ದಿಢೀರ್‌ ಮಾಡಬಹುದಾದ ಸ್ಪೆಷಲ್‌ ಸವಿರುಚಿ


Team Udayavani, Mar 18, 2020, 5:00 AM IST

cooking

ಇದು ಬೇಸಿಗೆ ಕಾಲ. ಇನ್ನೇನು ಮಕ್ಕಳಿಗೆ ರಜೆ ಶುರುವಾಗುತ್ತದೆ. ದಿನವಿಡೀ ಮನೆಯಲ್ಲೇ ಇರುವ ಮಕ್ಕಳು, “ಏನಾದ್ರೂ ತಿನ್ನೋಕೆ ಕೊಡು’ ಅಂತ ಕೇಳುತ್ತಾರೆ. ಮನೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೆಂಟರಿಷ್ಟರು ಬರುವ ಕಾಲವೂ ಇದೇ. ಅತಿಥಿಗಳು ಬಂದಾಗ ಏನಾದ್ರೂ ಸ್ಪೆಷಲ್‌ ತಿನಿಸು ಮಾಡುವುದು ಪದ್ಧತಿ. ಇಂಥ ಸಂದರ್ಭಗಳಲ್ಲಿ ಮಾಡಬಹುದಾದ ಅಡುಗೆಗಳು ಇಲ್ಲಿವೆ.

1. ಬೆಂಡೆಕಾಯಿ ಪಕೋಡ
ಬೇಕಾಗುವ ಸಾಮಗ್ರಿ: ಸಣ್ಣಗೆ ಹೆಚ್ಚಿದ ಬೆಂಡೆಕಾಯಿ, ಕರಿಯಲು ಎಣ್ಣೆ, ಕಡಲೆ ಹಿಟ್ಟು-1 ಕಪ್‌, ಚಿಟಿಕೆ ಅಡಿಗೆ ಸೋಡಾ, ಅಚ್ಚ ಖಾರದ ಪುಡಿ- 2 ಚಮಚ, ಸಾಜೀರಾ, ಉಪ್ಪು, ಕರಿಬೇವು.

ಮಾಡುವ ವಿಧಾನ: ಒಂದು ಪಾತ್ರೆಯಲ್ಲಿ, ಕಡಲೆ ಹಿಟ್ಟು, ಖಾರದ ಪುಡಿ, ಸಾಜೀರಾ, ಉಪ್ಪು, ಅಡುಗೆ ಸೋಡಾ, ಸ್ವಲ್ಪ ಬಿಸಿ ಮಾಡಿದ ಅಡುಗೆ ಎಣ್ಣೆ ಹಾಗೂ ಸಣ್ಣಗೆ ಉದ್ದುದ್ದ ಹೆಚ್ಚಿಟ್ಟ ಬೆಂಡೆಕಾಯಿಯನ್ನು ಹಾಕಿ ಹದವಾಗಿ ಕಲೆಸಿಕೊಳ್ಳಿ. ನಂತರ, ಕಾದ ಎಣ್ಣೆಯಲ್ಲಿ ಕಂದು ಬಣ್ಣ ಬರುವವರೆಗೆ ಕರಿಯಿರಿ. ಬಿಸಿ ಬಿಸಿ ಇರುವಾಗಲೇ ತಿಂದರೆ ಬಹಳ ರುಚಿಯಾಗಿರುತ್ತದೆ.

2. ಹೀರೆಕಾಯಿ ಬಜ್ಜಿ
ಬೇಕಾಗುವ ಸಾಮಗ್ರಿ: ಸಣ್ಣಗೆ ವೃತ್ತಾಕಾರದಲ್ಲಿ ಹೆಚ್ಚಿಕೊಂಡ ಹೀರೆಕಾಯಿ- 1 ಬಟ್ಟಲು, ಕಡಲೆಹಿಟ್ಟು- ಒಂದೂವರೆ ಬಟ್ಟಲು, ಕರಿಯಲು ಎಣ್ಣೆ, 1 ಚವåಚ ಜೀರಿಗೆ, 2 ಚಮಚ ಅಚ್ಚ ಖಾರದ ಪುಡಿ, ಉಪ್ಪು, ಒಂದು ಲೋಟ ನೀರು, ಚಿಟಿಕೆ ಅಡುಗೆ ಸೋಡ.

ಮಾಡುವ ವಿಧಾನ: ಕಡಲೆ ಹಿಟ್ಟಿಗೆ, ಖಾರದ ಪುಡಿ, ಅಡುಗೆ ಸೋಡಾ, ಉಪ್ಪು, ಜೀರಿಗೆ ಪುಡಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಂಡು, ನಂತರ ನೀರು ಹಾಕಿ ದೋಸೆ ಹಿಟ್ಟಿನ ಹಂತಕ್ಕೆ ಕಲೆಸಿಕೊಳ್ಳಿ. ಆ ಹಿಟ್ಟಿನಲ್ಲಿ ಹೀರೇಕಾಯಿಯನ್ನು ಹಾಕಿ ಹತ್ತು ನಿಮಿಷ ನೆನೆಯಲು ಬಿಡಿ. ನಂತರ, ಎಣ್ಣೆಯಲ್ಲಿ ಹೊಂಬಣ್ಣ ಬರುವವರೆಗೆ ಕರಿಯಿರಿ.

3. ಅನ್ನದ ಗಂಜಿ ಹಲ್ವ
ಬೇಕಾಗುವ ಸಾಮಗ್ರಿ: 2 ಬಟ್ಟಲು ಅನ್ನದ ಗಂಜಿ, ಒಂದು ಬಟ್ಟಲು ಅಕ್ಕಿ ಹಿಟ್ಟು, ಅರ್ಧ ಚಮಚ ಏಲಕ್ಕಿ ಪುಡಿ, ಒಂದು ಬಟ್ಟಲು ಸಕ್ಕರೆ, 2-4 ಚಮಚ ತುಪ್ಪ.

ಮಾಡುವ ವಿಧಾನ: ಗಂಜಿಗೆ ಅಕ್ಕಿ ಹಿಟ್ಟು ಬೆರೆಸಿ ಚೆನ್ನಾಗಿ ಗಂಟಿಲ್ಲದಂತೆ ಮಿಶ್ರಣ ಮಾಡಿ, ಬಾಣಲೆಗೆ ಹಾಕಿ ತಳ ಬಿಡದಂತೆ ಕುದಿಸಬೇಕು. ಮಿಶ್ರಣ ಗಟ್ಟಿಯಾದ ನಂತರ ಸಕ್ಕರೆ ಹಾಕಿ ಕರಗುವವರೆಗೂ ಕೈಯಾಡಿಸುತ್ತಿರಿ. ಸಕ್ಕರೆ ಕರಗಿದ ಮೇಲೆ ತುಪ್ಪ ಹಾಕಿ ತಳಬಿಡುವವರೆಗೂ ಕುದಿಸಿ, ಏಲಕ್ಕಿ ಪುಡಿ ಹಾಕಿ ಒಲೆಯಿಂದ ಕೆಳಗಿಳಿಸಿ. ಒಂದು ಪ್ಲೇಟ್‌ಗೆ ತುಪ್ಪ ಸವರಿ ಮಿಶ್ರಣವನ್ನು ಅದಕ್ಕೆ ಹಾಕಿ, ಸ್ವಲ್ಪ ತಣ್ಣಗಾದ ಮೇಲೆ ಬೇಕಾದ ಆಕಾರದಲ್ಲಿ ಕತ್ತರಿಸಿ. ಒಂದೆರಡು ಗಂಟೆ ಹೀಗೇ ಬಿಟ್ಟರೆ, ಹಲ್ವ ತಿನ್ನಲು ಸಿದ್ಧ.

4. ಸ್ವೀಟ್‌ ಬ್ರೆಡ್‌ ರೋಸ್ಟ್‌
ಬೇಕಾಗುವ ಸಾಮಗ್ರಿ: ಕತ್ತರಿಸಿಟ್ಟ ಬ್ರೆಡ್‌ ತುಂಡು-6, ಅರ್ಧ ಬಟ್ಟಲು ಸಕ್ಕರೆ, 2 ಚಮಚ ತುಪ್ಪ, ಕರಿಯಲು ಎಣ್ಣೆ, ಅರ್ಧ ಚಮಚ ಏಲಕ್ಕಿ ಪುಡಿ, ಅರ್ಧ ಬಟ್ಟಲು ನೀರು.

ಮಾಡುವ ವಿಧಾನ: ಬ್ರೆಡ್‌ ಅಂಚನ್ನು ತೆಗೆದು ತ್ರಿಭುಜಾಕೃತಿಯಲ್ಲಿ ಕತ್ತರಿಸಿಟ್ಟುಕೊಳ್ಳಿ. ನಂತರ, ಬ್ರೆಡ್‌ ತುಂಡುಗಳನ್ನು ಕಂದು ಬಣ್ಣ ಬರುವವರೆಗೆ ಎಣ್ಣೆಯಲ್ಲಿ ಕರಿಯಿರಿ. ಒಂದು ಪಾತ್ರೆಗೆ ಸಕ್ಕರೆ, ನೀರು ಹಾಕಿ ತೆಳು ಪಾಕ ತಯಾರಿಸಿ. ಆ ಪಾಕಕ್ಕೆ ಏಲಕ್ಕಿ ಪುಡಿ ಹಾಕಿ, ಒಲೆಯಿಂದ ಕೆಳಗಿಳಿಸಿ ಬ್ರೆಡ್‌ ತುಂಡುಗಳನ್ನು 15-20 ನಿಮಿಷ ಅದರಲ್ಲಿ ಅದ್ದಿ ಇಡಿ.

– ಭಾಗ್ಯ ಆರ್‌.ಗುರುಕುಮಾರ್‌

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.