ಬೆಂಗಳೂರಿನಲ್ಲಿ ‘ಕೈ’ ನಾಯಕರ ಹೈಡ್ರಾಮಾ: ದಿಗ್ವಿಜಯ್ ಸಿಂಗ್ ಪೊಲೀಸ್ ವಶಕ್ಕೆ
Team Udayavani, Mar 18, 2020, 8:54 AM IST
ಬೆಂಗಳೂರು: ಇಲ್ಲಿನ ರೆಸಾರ್ಟ್ ನಲ್ಲಿ ವಾಸ್ತವ್ಯವಿರುವ ಮಧ್ಯಪ್ರದೇಶ ಕೈ ನಾಯಕರ ಮನವೊಲಿಕೆಗೆ ಬಂದ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಹಲವು ಪ್ರಹಸನಗಳಿಗೆ ಬುಧವಾರ ಬೆಳಿಗ್ಗೆ ಬೆಂಗಳೂರು ಸಾಕ್ಷಿಯಾಯಿತು.
ಇಲ್ಲಿನ ಯಲಹಂಕ ಬಳಿಯ ರೆಸಾರ್ಟ್ ನಲ್ಲಿರುವ ಕಾಂಗ್ರೆಸ್ ಶಾಸಕರ ಮನವೊಲಿಕೆಗೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಆಗಮಿಸಿದ್ದರು. ಆದರೆ ರೆಸಾರ್ಟ್ ಗೆ ಪೊಲೀಸ್ ಬಿಗು ಭದ್ರತೆ ಒದಗಿಸಲಾಗಿದ್ದು, ಕೈ ನಾಯಕರಿಗೆ ರೆಸಾರ್ಟ್ ಗೆ ಒಳ ಹೋಗಲು ಅವಕಾಶ ನೀಡಲಿಲ್ಲ.
ಇದರಿಂದಾಗಿ ದಿಗ್ವಿಜಯ್ ಸಿಂಗ್ ರೆಸಾರ್ಟ್ ಎದುರುಗಡೆ ಧರಣಿ ಆರಂಭಿಸಿದರು. ಪೊಲೀಸರ ಮನವಿಗೂ ಜಗ್ಗದೇ ಧರಣಿ ಮುಂದುವರಿಸಿದ್ದರಿಂದ ಸ್ಥಳದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ಧಾರೆ. ಕಾಂಗ್ರೆಸ್ ನಾಯಕರನ್ನು ಅಮೃತಹಳ್ಳಿ ಠಾಣೆಗೆ ಪೊಲೀಸರು ಕರೆದೊಯ್ದಿದ್ದಾರೆ.
ಯಲಹಂಕದ ರಮಡ ರೆಸಾರ್ಟ್ ನಲ್ಲಿ ಮಧ್ಯಪ್ರದೇಶದ 21 ಜನ ಬಂಡಾಯ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿದ್ದಾರೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಮಲ್ ನಾಥ್ ಸರಕಾರಕ್ಕೆ ವಿಶ್ವಾಸಮತ ಯಾಚಿಸಲು ಹತ್ತು ದಿನಗಳ ರಿಲೀಫ್ ಸಿಕ್ಕ ಕಾರಣ ಶಾಸಕರ ಮನವೊಲಿಕೆಗೆ ದಿಗ್ವಿಜಯ್ ಸಿಂಗ್ ಇಂದು ಮುಂಜಾನೆ ಬೆಂಗಳೂರಿಗೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.