ಧರಣಿ ಹಿಂಪಡೆದ ಅನ್ನದಾತರು
ಅಧಿಕಾರಿಗಳ ಭರವಸೆಗೆ ಒಪ್ಪಿದ ರೈತರುಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ
Team Udayavani, Mar 18, 2020, 4:12 PM IST
ಕೊಲ್ಹಾರ: ಮುಳವಾಡ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸಬೇಕು ಮತ್ತು ಕೂಡಗಿ ಬಳಿಯ ಬಾಕ್ಸ್ ಪುಸ್ಸಿಂಗ್ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಕಳೆದ ಆರು ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಮಂಗಳವಾರ ತಾತ್ಕಾಲಿಕ ಹಿಂಪಡೆಯಲಾಗಿದೆ.
ತಾಲೂಕಿನ ಕೂಡಗಿ ಗ್ರಾಮದ ರೈಲ್ವೆ ಸ್ಟೇಷನ್ ಹತ್ತಿರ ಮುಳವಾಡ ಆಲಮಟ್ಟಿ ರಸ್ತೆ ಪಕ್ಕದಲ್ಲಿ ಧರಣಿ ಕುಳಿತಿದ್ದ ಸ್ಥಳಕ್ಕೆ ರೈಲ್ವೆ ಇಲಾಖೆ ಜನರಲ್ ಮ್ಯಾನೇಜರ್ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಭೇಟಿ ಕೊಟ್ಟು ರೈತರೊಂದಿಗೆ ಚಚರ್ಚಿಸಿದರು.
ನಿಮ್ಮ ಬೇಡಿಕೆಗಳಾದ ಬಾಕ್ಸ್ ಪುಸ್ಸಿಂಗ್ ಕಾಮಗಾರಿಗೆ ಅಡಚಣೆಯಾಗಿರುವ ಒಂದು ರೈಲ್ವೆ ಹಳಿಯನ್ನು ಸಸ್ಪೆಂಡ್ ಮಾಡಲು ಕ್ರಮ ಕೈಗೊಳ್ಳಲಾಗಿದ್ದು ಅದರ ಪ್ರಕಾರ ಆದಷ್ಟು ಶೀಘ್ರದಲ್ಲಿ ಬಾಕ್ಸ್ ಪುಸ್ಸಿಂಗ್ ಕಾಮಗಾರಿ ಪೂರ್ಣಗೊಳಿಸಲಾಗುವದು ಎಂದು ಅಧಿಕಾರಿಗಳು ಭರವಸೆ ಕೊಟ್ಟರು.
ಕೊರೊನಾ ವೈರಸ್ ಹರಡುತ್ತಿರುವುದರಿಂದ ರಾಜ್ಯದಲ್ಲಿ ಜಾರಿ ಇರುವ ಆರೋಗ್ಯ ಎಮರ್ಜೆನ್ಸಿ ರಾಜ್ಯ ಸರ್ಕಾರದ ಆದೇಶವನ್ನು ಉಲ್ಲಂಘಿಸಬಾರದು ಎಂದು ಅಧಿಕಾರಿಗಳು ಎಲ್ಲ ರೈತರಿಗೆ ತಿಳಿ ಹೇಳಿದ ನಂತರ ತಾತ್ಕಾಲಿಕವಾಗಿ ಅಹೋರಾತ್ರಿ ಧರಣಿ ಹಿಂಪಡೆಯಲಾಗಿದೆ. ಅವರು ಹೇಳಿದ ಪ್ರಕಾರ ನಡೆದುಕೊಳ್ಳದಿದ್ದರೆ ಮುಂದಿನ ದಿನಮಾನಗಳಲ್ಲಿ ಮತ್ತೂಮ್ಮೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಅಂಥ ಪರಿಸ್ಥಿತಿಗೆ ಅ ಧಿಕಾರಿಗಳು ಅವಕಾಶ ಕೊಡದೇ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಿಕೊಡಬೇಕೆಂದು ಒಕ್ಕೊರಲಿನಿಂದ ರೈತರು ಅಧಿ ಕಾರಿಗಳಿಗೆ ವಿನಂತಿಸಿದರು.
ಬಸವನಬಾಗೇವಾಡಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ನಾವು ಕೂಡ ಧರಣಿಯನ್ನು ಹಿಂಪಡೆಯಲು ರೈತರಿಗೆ ಮನವರಿಕೆ ಮಾಡಿದ್ದೇವೆ. ಆದಷ್ಟು ಬೇಗ ಕಾಮಗಾರಿಯನ್ನು ಮುಕ್ತಾಯಗೊಳಿಸಬೇಕು. ಇಲ್ಲದಿದ್ದರೆ ನಾಡಿನ ಎಲ್ಲ ಮಠಾಧೀಶರನ್ನು ಕರೆದುಕೊಂಡು ಬಂದು ರೈತರೊಂದಿಗೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಹೆಚ್ಚುವರಿ ಎಸ್ಪಿ ರಾಮ್ ಅರಸಿದ್ದಿ, ರೈಲ್ವೆ ಇಲಾಖೆಯ ಲಲನಕುಮಾರ, ಡಿವೈಎಸ್ಪಿ ಈ.ಶಾಂತವೀರ, ಕಂದಾಯ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಧರಣಿ ಸ್ಥಳಕ್ಕೆ ಆಗಮಿಸಿದ್ದರು.
ಧರಣಿಯಲ್ಲಿ ರೈತ ಮುಖಂಡ ಅರವಿಂದ ಕುಲಕರ್ಣಿ, ಬಿ.ಎಲ್. ಪಾಟೀಲ, ಕೃಷ್ಣಾ ಭೋಸಲೆ, ಸಿದ್ರಾಮ ಅಂಗಡಗೇರಿ, ಸದಾಶಿವ ಬರಟಗಿ, ಪಾಂಡು ಹ್ಯಾಟಿ, ಕೃಷ್ಣಪ್ಪ ಭೂಮರಡ್ಡಿ, ವಿಠ್ಠಲ ಬಿರಾದಾರ, ಗಿರಿಯಪ್ಪಸ ಸಾಹುಕಾರ, ರಾಯಪ್ಪ ಚಲವಾದಿ, ಸುರೇಶ ಅವಧಿ, ಹೊನಕೇರೆಪ್ಪ ತೆಲಗಿ, ಕಲ್ಲಪ್ಪ ಮಟ್ಯಾಳ, ಶಿವಪ್ಪ ಮುರನಾಳ, ಸೋಮನಿಂಗ ಹಡಪದ, ಗುರಪ್ಪ ನಾಗೋಡ, ಸಾಹೇಬಗೌಡ ಬಿರಾದಾರ, ಹೊನ್ನಪ್ಪ ತೋಟದ, ಗಣೇಶ ರಾಠೊಡ, ಎಚ್ .ಜಿ.ಮಕಾನದಾರ, ಖಾಜೇಸಾಬ ಕೊಲ್ಹಾರ, ವಿಠೊಭಾ ಸಾಳುಂಕೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.