ನೀರಿನ ಸಮಸ್ಯೆ ನಿರ್ವಹಣೆಗೆ ಗ್ರಾಮ ಪಂಚಾಯತ್‌ ಸರ್ವ ಸಿದ್ಧ

ಕಿನ್ನಿಗೋಳಿ ಗ್ರಾಮ ಪಂಚಾಯತ್‌

Team Udayavani, Mar 19, 2020, 4:29 AM IST

water-kinnigoli

ಕಳೆದ ಬೇಸಗೆಯಲ್ಲಿ ತೀವ್ರವಾಗಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ “ಉದಯವಾಣಿ’ಯು ಭೇಟಿ ಕೊಟ್ಟು, “ಜೀವಜಲ’ ಎನ್ನುವ ಸರಣಿಯಡಿ ಸಾಕ್ಷಾತ್‌ ವರದಿಗಳನ್ನು ಪ್ರಕಟಿಸಿತ್ತು. ಈ ಬಾರಿಯ ಬೇಸಗೆಯಲ್ಲಿ ನೀರಿನ ಸಮಸ್ಯೆಯ ನಿವಾರಣೆಗೆ ಸ್ಥಳೀಯ ಪಂಚಾಯತ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವೆಲ್ಲ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆೆ. ಮುಂದೆ ಆಗಬೇಕಾದ ಪ್ರಮುಖ ಕ್ರಮಗಳೆಲ್ಲದರ ಕುರಿತಾದ ಸರಣಿ.

ಕಿನ್ನಿಗೋಳಿ ಪಂಚಾಯತ್‌ನಲ್ಲಿ ಕಳೆದ ವರ್ಷ ನೀರಿನ ಸಮಸ್ಯೆ ಕಂಡು ಬಂದಿತ್ತು. ಆದರೆ ಈ ಬಾರಿ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವುದರಿಂದಾಗಿ ಕೆಲವೊಂದು ಕಡೆ ಹೊರತುಪಡಿಸಿ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಪಂಚಾಯತ್‌ ಎಲ್ಲ ರೀತಿಯಲ್ಲಿ ಸರ್ವ ಸಿದ್ಧವಾಗಿದೆ ಎಂದು ತಿಳಿದುಬಂದಿದೆ.

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾ.ಪಂ. ವ್ಯಾಪ್ತಿಯ ಎಳತ್ತೂರು, ಪುನರೂರು ಕೆಲವು ಭಾಗಗಳಲ್ಲಿ ಈಗಾಗಲೇ ಸ್ವಲ್ಪ ಮಟ್ಟಿನ ನೀರಿನ ಸಮಸ್ಯೆ ಆರಂಭವಾಗಿದೆ. ಈ ಸಮಸ್ಯೆ ನಿರ್ವಹಣೆಗಾಗಿ ಪುನರೂರು ಭಾಗದಲ್ಲಿ ಬಹುಗ್ರಾಮ ನೀರು ಯೋಜನೆಯಡಿಯಲ್ಲಿ ಹೊಸ ಪೈಪ್‌ಲೈನ್‌ ಜೋಡಣೆ ಮಾಡಲಾಗಿದೆ, ಎಳತ್ತೂರು ಭಾಗಕ್ಕೆ ಬಳ್ಕುಂಜೆ ಗ್ರಾ.ಪಂ. ವ್ಯಾಪ್ತಿಯಿಂದ ನೀರು ಸರಬರಾಜು ಮಾಡಿದರೆ ನೀರಿನ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಕಿನ್ನಿಗೋಳಿಯಲ್ಲಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ವ್ಯಾಪ್ತಿಯಲ್ಲಿ ತೆರೆದ ಬಾವಿಗಳು ಕಡಿಮೆ ಇವೆ. ಹೀಗಾಗಿ ಈ ನೀರಿನ ಸಮಸ್ಯೆ ನಿರ್ವಹಣೆಗೆ ಗ್ರಾ.ಪಂ. ಆಡಳಿತ ಸಕಲ ಸಿದ್ಧವಾಗಿದೆ.

ಗ್ರಾ.ಪಂ. ವ್ಯಾಪ್ತಿಯಲ್ಲಿ ಕಳೆದ ವರ್ಷ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾರಿಯಿಂದಾಗಿ ವ್ಯಾಪ್ತಿಯ ಸುಮಾರು 12 ಓವರ್‌ ಹೆಡ್‌ಟ್ಯಾಂಕ್‌ಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ಆದರೇ ಈ ಯೋಜನೆಯಲ್ಲಿ ಪೈಪ್‌ಲೈನ್‌ ಪದೇ ಪದೇ ಹಾಳಾಗುವುದು ಹಾಗೂ ಒಡೆಯುವುದರಿಂದಾಗಿ ಕೆಲವು ಬಾರಿ ನೀರು ಸರಬರಾಜಿಗೆ ಸಮಸ್ಯೆ ಆಗುತ್ತದೆ.

ಎಳತ್ತೂರು- ನೆಲಗುಡ್ಡೆ
ಎಳತ್ತೂರು ನೆಲಗುಡ್ಡೆ ಗುಡ್ಡೆಯಂಗಡಿ ಎತ್ತರದ ಪ್ರದೇಶವಾಗಿದ್ದು, ಕಳೆದ ವರ್ಷದ ಡಿಸೆಂಬರ್‌ ಅಂತ್ಯದವರೆಗೆ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿತ್ತು. ಅನಂತರ ಬೇಸಗೆಯಲ್ಲಿ ಕೊಳವೆ ಬಾವಿಯಲ್ಲಿ ನೀರಿಲ್ಲವಾದ್ದರಿಂದ ಟ್ಯಾಂಕರ್‌ ಮೂಲಕ ಸರಬರಾಜು ಮಾಡಲಾಗಿತ್ತು. ಈ ಬಾರಿ ನೀರಿನ ಸಮಸ್ಯೆ ಉದ್ಭವಿಸುವ ಲಕ್ಷಣ ಕಂಡು ಬಂದಿದ್ದು ಬಳುRಂಜೆ ಗ್ರಾ.ಪಂ. ವ್ಯಾಪ್ತಿಯಿಂದ ಪೈಪ್‌ಲೈನ್‌ ಮೂಲಕ ನೀರು ಸರಬರಾಜು ಮಾಡಿದರೆ ಪರಿಹಾರ ಸಿಗಬಹುದು. ಈ ಬಗ್ಗೆ ಸ್ಥಳೀಯಾಡಳಿತದಲ್ಲಿ ಮಾತುಕತೆ ನಡೆದಿದೆ. ಇದಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರಾ.ಪಂ. ಆಡಳಿತ ಸಿದ್ಧವಾಗಿದೆ.

ಕಿನ್ನಿಗೋಳಿ
ಕಿನ್ನಿಗೋಳಿ ಗ್ರಾ.ಪಂ. ಹತ್ತಿರದ ಟ್ಯಾಂಕ್‌ ಸಹಿತ ಎಲ್ಲ ಓವರ್‌ ಹೆಡ್‌ ಟ್ಯಾಂಕ್‌ಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಪಂಚಾಯತ್‌ ಕೊಳವೆ ಬಾವಿ ಮತ್ತು 2 ತೆರದ ಬಾವಿಯ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ಈ ಬಾರಿ ವ್ಯಾಪ್ತಿಯಲ್ಲಿ ಯಾವುದೇ ನೀರಿನ ಸಮಸ್ಯೆ ಉದ್ಭವಿಸುವ ಲಕ್ಷಣ ಕಂಡು ಬಂದಿಲ್ಲ. ಹಾಗೇನೂ ಒಂದು ವೇಳೆ ನೀರಿನ ಸಮಸ್ಯೆ ಕಂಡು ಬಂದರೂ ಪಂಚಾಯತ್‌ನಿಂದ ಪೂರಕ ಕ್ರಮ ತೆಗೆದುಕೊಳ್ಳುವುದು ಎಂದು ತಿಳಿದು ಬಂದಿದೆ.

ಗ್ರಾ.ಪಂ. ವ್ಯಾಪ್ತಿಯಲ್ಲಿ 10,400 ಜನಸಂಖ್ಯೆ ಇದ್ದು, 967 ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಇದೆ, 12 ಕೊಳವೆ ಬಾವಿ ಇದೆ, 15 ಜನ ಕೆಲಸಗಾರರು ಇದ್ದಾರೆ. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಗುತ್ತಕಾಡಿನಲ್ಲಿ ಪ್ರತ್ಯೇಕ ನೀರಿನ ಸಮಿತಿ ಇದ್ದು ಅದರ ನಿರ್ವಹಣೆ ಅವರೇ ಮಾಡುತ್ತಾರೆ.
ಅಲ್ಲಿ ಸುಮಾರು 300ಕ್ಕೂ ಅಧಿಕ ನೀರಿನ ಬಳಕೆದಾರರು ಇದ್ದು ಎರಡು ಟ್ಯಾಂಕ್‌ ಮೂಲಕ ಅಲ್ಲಿನ ಪರಿಸರದಲ್ಲಿ ನೀರಿನ ಸರಬರಾಜು ಮಾಡಲಾಗುತ್ತಿದೆ. ಅದರ ಲೆಕ್ಕಾಚಾರ ಎಲ್ಲ ಸಮಿತಿಯ ಮೂಲಕ ನಡಯುತ್ತಿದೆ.

ಸದ್ಯ ನೀರಿನ ಸಮಸ್ಯೆಯಿಲ್ಲ
ಗ್ರಾಮ ಪಂಚಾಯತ್‌ನಲ್ಲಿ ಕೊಳವೆಬಾವಿ, ಮಳೆಕೊಯ್ಲು ಯೋಜನೆ ಸಿದ್ಧವಾಗಿದೆ. ಕಿನ್ನಿಗೋಳಿ ಗ್ರಾಮ ಪಂಚಾಯತ್‌ನಲ್ಲಿ ಕೊಳವೆಬಾವಿ ಮರುಪೂರಣದ ನೀರು ಇಂಗಿಸುವ ಅನುಷ್ಠಾನದ ಕೆಲಸ ನಡೆದಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನೀರು ಬರುತ್ತಿದ್ದು ಸದ್ಯದ ಮಟ್ಟಿಗೆ ದೊಡ್ಡ ನೀರಿನ ಸಮಸ್ಯೆ ಕಂಡು ಬಂದಿಲ್ಲ.
– ಅರುಣ್‌ ಪ್ರದೀಪ್‌ ಡಿ’ಸೋಜಾ, ಪಿಡಿಒ, ಕಿನ್ನಿಗೋಳಿ ಗ್ರಾ.ಪಂ.

ಸಮರ್ಪಕವಾಗಿ ನೀರು ಸರಬರಾಜು
ಗ್ರಾಮ ಪಂ ಚಾಯ ತ್‌ ವ್ಯಾಪ್ತಿ ಯಲ್ಲಿ ಕಳೆದ ವರ್ಷ ನೀರಿನ ಸಮಸ್ಯೆ ಜಾಸ್ತಿ ಇತ್ತು, ಈ ಬಾರಿ ಬಹುಗ್ರಾಮ ಕಡಿಯುವ ನೀರಿನ ಯೋಜನೆಯಲ್ಲಿ ಸರಿಯಾಗಿ ನೀರು ಬರುತ್ತಿದ್ದು ಸದ್ಯದ ಮಟ್ಟಿಗೆ ಸಮಸ್ಯೆ ಕಂಡುಬಂದಿಲ್ಲ. ಗ್ರಾಮ ಪಂಚಾಯತ್‌ನಿಂದ ಎಸ್‌. ಕೋಡಿ , ಪದ್ಮನೂರಿನಲ್ಲಿ ಇನ್ನಿತರ ಕಡೆಗಳಲ್ಲಿ ನೀರಿನ ಸಮಸ್ಯೆಗೆ ಹೊಸ ಪೈಪ್‌ಲೈನ್‌ ನಿರ್ವಹಣೆ ಹಾಗೂ ದುರಸ್ತಿ ಮಾಡುವ ಮೂಲಕವಾಗಿ ಕೊಳೆವೆ ಬಾವಿಯ ಮೂಲಕವು ಸಮರ್ಪಕವಾಗಿ ನೀರು ಸರಬರಾಜು ನಡೆಯುತ್ತಿದೆ.
– ಫಿಲೋಮಿನಾ ಸಿಕ್ವೇರಾ, ಅಧ್ಯಕ್ಷರು, ಕಿನ್ನಿಗೋಳಿ ಗ್ರಾ.ಪಂ.

- ರಘುನಾಥ್‌ ಕಾಮತ್‌, ಕೆಂಚನಕೆರೆ

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.