ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
Team Udayavani, Mar 19, 2020, 12:41 PM IST
ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಅವರು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭೇಟಿ ನೀಡಿ ಜಗದ್ಗುರು ವೀರ ಸೋಮೇಶ್ವರರಿಂದ ಆಶೀರ್ವಾದ ಪಡೆದರು. ಇದೇ ವೇಳೆ ಹಿರಿಯ ಜಗದ್ಗುರು ವೀರ ಗಂಗಾಧರ ಸ್ವಾಮೀಜಿ ಭಾವಚಿತ್ರವನ್ನು ಕೆಪಿಸಿಸಿ ಕಚೇರಿಯಲ್ಲಿ ಇಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಹಾಗೂ ಕಾರ್ಯಕರ್ತರಿಂದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.
ಈ ವೇಳೆ ಮಾತನಾಡಿದ ಡಿ ಕೆ ಶಿವಕುಮಾರ್ ಅವರು, ರಾಜ್ಯಾದ್ಯಂತ ಕೊರೊನಾದಿಂದ ಆರ್ಥಿಕವಾಗಿ ನಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರ ಸಮಸ್ಯೆ ಬಗೆಹರಿಸಬೇಕು. ಎಲ್ಲಾ ಬ್ಯಾಂಕುಗಳ ಇಎಂಐಗೆ ಒಂದು ತಿಂಗಳ ವಿನಾಯಿತಿ ನೀಡುವಂತೆ ಬ್ಯಾಂಕ್ ಗಳಿಗೆ ಸೂಚಿಸಿ, ಸಾಮಾನ್ಯ ಜನರಿಗೆ ಆರ್ಥಿಕವಾಗಿ ಉಸಿರಾಡಲೂ ಆಗುತ್ತಿಲ್ಲ ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು.
ಕೊರೊನಾದಿಂದ ರಾಜ್ಯದ ಜನ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ವ್ಯಾಪಾರಸ್ಥರು, ಸಣ್ಣ ಉದ್ಯಮಿಗಳು, ನಾಗರಿಕರೂ ತೀವ್ರ ಕಷ್ಟದಲ್ಲಿದ್ದಾರೆ. ಜನರಿಗೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ವಹಿಸಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.