಲು ನಿಲ್ದಾಣದಲ್ಲಿ ಕೆಲವೆಡೆ ಕರ ಪತ್ರ ಅಂಟಿಸಿರುವುದನ್ನು ಬಿಟ್ಟರೆ ಸ್ಕ್ರೀನಿಂಗ್ ಇನ್ನಿತರ ತಪಾಸಣೆ ಮಾಡಲಾಗುತ್ತಿಲ್ಲ. ಹೊರ ರಾಜ್ಯದಿಂದ ಬಂದವರ ಆರೋಗ್ಯ ತಪಾಸಣೆ ಮಾಡುತ್ತಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದು ಹಾಗೂ ಮಹಾರಾಷ್ಟ್ರದಲ್ಲಿಯೂ ಹೆಚ್ಚು ಪ್ರಕರಣಗಳು ವರದಿಯಾಗಿದೆ. ಆದರೆ ಈ ಬಗ್ಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಇಲಾಖೆ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎನ್ನುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಕೊರೊನಾ ಶಂಕಿತರು ಮತ್ತು ಅಂತಹ ಲಕ್ಷಣ ಇರುವವರು ನಮ್ಮ ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರ ವಹಿಸಬೇಕು. ಪ್ರತಿಯೊಬ್ಬರು ವೈಯಕ್ತಿಕ ಶುಚಿತ್ವ ಹಾಗೂ ಮುನ್ನೆಚ್ಚರಿಕೆ ಪಾಲಿಸಬೇಕು. ರೈಲು ನಿಲ್ದಾಣದಲ್ಲಿಯೂ ನಿಗಾ ವಹಿಸಲಾಗುವುದು. -ಎಂ. ಕೂರ್ಮಾರಾವ್, ಡಿಸಿ
-ಅನೀಲ ಬಸೂದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.