ಸಪ್ತಸಾಗರದಾಚೆ ಎಲ್ಲೋ ರಕ್ಷಿತ್
ಮತ್ತೆ ಜೊತೆಯಾದ ಗೋಧಿ ಬಣ್ಣ ಸಾಧಾರಣ ಮೈಕಟ್ಟು ತಂಡ ...
Team Udayavani, Mar 19, 2020, 7:02 AM IST
ಪುಷ್ಕರ್ ಫಿಲಂಸ್ ನಿರ್ಮಾಣದಲ್ಲಿ ರಕ್ಷಿತ್ ಶೆಟ್ಟಿ ನಾಯಕರಾಗಿ “ಅವನೇ ಶ್ರೀಮನ್ನಾರಾಯಣ’ ಸಿನಿಮಾ ಬಂದಿದ್ದು ನಿಮಗೆ ಗೊತ್ತೇ ಇದೆ. ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರಕ್ಕೆ ಬಿಡುಗಡೆಯ ನಂತರ ಒಂದಷ್ಟು ಮಿಶ್ರಪ್ರತಿಕ್ರಿಯೆ ವ್ಯಕ್ತವಾಯಿತು. ಆದರೆ, ಕನ್ನಡದಲ್ಲಿ ಕಲೆಕ್ಷನ್ ವಿಷಯದಲ್ಲಿ ಚಿತ್ರ ಹಿಂದೆ ಬೀಳಲಿಲ್ಲ. ಆದರೆ, ಬೇರೆ ಭಾಷೆಗಳಲ್ಲಿ ಅಂದುಕೊಂಡ ಮಟ್ಟಿಗೆ ಹೋಗಲಿಲ್ಲ ಎಂಬ ಬೇಸರ ಚಿತ್ರತಂಡಕ್ಕಿದೆ.
ಹಾಗಂತ ಬೇಸರ ಮಾಡಿಕೊಂಡು ಚಿತ್ರತಂಡ ಕೂತಿಲ್ಲ. ಮತ್ತೂಂದು ಹೊಸ ಚಿತ್ರಕ್ಕೆ ಅಣಿಯಾಗಿದ್ದಾರೆ. ಹೌದು, ಪುಷ್ಕರ್ ನಿರ್ಮಾಣದಲ್ಲಿ ರಕ್ಷಿತ್ ಶೆಟ್ಟಿ ಹೊಸ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ. ಈ ಚಿತ್ರವನ್ನು ಹೇಮಂತ್ ನಿರ್ದೇಶಿಸಲಿದ್ದಾರೆ. “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಚಿತ್ರದಲ್ಲಿ ಈ ತಂಡ ಒಟ್ಟಿಗೆ ಕೆಲಸ ಮಾಡಿತ್ತು. ಈಗ ಮತ್ತೂಮ್ಮೆ ಮೂವರು ಒಟ್ಟಾಗಿ ಹೊಸ ಸಿನಿಮಾ ಮಾಡಲು ಹೊರಟಿದ್ದಾರೆ.
ಆ ಸಿನಿಮಾಕ್ಕೆ ಅವರಿಟ್ಟ ಹೆಸರು “ಸಪ್ತಸಾಗರದಾಚೆ ಎಲ್ಲೋ’. ಹೀಗೊಂದು ವಿಭಿನ್ನ ಟೈಟಲ್‌ನಡಿ ಸಿನಿಮಾ ಆರಂಭವಾಗುತ್ತಿದೆ. ಈಗಾಗಲೇ ಕಥೆ ಸೇರಿದಂತೆ ಬಹುತೇಕ ಅಂಶಗಳು ಫೈನಲ್ ಆಗಿವೆ. ಇದೊಂದು ಲವ್ ಕಂ ಆ್ಯಕ್ಷನ್ ಸಿನಿಮಾವಾಗಿದ್ದು, ಎಲ್ಲಾ ವರ್ಗದ ಪ್ರೇಕ್ಷಕರನ್ನು ಸೆಳೆಯಲಿದೆ ಎಂಬುದು ಚಿತ್ರತಂಡದ ಮಾತು. ಸದ್ಯ ಚಿತ್ರಕ್ಕೆ ಪುಷ್ಕರ್, ರಕ್ಷಿತ್ ಹಾಗೂ ಹೇಮಂತ್ ಅವರು ಜೊತೆಯಾಗಿದ್ದು,
ಇತರ ಅಂಶಗಳನ್ನು ಮುಂದಿನ ದಿನಗಳಲ್ಲಿ ಚಿತ್ರತಂಡ ಬಿಟ್ಟುಕೊಡಲಿದೆ. ಸದ್ಯ ರಕ್ಷಿತ್ ಶೆಟ್ಟಿ “777 ಚಾರ್ಲಿ’ ಚಿತ್ರೀಕರಣದಲ್ಲಿದ್ದು, ಬಹುತೇಕ ಚಿತ್ರೀಕರಣ ಪೂರ್ಣವಾಗಿದೆ. ಅಂದಹಾಗೆ, ಪುಷ್ಕರ್-ರಕ್ಷಿತ್ ಕಾಂಬಿನೇಶನ್‌ನ ಹೊಸ ಸಿನಿಮಾ ಮೇನಲ್ಲಿ ಆರಂಭವಾಗಲಿದ್ದು, ಡಿಸೆಂಬರ್‌ನಲ್ಲಿ ಬಿಡುಗಡೆಯಾಗಲಿದೆ. ಈ ಬಾರಿ ಹೆಚ್ಚು ತಡಮಾಡದೇ ಬೇಗನೇ ಸಿನಿಮಾ ಮಾಡಿ ಮತ್ತೆ ಪ್ರೇಕ್ಷಕರ ಮುಂದೆ ಬರಲು ಚಿತ್ರತಂಡ ತಯಾರಿ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.