ಕೊರಾನಾಗೆ ಭಯ ಬೇಡ, ಮುಂಜಾಗ್ರತೆ ವಹಿಸಿ
Team Udayavani, Mar 19, 2020, 3:00 AM IST
ತುಮಕೂರು: ಜಿಲ್ಲೆಯಲ್ಲಿ ಕೊರೊನಾ ವೈರಸ್ ಬಗ್ಗೆ ಭಯಬೇಡ ಮುಂಜಾಗ್ರತೆ ಇರಲಿ ಕೊರೊನಾ ಸೋಂಕು ತಡೆಯಲು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೊಷಿಸಿ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಸೂಚಿಸಲಾಗಿದ್ದು, ಜಿಲ್ಲಾಡಳಿತ ಎಲ್ಲಾ ರೀತಿಯ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ ಜನರು ಈ ವೈರಸ್ ಬಗ್ಗೆ ಯಾವುದೇ ರೀತಿಯಿಂದಲೂ ಆತಂಕ ಪಡಬೇಡಿ ಜಾಗೃತಿಯಿಂದ ಇರಬೇಕು ಸ್ವತ್ಛತೆಗೆ ಹೆಚ್ಚು ಒತ್ತು ನೀಡಬೇಕು ಎಂದರು.
ಜಿಲ್ಲೆಯಲ್ಲಿ ಕೊರೊನಾ ಇಲ್ಲ: ವಿದೇಶದಿಂದ ಜಿಲ್ಲೆಗೆ 94 ಜನ ಪ್ರಯಾಣ ಬೆಳೆಸಿದ್ದು, ಅವರನ್ನು ಮನೆಯಲ್ಲೀರಿಸಿ ತಪಾಸಣೆಗೊಳಪಡುತ್ತಿರುವವರ ಸಂಖ್ಯೆ 83, ನಿಗಾವಣೆಯಲ್ಲಿ 28 ದಿನಗಳ ಅವಧಿ ಮುಗಿಸಿರುವವರ ಸಂಖ್ಯೆ 8, ಮರಳಿ ವಿದೇಶಕ್ಕೆ ಪ್ರಯಾಣ ಮಾಡಿರುವವರ ಸಂಖ್ಯೆ 3, ರಕ್ತ ಗಂಟಲು ಮಾದರಿಗಳ ಪರೀಕ್ಷೆ ನಡೆಸಿರುವವರ ಸಂಖ್ಯೆ 8 ಇವರಲ್ಲಿ ವಿದೇಶದಿಂದ ಜಿಲ್ಲೆಗೆ ಬಂದಿರುವವರಲ್ಲಿ ಈ ವರೆಗೂ ಯಾರಲ್ಲಿಯೂ ಕೊರೊನಾ ವೈರಸ್ ಸೋಂಕು ಇಲ್ಲದೇ ಇರುವ ಬಗ್ಗೆ ದೃಢಪಟ್ಟಿದೆ ಎಂದು ವಿವರಣೆ ನೀಡಿದರು.
ಮನೆ ಮನೆಗೆ ತೆರಳಿ ಜಾಗೃತಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಪ್ರತಿದಿನ ಕೊರೊನಾ ಸೋಂಕಿನ ಬಗ್ಗೆ ಮುಂಜಾಗ್ರತಾ ಕ್ರಮ ಅನುಸರಿಸಲಾಗುತ್ತಿದೆ. ಹೆಚ್ಚು ಜನ ಸೇರುವ ಎಲ್ಲಾ ತರಹದ ಸನ್ನಿವೇಶಗಳಿಗೆ ನಿಷೇಧ ಹೇರಲಾಗಿದೆ.
ಈ ವಿಷಯದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿ,ಸಿಬ್ಬಂದಿಗಳಿಗೆ 3 ಹಂತದ ತರಬೇತಿಯನ್ನು ನೀಡಲಾಗಿದೆ. ಮತ್ತು ಆರೋಗ್ಯ ಸಿಬ್ಬಂದಿಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ್ ಮತ್ತು ಸ್ಯಾನಿಟೈಜರ್‌ಗಳನ್ನು ನೀಡಲಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಸಂಸ್ಥೆ ಸಹಕಾರದೊಂದಿಗೆ ಮನೆ-ಮನೆಗೆ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ವಿದೇಶದಿಂದ ಬಂದವರ ಮೇಲೆ ನಿಗಾ: ವಿದೇಶದಿಂದ ಪ್ರಯಾಣ ಬೆಳೆಸಿರುವವರ ಬಗ್ಗೆ ನಿಗಾವಹಿಸಿ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 100 ಐಸೋಲೇಶನ್ ವಾರ್ಡ್‌ಗಳನ್ನು ಗುರಿತಿಸಲಾಗಿದೆ. ಜಿಲ್ಲೆಯಲ್ಲಿರುವ 242 ಖಾಸಗಿ ಕ್ಲಿನಿಕ್‌ಗಳಲ್ಲಿಯೂ ಸೂಚನೆ ನೀಡಲಾಗಿದೆ. ಶ್ರೀದೇವಿ ಮತ್ತು ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಕಂಟೋನೆಂಟ್ ಐಸೋಲೇಶನ್ ವಾರ್ಡ್‌ಗಳನ್ನು ತೆರೆಯಲಾಗಿದೆ, ಅಲ್ಲದೇ ಪ್ರತಿನಿತ್ಯ ಖಾಸಗಿ ಕ್ಲಿನಿಕ್‌ಗಳು ಜಿಲ್ಲಾಡಳಿತಕ್ಕೆ ವರದಿಸಲ್ಲಿಸಬೇಕು ಎಂದು ತಿಳಿಸಿದರು.
ವರದಿ ನೀಡಲು ಸೂಚನೆ: ಜ್ವರ, ನೆಗಡಿ, ಕೆಮ್ಮು, ತಲೆನೋವು, ಉಸಿರಾಟದ ತೊಂದರೆ ಹಾಗೂ ಭೇದಿಯಂತಹ ಲಕ್ಷಣಗಳು ಕಂಡು ಬಂದರೆ ಹತ್ತಿರದ ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿ, ಕೊರೊನಾ ವೈರಸ್ ತರಹದ ಸೋಂಕು ಕಂಡುಬಂದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ವರದಿ ಮಾಡುವಂತೆ ತಿಳಿಸಿದರು.
ವಿದೇಶದಿಂದ ಬರುವವರು ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆಗೊಳಪಟ್ಟರೆ ಅವರ ವರದಿಯನ್ನು ಸಹ ಜಿಲ್ಲಾ ಕಂಟ್ರೋಲ್ ಗೆ ಮಾಹಿತಿ ನೀಡುವಂತೆ ಖಾಸಗಿ ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಜಾತ್ರೆ, ಸಮಾರಂಭಗಳು ಬಂದ್: ಜನದಟ್ಟಣೆ ಸೇರುವ ಸಂತೆ, ಜಾತ್ರೆ, ಶಾಲಾ-ಕಾಲೇಜು, ಸಿನಿಮಾ ಮಂದಿರ, ಪಬ್, ಕ್ಲಬ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶ ಹೊರಡಿಸಲಾಗಿದೆ. ಸಾರ್ವಜನಿಕರು ವೈಯಕ್ತಿಕ ಸ್ವತ್ಛತೆ ಬಗ್ಗೆ ಗಮನಹರಿಸಿ ಪದೇ ಪದೇ ಕಣ್ಣು, ಮೂಗು ಬಾಯಿಗಳನ್ನು ಮುಟ್ಟಿಕೊಳ್ಳಬಾರದು. ಮತ್ತು ನೆಗಡಿ, ಕೆಮ್ಮು ಇರುವ ವ್ಯಕ್ತಿಗಳಿಂದ ದೂರ ಉಳಿಯುವುದು ಸೂಕ್ತ ಎಂದು ಅವರು ಸೂಚನೆ ನೀಡಿದ್ದಾರೆ.
ಯಾವುದೇ ಒಬ್ಬ ವ್ಯಕ್ತಿ ಕೆಮ್ಮು, ಜ್ವರದಿಂದ ಬಳುತ್ತಿದ್ದರೆ, ಶಂಕಿತ ವ್ಯಕ್ತಿಯೆಂದು ಗುರುತಿಸಿ ಅವರ ರಕ್ತ ಮತ್ತು ಗಂಟಲು ಸ್ರಾವದ ಪರೀಕ್ಷೆಯ ನಂತರ ದೃಢಪಟ್ಟರೇ ಮಾತ್ರ ಸೋಂಕಿತ ವ್ಯಕ್ತಿಯೆಂದು ಪರಿಗಣಿಸಲಾಗುವುದೆಂದು ತಿಳಿಸಿದರು. ಮುಖ್ಯವಾಗಿ ಕೊರೊನಾ ವೈರಸ್ ಬಗ್ಗೆ ಭಯಪಡದೇ ವೈಯಕ್ತಿಕ ಮತ್ತು ನಾವು ವಾಸಿಸುವ ಸುತ್ತಮುತ್ತ ಸ್ವತ್ಛತೆಯ ಬಗ್ಗೆ ಗಮನಹರಿಸಬೇಕೆಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಡಿಹೆಚ್‌ಓ ಡಾ. ಚಂದ್ರಿಕಾ, ಜಿಲ್ಲಾ ಸರ್ಜನ್ ಡಾ. ವೀರಭದ್ರಯ್ಯ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಜಿಲ್ಲೆಯ ನಾಗರಿಕರು ಕೊರೊನಾ ವೈರಸ್ ಬಗ್ಗೆ ಭಯಪಡದೇ ವೈಯಕ್ತಿಕ ಮತ್ತು ನಾವು ವಾಸಿಸುವ ಸುತ್ತಮುತ್ತ ಪ್ರದೇಶದ ಸ್ವತ್ಛತೆಯ ಬಗ್ಗೆ ಗಮನಹರಿಸಬೇಕು. ಯಾವುದೇ ಒಬ್ಬ ವ್ಯಕ್ತಿ ಕೆಮ್ಮು, ಜ್ವರದಿಂದ ಬಳುತ್ತಿದ್ದರೆ, ಶಂಕಿತ ವ್ಯಕ್ತಿಯೆಂದು ಗುರುತಿಸಿ ಅವರ ರಕ್ತ ಮತ್ತು ಗಂಟಲು ಸ್ರಾವದ ಪರೀಕ್ಷೆಯ ನಂತರ ದೃಢಪಟ್ಟರೇ ಮಾತ್ರ ಸೋಂಕಿತ ವ್ಯಕ್ತಿಯೆಂದು ಪರಿಗಣಿಸಲಾಗುವುದು ಯಾರೂ ಆತಂಕ ಪಡಬೇಡಿ ಸ್ವತ್ಛತೆ ಕಾಪಾಡಿ.
-ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.