ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಅಭಯ
Team Udayavani, Mar 19, 2020, 3:03 AM IST
ಬೆಂಗಳೂರು: ತಾಲೂಕುಗಳಲ್ಲಿ ಶೇ.20ರಷ್ಟು ಖಾಲಿ ಹುದ್ದೆಯಿದ್ದಾಗ ವರ್ಗಾವಣೆ ಸಮಸ್ಯೆ ಎದುರಾಗುವುದು ಪ್ರಮುಖ ವಿಷಯವಾಗಿದೆ. ಅದನ್ನು ಪರಿಹರಿಸಲು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿಧಾನ ಮಂಡಲದ ಉಭಯ ಸದನದಲ್ಲಿ ಶಿಕ್ಷಕರ ವರ್ಗಾವಣೆ ವಿಧೇಯಕ ಅಂಗೀಕಾರದ ನಂತರ ತಮ್ಮ ಫೇಸ್ಬುಕ್ ಖಾತೆ ಮೂಲಕ ಶಿಕ್ಷಕರಿಗೆ ಭರವಸೆಯ ಸಂದೇಶ ನೀಡಿದ್ದಾರೆ. ಶಿಕ್ಷಕರ ಎಲ್ಲ ಸಮಸ್ಯೆಗಳಿಗೂ ಇದು ರಾಮಬಾಣವಲ್ಲ ಎಂಬುದು ನನಗೆ ಚೆನ್ನಾಗಿ ತಿಳಿದಿದೆ.
ಆದರೆ, ಶಿಕ್ಷಕರ ಸಮಸ್ಯೆಗಳ ಶೇ.80ರಷ್ಟಕ್ಕೆ ಪರಿಹಾರ ದೊರಕುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಕಾಯ್ದೆಯಲ್ಲಿ ಅನುಕಂಪವಿದೆ. ಈಗ ಶೇ.20ರಷ್ಟು ಖಾಲಿ ಹುದ್ದೆಯದೊಂದು ಸಮಸ್ಯೆಯಿದೆ. ಬಹಳ ಶಿಕ್ಷಕರಿಗೆ ಇದೇ ಪ್ರಮುಖವಾಗಿ ರುವುದು. ಅದನ್ನೂ ಪರಿಹರಿಸಲು ಕ್ರಮ ಕೈಗೊಳ್ಳುತ್ತಿದ್ದೇನೆ ಎಂದು ಭರವಸೆ ನೀಡಿದ್ದಾರೆ.
ಶಿಕ್ಷಕರಿಗೆ ಮಾತು ಕೊಟ್ಟಂತೆ ಶಿಕ್ಷಕಸ್ನೇಹಿ ವರ್ಗಾವಣೆ ಕಾಯ್ದೆ ವಿಧಾನ ಮಂಡಲದ ಉಭಯ ಸದನದಲ್ಲಿ ಅಂಗೀಕಾರವಾಗಿದೆ. ಇದನ್ನು ಸಾಧ್ಯವಾಗಿ ಸಿದ ವಿಧಾನ ಸಭಾಧ್ಯಕ್ಷರು, ಪರಿಷತ್ತಿನ ಸಭಾಪತಿಗಳು ಮತ್ತು ಎಲ್ಲ ಸದಸ್ಯರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.