ಕೋವಿಡ್ 19 ಭೀತಿ: ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144 (3) ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ
Team Udayavani, Mar 18, 2020, 2:50 PM IST
ಉಡುಪಿ: ಕೋವಿಡ್ -19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 144 (3) ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಗದೀಶ ಜಿ ಆದೇಶ ಹೊರಡಿಸಿದ್ದಾರೆ.
ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಜಿಲ್ಲೆಯಲ್ಲಿ ಧಾರ್ಮಿಕ ಸಂಸ್ಥೆಗಳ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಸಾಮೂಹಿಕ ವಿವಾಹಗಳು ಮತ್ತು ಯಾವುದೇ ಜನಸಂದಣಿ ಸೇರುವ ಕಾರ್ಯಕ್ರಮಗಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವ ಕಾರಣ ನಿರ್ಬಂಧಕಾಜ್ಞೆ ಹೊರಡಿಸಲಾಗಿದೆ.
ಮುಂದಿನ ಆದೇಶದವರೆಗೆ ಈ ಸೆಕ್ಷನ್ ಜಾರಿಯಲ್ಲಿದ್ದು, ಈ ಸಮಯದಲ್ಲಿ ಜಿಲ್ಲೆಯಾದ್ಯಂತ ಉತ್ಸವ/ಜಾತ್ರೆಗಳಲ್ಲಿ ಕೇವಲ ಧಾರ್ಮಿಕ ಕೇಂದ್ರಗಳ ಸಿಬ್ಬಂದಿ ಮಾತ್ರ ಭಾಗವಹಿಸುವಂತೆ ಸೂಚಿಸಿದೆ. ಉತ್ಸವಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿದೆ. ದೇವರ ದರ್ಶನ ಹೊರತು ಉಳಿದ ಸೇವೆಗಳನ್ನು ರದ್ದು ಮಾಡಲಾಗಿದೆ. ದೇವಸ್ಥಾನಗಳಲ್ಲಿ ತಂಗಲು ಯಾರಿಗೂ ಅವಕಾಶವಿರುವುದಿಲ್ಲ.
ಜಿಲ್ಲೆಯಲ್ಲಿ ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಬೀಚ್/ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮದುವೆ/ ನಿಶ್ಚಿತಾರ್ಥ ಸಮಾರಂಭಗಳನ್ನು ಹೆಚ್ಚಿನ ಜನರು ಸೇರದೆ ಸರಳವಾಗಿ ಆಯೋಜಿಸಲು ಅದೇಶದಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.