ದರ ಕುಸಿತ: ಕಂಗಾಲಾದ ರೈತ


Team Udayavani, Mar 17, 2020, 5:07 PM IST

gadaga-tdy-1

ಮುಳಗುಂದ: ಮಧ್ಯ ಹಾಗೂ ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆ ಗೋವಿನಜೋಳದ ದರವು ಹಲವು ಕಾರಣಗಳಿಂದ ತೀವ್ರ ಕುಸಿತ ಕಂಡಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಮಾರ್ಚ್‌ ಮೊದಲ ವಾರದಲ್ಲಿ 2000 ರೂ.ಗಳಷ್ಟಿದ್ದ ದರ ಈಗ ಹಂತ ಹಂತವಾಗಿ ಕುಸಿದಿದ್ದರಿಂದ ಬೆಳೆಗಾರರಿಗೆ ದಿಕ್ಕು ತೋಚದಂತಾಗಿದೆ.

ಉತ್ತಮ ದರ ಹಾಗೂ ಬೇಸಾಯಕ್ಕೂ ಹೆಚ್ಚು ಅನುಕೂಲವಾಗುವ ನಿಟ್ಟಿನಲ್ಲಿ ಗೋವಿನಜೋಳ ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ರೈತರು ಬೆಳೆಯುತ್ತಿರುವುದರಿಂದ ಇದೊಂದು ವಾಣಿಜ್ಯಬೆಳೆಯಾಗಿದ್ದು, ಯುಗಾದಿ ಸಂದರ್ಭದಲ್ಲಿ ಒಕ್ಕಣೆ ಪ್ರಾರಂಭ ಮಾಡುವ ಈ ಹಂತದಲ್ಲಿ ದರ ಕುಸಿತವಾಗಿದೆ. ಹೀಗಾಗಿ ರೈತರು ಮಾಡಿದ ಖರ್ಚು ಬಾರದಂತಾಗಿದೆ.

ಹಾವೇರಿ, ಗದಗ ಹಾಗೂ ಇತರೆ ಜಿಲ್ಲೆಗಳಲ್ಲಿ ಯುಗಾದಿ ಪಾಡ್ಯದಂದು ರಾಶಿ ಪೂಜೆ ಮಾಡುವ ಪದ್ಧತಿಯಿದ್ದು, ಈ ಕಾರಣಕ್ಕಾಗಿಯೇ ಒಕ್ಕಣೆ ಮಾಡುವ ತಯಾರಿಯಲ್ಲಿದ್ದ ರೈತರಿಗೆ ಇತ್ತ ಮಾರಲಿಕ್ಕೂ ಆಗದೆ ಸಂಗ್ರಹಣೆ ಮಾಡಲಿಕ್ಕೂ ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಸುಗ್ಗಿ ಸಂಭ್ರಮಕ್ಕೆ ಮಂಕು ಬಂದಂತಾಗಿದೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 1850 ರೂ.ಗಳ ಬೆಲೆ ಘೋಷಣೆ ಮಾಡಿದ್ದರು. ಇದುವರೆಗೂ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರ ಪ್ರಾರಂಭ ಮಾಡದಿರುವುದು ರೈತರ ಅಕ್ರೋಶಕ್ಕೆ ಕಾರಣವಾಗಿದೆ. ರೈತರ ಮಾಲು ಕಟಾವು ಮಾಡುವ ಹಂತದಲ್ಲಿ ಬೆಂಬಲ ಬೆಲೆ ಕೇಂದ್ರ ಸ್ಥಾಪನೆ ಮಾಡದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಂತಾಗಿದೆ. 2000 ರೂ.ಗಳಿದ್ದ ಬೆಲೆ ಈಗ ಕೊರೊನಾ, ರೋಗಬಾಧೆ ಸೇರಿದಂತೆ ಹಲವು ಕಾರಣಗಳಿಗಾಗಿ 1200 ರೂ.ಗಳಿಗೆ ಇಳಿದಿದ್ದು, ಮಾರುಕಟ್ಟೆಯಲ್ಲಿ ಖರೀದಿದಾರರು ಟೆಂಡರ್‌ ಹಾಕಲು ಹಿಂದೆ ಮುಂದೆ ನೋಡುವಂತಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ಕಾಟಾಚರಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಿದರೆ ಸಾಲದು. ರೈತರು ಬೆಳೆ ಖರೀದಿಸಲು ಶೀಘ್ರವೆ ಕಾರ್ಯಪ್ರವೃತ್ತರಾಗಬೇಕು ಎನ್ನುವುದು ರೈತರ ಒತ್ತಾಯವಾಗಿದೆ.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.