ಜೋಗ ಪ್ಲಾಸ್ಟಿಕ್‌ ಮುಕ್ತ ವಲಯ: ಡಿಸಿ ಘೋಷಣೆ

ಪ್ರಾಧಿಕಾರದ ಪ್ರಮುಖ ದ್ವಾರದವರೆಗೆ ಅತ್ಯಾಧುನಿಕ ಬೀದಿದೀಪ ಅಳವಡಿಕೆಗೆ ಕ್ರಮ

Team Udayavani, Mar 19, 2020, 2:55 PM IST

19-March-32

ಸಾಗರ: ತಾಲೂಕಿನ ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶವನ್ನು ಸಂಪೂರ್ಣ ಪ್ಲಾಸ್ಟಿಕ್‌ ಮುಕ್ತ ವಲಯವಾಗಿ ಘೋಷಣೆ ಮಾಡಲು ಜೋಗ ನಿರ್ವಹಣಾ ಪ್ರಾಧಿಕಾರ ಮಹತ್ವದ ನಿರ್ಣಯ ಕೈಗೊಂಡಿದೆ ಎಂದು ಕಾರ್ಯದರ್ಶಿ ಮತ್ತು ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ತಿಳಿಸಿದರು.

ತಾಲೂಕಿನ ಜೋಗದ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಗೃಹದಲ್ಲಿ ನಡೆದ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಪ್ರಕೃತಿದತ್ತವಾದ ಹಸಿರು ಸೌಂದರ್ಯವನ್ನು ಉಳಿಸುವಲ್ಲಿ ಪ್ಲಾಸ್ಟಿಕ್‌ ಮುಕ್ತ ಪರಿಸರ ನಿರ್ಮಾಣ ಮಾಡಬೇಕಾದ ಅನಿವಾರ್ಯತೆ ಇದೆ ಎಂದರು.

ಸೀತಾಕಟ್ಟೆ ಸೇತುವೆಯಿಂದ ಪ್ರಾಧಿಕಾರದ ಪ್ರಮುಖ ದ್ವಾರದವರೆಗೆ ಅತ್ಯಾಧುನಿಕ ಮಾದರಿಯ ಬೀದಿ ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ರಸ್ತೆಯ ಇಕ್ಕೆಲಗಳಲ್ಲಿ ಇಂಟರ್‌ ಲಾಕ್‌ ಅಳವಡಿಸಿ ರಸ್ತೆ ಅಭಿವೃದ್ಧಿಪಡಿಸಲಾಗುವುದು. ರಾಣಿ ಜಲಪಾತದ ನೆತ್ತಿಯ ಮೇಲಿನ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಪಾರ್ಕಿಂಗ್‌ ಲಾಟ್‌ ಗೆ ಕಾಯಕಲ್ಪ ನೀಡಿ, ಪ್ರವಾಸಿ ವಾಹನಗಳ ನಿಲುಗಡೆ ವ್ಯವಸ್ಥೆಗೆ ಪೂರಕ ವಾತಾವರಣವನ್ನು ಪ್ರಸಕ್ತ ಮುಂಗಾರಿನ ಆಗಮನದ ಒಳಗೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ತ್ಯಾಜ್ಯಗಳ ನಿರ್ವಹಣೆ ಮತ್ತು ಸ್ವಚ್ಛತೆಗಾಗಿ ಅಲ್ಲಲ್ಲಿ ಇರಿಸಿರುವ ಕಸದ ಬುಟ್ಟಿಗಳಿಂದ ಮಂಗಗಳು ಆಹಾರ ಪದಾರ್ಥಗಳನ್ನು ಹುಡುಕಿ ಹೊರಹಾಕುವ ಸಂದರ್ಭದಲ್ಲಿ ಕಸ ಕಡ್ಡಿಗಳು ಎಲ್ಲೆಡೆ ಹರಡಿ ಜಲಪಾತ ಪ್ರದೇಶದ ಸ್ವಚ್ಛತೆಗೆ ತುಂಬಾ ತೊಡಕನ್ನು ಉಂಟು ಮಾಡುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಸದ ಡಬ್ಬಿಗಳಿಗೆ ಕಬ್ಬಿಣದ ಮುಳ್ಳಿನ ಹೊದಿಕೆಗಳನ್ನು ಅಳವಡಿಸಿ ಮಂಗಗಳನ್ನು ನಿಯಂತ್ರಿಸಲು ಸಾಧ್ಯವೇ ಎಂದು ಪ್ರಾಯೋಗಿಕವಾಗಿ ಯೋಜನೆ ರೂಪಿಸಲಾಗುವುದು ಎಂದರು.

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಮೀಸಲಿಡುವ ಅನುದಾನಗಳಿಗೆ ಪೂರಕವಾಗಿ ಜೋಗದ ಸಮಗ್ರ ಅಭಿವೃದ್ಧಿಗೆ 60 ಕೋಟಿ ರೂ. ವಿಸ್ತೃತ ಯೋಜನೆಯನ್ನು ಜಿಎನ್‌ ಆರ್ಕಿಟೆಕ್ಟ್ ಸಂಸ್ಥೆಯವರು ಸಿದ್ಧಪಡಿಸುತ್ತಿದ್ದು, ಆದ್ಯತೆಯ ಮೇರೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು
ಎಂದು ತಿಳಿಸಿದರು.

ಸಹಾಯಕ ಆಯುಕ್ತ ನಾಗರಾಜ್‌ ನಾಯ್ಕ, ತಹಶೀಲ್ದಾರ್‌ ಚಂದ್ರಶೇಖರ್‌ ನಾಯ್ಕ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಮಕೃಷ್ಣ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ದಿನೇಶ್‌, ಕೆಪಿಸಿ, ಅರಣ್ಯ, ಪೊಲೀಸ್‌, ಪಪಂ, ಮೆಸ್ಕಾಂ, ನಿರ್ಮಿತಿ ಕೇಂದ್ರ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.