ಬೆಂಗಳೂರು ಲಾಕ್‌ಡೌನ್‌ಗೆ ಚಿಂತನೆ?
Team Udayavani, Mar 18, 2020, 3:09 AM IST
ಬೆಂಗಳೂರು: ಕೊರೊನಾ ಹರಡುವಿಕೆ ತಡೆಯಲು ಬೆಂಗಳೂರು ನಗರದ ಜನತೆ ಮನೆಯಿಂದ ಹೊರ ಬರದಂತೆ ನಿರ್ಬಂಧ ಹೇರುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಒಲವು ಹೊಂದಿಲ್ಲ ಎಂದು ಹೇಳಲಾಗುತ್ತಿದೆ.
ವೈದ್ಯರು, ಪೊಲೀಸ್ ಹಾಗೂ ಪತ್ರಕರ್ತರಿಗೆ ಮಾತ್ರ ಕರ್ತವ್ಯದ ಹಿನ್ನೆಲೆಯಲ್ಲಿ ಮನೆಯಿಂದ ಹೊರ ಬರಲು ಅವಕಾಶ ಕಲ್ಪಿಸಿ, ಬೇರೆ ಬೇರೆ ವೃತ್ತಿ ನಿರತರು ಹಾಗೂ ಸಾಮಾನ್ಯ ಜನರು ಅನಗತ್ಯವಾಗಿ ಮನೆಯಿಂದ ಹೊರಗೆ ಬರುವುದಕ್ಕೆ ನಿರ್ಬಂಧ ಹೇರುವುದು. ದುಡಿಯವ ವರ್ಗ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಒಂದು ತಿಂಗಳ ವಿಶೇಷ ಪಡಿತರ ವ್ಯವಸ್ಥೆ ಕಲ್ಪಿಸಿ, ಅವರಿಗೆ ನಿತ್ಯದ ಜೀವನೋಪಾಯಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಲು ಚಿಂತನೆ ನಡೆದಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ 2ನೇ ಹಂತದಲ್ಲಿ ಹರಡಿದ್ದು, ನಂತರ ನಿಯಂತ್ರಿಸಲು ಸರ್ಕಾರಕ್ಕೆ ಕಷ್ಟವಾಗುತ್ತದೆ ಎನ್ನುವ ಲೆಕ್ಕಾಚಾರದಲ್ಲಿ ಈ ರೀತಿಯ ಆಲೋಚನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಸಂಪೂರ್ಣ ಚಟುವಟಿಕೆ ಸ್ಥಗಿತಗೊಳಿಸಲು ನಿರ್ಧರಿಸಿದರೆ, ಸರ್ಕಾರದ ಆದಾಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಯಡಿಯೂರಪ್ಪ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.