ಮಾ.31ರ ಬಳಿಕವೇ ಎಲ್ಲ ಪರೀಕ್ಷೆ ನಡೆಸಿ : ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೂಚನೆ
Team Udayavani, Mar 18, 2020, 11:36 PM IST
ಹೊಸದಿಲ್ಲಿ: ಕೋವಿಡ್ 19 ಹಿನ್ನೆಲೆಯಲ್ಲಿ ಎಲ್ಲ ರೀತಿಯ ಪರೀಕ್ಷೆಗಳನ್ನು ಮಾ.31ರ ಬಳಿಕ ನಡೆಸುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬುಧವಾರ ಸೂಚನೆ ನೀಡಿದೆ. ಸಿಬಿಎಸ್‌ಇ, ಯುಜಿಸಿ, ಎಐಸಿಟಿಇ, ಜಾಯಿಂಟ್ ಎಂಟ್ರನ್ಸ್ ಎಕ್ಸಾಮಿನೇಶನ್ (ಜೆಇಇ), ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್)ಗೂ ಈ ನಿಯಮ ಅನ್ವಯವಾಗುತ್ತದೆ ಎಂದು ಸಚಿವಾಲಯದ ಕಾರ್ಯದರ್ಶಿ ಅಮಿತ್ ಖಾರೆ ತಿಳಿಸಿದ್ದಾರೆ.
ಸದ್ಯ ನಡೆಯುತ್ತಿರುವ ಎಲ್ಲ ರೀತಿಯ ಪರೀಕ್ಷೆಗಳನ್ನು ಮಾ.31ರ ವರೆಗೆ ಮುಂದೂಡಲಾಗಿದೆ. ಅನಂತರ ದಿನಗಳಲ್ಲಿ ಅವುಗಳನ್ನು ಮತ್ತೆ ನಡೆಸುವ ಬಗ್ಗೆ ಪರಿಶೀಲನೆ ನಡೆಸಲು ಅವಕಾಶವಿದೆ. ಸದ್ಯ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯ ಎಂದು ಅವರು ಹೇಳಿದ್ದಾರೆ.
ಅರ್ಥ ವ್ಯವಸ್ಥೆಗೆ ಪ್ಯಾಕೇಜ್?: ಇದೇ ವೇಳೆ ದೇಶದ ಅರ್ಥ ವ್ಯವಸ್ಥೆ ಬಗ್ಗೆ ಕೇಂದ್ರ ಸರಕಾರ ಶುಕ್ರವಾರ ನಡೆಸಲಿರುವ ಸಂಪುಟ ಸಭೆಯ ಬಳಿಕ ಪ್ಯಾಕೇಜ್ ಪ್ರಕಟಿಸುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಹಿತ ಸದ್ಯದ ಬೆಳವಣಿಗೆಗಳನ್ನು ಪರಿಶೀಲಿಸಿ ಅನಂತರ ನಿರ್ಧಾರ ಕೈಗೊಳ್ಳಲಿದ್ದಾರೆಂದು ಖಾಸಗಿ ಟಿವಿ ಚಾನೆಲ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.