ಗೋವಿನಜೋಳಕ್ಕೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ಮನವಿ
Team Udayavani, Mar 18, 2020, 11:18 AM IST
ಕಲಘಟಗಿ: ಗೋವಿನ ಜೋಳಕ್ಕೆ ಸರ್ಕಾರ ಘೋಷಣೆ ಮಾಡಿದ ಬೆಂಬಲ ಬೆಲೆಯನ್ನು ನೀಡಬೇಕು ಮತ್ತು ತಾಲೂಕಿನ ರೈತರು ಬೆಳೆದ ಗೋವಿನಜೋಳವನ್ನು ಖರೀದಿಸುವ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಮಂಜುನಾಥಗೌಡ ಮುರಳ್ಳಿ ನೇತೃತ್ವದಲ್ಲಿ ತಹಶೀಲ್ದಾರ್ ಅಶೋಕ ಶಿಗ್ಗಾವಿ ಅವರಿಗೆ ಮನವಿ ಸಲ್ಲಿಸಲಾಯಿತು.
ಗೋವಿನ ಜೋಳಕ್ಕೆ ಸೂಕ್ತ ಬೆಲೆ ದೊರಕದೆ ಇರುವುದರಿಂದ ರೈತರ ಪರಿಸ್ಥಿತಿ ಚಿಂತಾ ಜನಕವಾಗಿದೆ. ಗೋವಿನ ಜೋಳದ ಬೆಲೆ ತೀವ್ರ ಕುಸಿತದಿಂದಾಗಿ ದಲ್ಲಾಳಿಗಳು ಕೇಳಿದ ಬೆಲೆಗೆ ಕೊಡುವಂತಾಗಿದೆ. ಕೂಡಲೇ ಕೇಂದ್ರ ಹಾಗೂರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ಬೆಂಬಲ ಬೆಲೆ ಯೋಜನೆಯಡಿ ಗೋವಿನ ಜೋಳದ ಖರೀದಿ ಪ್ರಕ್ರಿಯೆ ಆರಂಭಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಇತ್ತೀಚೆಗೆ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಪಟ್ಟಣದ ಹಲವು ಸ್ಥಳಗಳಲ್ಲಿ ಮರಾಠಾ ಸಮುದಾಯದವರು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಶುಭಾಶಯ ಕೊರುವ ಬ್ಯಾನರ್‌ಗಳನ್ನು ಹಾಕಿದ್ದರು. ಕಿಡಿಗೇಡಿಗಳು ಬ್ಯಾನರ್‌ಗಳನ್ನು ಹರಿದು ಅವಮಾನಗೊಳಿಸಿದ್ದು, ಆರೋಪಿಗಳನ್ನು ತಕ್ಷಣ ಬಂಧಿ ಸಿ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಎಸ್.ಆರ್. ಪಾಟೀಲ, ಲಿಂಗರೆಡ್ಡಿ ನಡುವಿನಮನಿ, ಹರಿಶಂಕರ ಎನ್.ಎಂ, ಸೋಮಣ್ಣ ಬೆನ್ನೂರ, ಶಿವನಗೌಡ ಪಾಟೀಲ, ಚನ್ನಬಸಯ್ಯ ಹಿರೇಮಠ, ಭೋಜಪ್ಪ ಲಮಾಣಿ, ಶಂಕರಗೌಡ ಪಾಟೀಲ, ಫಕ್ಕೀರಪ್ಪ ಗೌಳಿ, ಮಂಜುನಾಥ ಮೂಗಣ್ಣವರ, ಬಾಳು ಖಾನಾಪುರ, ರಾಜು ಶೀಲವಂತರ, ಬಸವರಾಜ ದಾಸನಕೊಪ್ಪ, ಸಾತಪ್ಪ ಕುಂಕುರು, ಚನ್ನಬಸಪ್ಪ ಸಂಗೇದೇವರಕೊಪ್ಪ, ಶಿವಲಿಂಗ ಮೂಗನ್ನವರ, ಹನುಮಂತ ಚವರಗುಡ್ಡ, ಗಿರೀಶ ಸೂರ್ಯವಂಶಿ, ಶಿವಯ್ಯ ಹಿರೇಮಠ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.