ಕೊರೊನಾ+ಹಕ್ಕಿಜ್ವರದ ಆತಂಕ

ಗಾಬರಿ ಬೇಡ-ತಕ್ಷಣ ಚಿಕಿತ್ಸೆ ಪಡೆಯಿರಿ

Team Udayavani, Mar 18, 2020, 12:51 PM IST

18-March-4

ಮಲೇಬೆನ್ನೂರು: ಕೊರೊನಾ ವೈರಸ್‌ ಬಗ್ಗೆ ಗಾಬರಿ ಪಡುವ ಅಗತ್ಯವಿಲ್ಲ. ಶೀತ, ಕೆಮ್ಮು, ಜ್ವರದಂತಹ ಲಕ್ಷಣಗಳು ಕಂಡುಬಂದರೆ, ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಿರಿ ಎಂದು ವೈದ್ಯಾಧಿಕಾರಿ ಡಾ| ಲಕ್ಷ್ಮೀದೇವಿ ಸಲಹೆ ನೀಡಿದರು.

ಪಟ್ಟಣದ ಪುರಸಭೆಯಲ್ಲಿ ಮಂಗಳವಾರ ನಡೆದ ಕೊರೊನಾ ವೈರಸ್‌ ಸೊಂಕು ಹರಡದಂತೆ ತಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಸಭೆಯಲ್ಲಿ ಮಾತನಾಡಿದರು. ಕೊರೊನಾ ವೈರಸ್‌ ಬಾರದಂತೆ ಜನರು ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್‌ ಅಥವಾ ಸೋಪಿನಿಂದ ಕೈಯನ್ನು ಸ್ವತ್ಛಗೊಳಿಸುತ್ತಿರಬೇಕು. ಕೈಯಿಂದ ಪದೇ ಪದೇ ಕಣ್ಣು, ಮೂಗು, ಮುಖ ಮುಟ್ಟಿಕೊಳ್ಳಬಾರದು. ವ್ಯಕ್ತಿಗಳಿಂದ ಕನಿಷ್ಟ ಒಂದು ಮೀಟರ್‌ನಷ್ಟು ಅಂತರ ಕಾಯ್ದುಕೊಳ್ಳಬೇಕು ಎಂದರು.

ಕರೊನಾ ರೋಗ ಲಕ್ಷಣಗಳು ಕಂಡು ಬಂದರೆ, ಕೂಡಲೇ ಅಂಥವರನ್ನು ಆಸ್ಪತ್ರೆಗೆ ಕರೆತರಬೇಕು. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು 8 ಬೆಡ್‌ಗಳ ಪ್ರತ್ಯೇಕ ಕೋಣೆಯನ್ನು ಮೀಸಲಿರಿಸಿದ್ದೇವೆ ಎಂದರು.

ಹರಿಹರ ತಾಲೂಕಿನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ಹಂದಿಗಳನ್ನು ಊರಿಂದ ಹೊರಗೆ ಸಾಗಿಸಬೇಕಿದೆ. ಕೋಳಿ, ಕುರಿ, ಮಟನ್‌ ಮಾರುಕಟ್ಟೆಗಳನ್ನು ಬಂದ್‌ ಮಾಡಿಸಬೇಕಿದೆ ಎಂದರು.

ಹಂದಿಗಳಿಂದ ಸಾರ್ವಜನಿಕರಿಗೆ ರೋಗ ಹರಡುವ ಸಾಧ್ಯತೆಯಿದ್ದು, ಇಂದೇ ಹಂದಿಗಳನ್ನು ಸ್ಥಳಾಂತರಿಸದಿದ್ದರೆ, ಕಠಿಣ ಕ್ರಮ ಜರುಗಿಸುವುದಾಗಿ ಪುರಸಭೆ ಸದಸ್ಯರಾದ ರಾಜಪ್ಪ, ಯೂಸುಫ್‌, ಆರೀಫ್‌, ಪುರಸಭೆ ಅಧಿಕಾರಿಗಳು ಹಂದಿ ಮಾಲೀಕರಿಗೆ ಎಚ್ಚರಿಕೆ ನೀಡಿದರು.

ಉಪ ತಹಶೀಲ್ದಾರ್‌ ಆರ್‌.ರವಿ ಮಾತನಾಡಿ, ವಾರ್ಡ್‌ಗಳಲ್ಲಿ ಸ್ವತ್ಛತೆಗೆ ಆದ್ಯತೆ ನೀಡಬೇಕು. ಕೊರೊನಾ ಕುರಿತು ಬಸ್‌ ನಿಲ್ದಾಣದಲ್ಲಿ ಹೆಲ್ಪ್ ಡೆಸ್ಕ್ ಮಾಡುವುದು ಉತ್ತಮ ಎಂದರು. ಕೊರೋನಾ ವೈರಸ್‌ ಹಾಗೂ ಹಕ್ಕಿ ಜ್ವರ ಹರಡದಂತೆ ಪಟ್ಟಣದ ಸಂತೆ ಮಾರುಕಟ್ಟೆಯಲ್ಲಿನ ಕೋಳಿ, ಕುರಿ, ಮಟನ್‌ ಮಾರುಕಟ್ಟೆ ಬಂದ್‌ ಮಾಡುವಂತೆ ನೋಟಿಸ್‌ ಕೊಟ್ಟಿದ್ದು, ಈಗಾಗಲೇ ಬಂದ್‌ ಮಾಡಲಾಗಿದೆ ಎಂದು ಪ್ರಭಾರಿ ಮುಖ್ಯಧಿಕಾರಿ ಉಮೇಶ್‌ ತಿಳಿಸಿದರು. ಕಂದಾಯ ಮತ್ತು ಪುರಸಭೆ ಅಧಿಕಾರಿಗಳು, ಸದಸ್ಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.