ಮುಂದುವರಿದ ರೌದ್ರಾವತಾರ!
ಹಳ್ಳಿಗಳಲ್ಲೂ ಹೈ ಅಲರ್ಟ್ ಸೋಂಕು ನಿಯಂತ್ರಿಸುವ ತಲೆ ಬಿಸಿಚಿಂಚೋಳಿ-ಚಿತ್ತಾಪುರದಲ್ಲೂ ಶಂಕಿತ ಪ್ರಕರಣ ಪತ್ತೆ
Team Udayavani, Mar 18, 2020, 10:38 AM IST
ಕಲಬುರಗಿ: ಮಹಾಮಾರಿ ಕೊರೊನಾ ಸೋಂಕಿಗೆ ಕಲ್ಯಾಣ ಕರ್ನಾಟಕ ಭಾಗದ ಕೇಂದ್ರ ಸ್ಥಾನ ಕಲಬುರಗಿ ಅಕ್ಷರಶಃ ನಲುಗಿ ಹೋಗಿದೆ. ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆಯಿಂದ ಜಿಲ್ಲಾದ್ಯಂತ ಅಘೋಷಿತ ಬಂದ್ ವಾತಾವರಣ ಮುಂದುವರಿದಿದೆ.
ನಗರದಲ್ಲಿ 76 ವರ್ಷದ ವೃದ್ಧನ ಸಾವಿನ ನಂತರ ಕೊರೊನಾ ತನ್ನ ರೌದ್ರಾವತಾರ ಪ್ರದರ್ಶಿಸುತ್ತಿದೆ. ವೃದ್ಧನ ಕುಟುಂಬಸ್ಥರು ಹಾಗೂ ಆತನೊಂದಿಗೆ ನೇರ ಸಂರ್ಪಕದಲ್ಲಿದ್ದವರಿಗೂ ಸೋಂಕು ಹರಡಿರುವುದು ಖಚಿತವಾಗುತ್ತಿದ್ದಂತೆ, ದಿನದಿಂದ ದಿನಕ್ಕೆ ಆತಂಕ ಹೆಚ್ಚುತ್ತಲೇ ಇದೆ.
ಈಗಾಗಲೇ ವೃದ್ಧನೊಂದಿಗೆ ನೇರ ಸಂಪರ್ಕದಲ್ಲಿದ್ದ 71 ಜನರನ್ನು ಗುರುತಿಸಿದ್ದರೆ, ಎರಡನೇ ಸಂಪರ್ಕದಲ್ಲಿದ್ದ 238ಕ್ಕೂ ಹೆಚ್ಚು ಜನರಿದ್ದು, ಎಲ್ಲರನ್ನೂ ಮನೆಯಲ್ಲಿ ಇರಿಸಿ ನಿಗಾ ವಹಿಸಲಾಗುತ್ತಿದೆ. ಆರು ಜನರನ್ನು ಇಎಸ್‌ಐ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ. ವಿದೇಶದಿಂದ ಬಂದ ಬಳಿಕ ವೃದ್ಧ ಅನೇಕ ಕಡೆಗಳಲ್ಲಿ ಸುತ್ತಾಡಿರುವ ಸಂಶಯಗಳು ವ್ಯಕ್ತವಾಗಿವೆ.
ಹೈದ್ರಾಬಾದ್‌ನಿಂದ ಬರುವಾಗ ಕಮಲಾಪುರದ ಬಳಿಯ ಢಾಬಾವೊಂದಲ್ಲಿ ಊಟ ಮಾಡಿದ್ದು, ಆ ಢಾಬಾದ ಮಾಲೀಕ ಸೇರಿ ಏಳು ಜನರ ಮೇಲೂ ನಿಗಾ ವಹಿಸಲಾಗಿದೆ. ಹೀಗೆ ಹಲವು ಕಡೆಗಳಲ್ಲಿ ವೃದ್ಧ ಸುತ್ತಾಡಿರುವ ಅನುಮಾನಗಳು ಇವೆ. ಈ ನಡುವೆ ವೃದ್ಧನೊಂದಿಗೆ ನೇರ ಸಂಪರ್ಕದಲ್ಲಿದ್ದವರ ಬಗ್ಗೆಯೂ ಭೀತಿ ಉಂಟಾಗಿದೆ.
ಎರಡು ದಿನಗಳ ಹಿಂದೆ ವೃದ್ಧನ ಕುಟುಂಬದ ಮಹಿಳೆಗೆ ಸೋಂಕು ಹರಡಿದ್ದು ಖಚಿತವಾಗಿತ್ತು. ಇದರ ಬೆನ್ನಲ್ಲೇ ವೃದ್ಧನಿಗೆ ಮನೆಗೆ ಬಂದು ಚಿಕಿತ್ಸೆ ನೀಡಿದ್ದ ಖಾಸಗಿ ವೈದ್ಯನಿಗೂ ಸೋಂಕು ಹರಡಿದ್ದು, ಸೋಂಕು ನಿಯಂತ್ರಿಸುವಲ್ಲಿ ತೊಡಗಿರುವ ಜಿಲ್ಲಾಡಳಿತದ ಜವಾಬ್ದಾರಿ ಹೆಚ್ಚಿಸುವಂತೆ ಮಾಡಿದೆ. ಗ್ರಾಮೀಣದಲ್ಲೂ ಹೈ ಅಲರ್ಟ್: ಕೊರೊನಾ ಪೀಡಿತ ವೃದ್ಧನ ಸಾವು ಹಾಗೂ ಮತ್ತಿಬ್ಬರಿಗೆ ಸೋಂಕು ದೃಢ ಪಟ್ಟಿದ್ದರಿಂದ ಕಲಬುರಗಿ ನಗರಾದ್ಯಂತ ಭಯದ ವಾತಾವರಣ ಇದೆ. ಇತ್ತ, ವಿದೇಶಗಳಿಂದ ಜಿಲ್ಲೆಗೆ ನೂರಕ್ಕೂ ಹೆಚ್ಚು ಜನರು ಬಂದಿದ್ದಾರೆ ಎನ್ನಲಾಗಿದೆ.
61 ಜನರ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಲಭ್ಯವಾಗಿದ್ದು, ಅವರ ಮೇಲೂ ನಿಗಾ ವಹಿಸಲಾಗಿದೆ. ವಿದೇಶದಿಂದ ಆಗಮಿಸಿದ ಚಿತ್ತಾಪುರ ಮತ್ತು ಚಿಂಚೋಳಿಯ ಇಬ್ಬರಿಗೆ ಶಂಕಿತ ಕೊರೊನಾ ಲಕ್ಷಣಗಳು ಪತ್ತೆಯಾಗಿದ್ದು ಆಘಾತಕಾರಿಯಾಗಿದೆ. ಆದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಕೆಲ ಹಳ್ಳಿಗಳಲ್ಲಿ ಡಂಗೂರ ಸಾರಿಸುವ ಮೂಲಕ ಜಾಗೃತಿ ಮೂಡಿಸುವ ಕೆಲಸ ಶುರು ಮಾಡಲಾಗಿದೆ.
ರಂಗಪ್ಪ ಗಧಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.