ಕೋವಿಡ್ 19 ವಿರುದ್ಧ ಬ್ರೇಕ್‌ ದ ಚೈನ್‌

ಮಾದರಿಯಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು

Team Udayavani, Mar 20, 2020, 7:35 AM IST

ಕೋವಿಡ್ 19 ವಿರುದ್ಧ ಬ್ರೇಕ್‌ ದ ಚೈನ್‌

ವಿದ್ಯಾನಗರ: ಕೋವಿಡ್ 19 ವೈರಸ್‌ ಹರಡುವುದನ್ನು ತಡೆಗಟ್ಟುವ ಮೂಲಕ ಮಾತ್ರ ಈ ರೋಗದಿಂದ ಜಗತ್ತನ್ನು ರಕ್ಷಿಸಲು ಸಾಧ್ಯ. ಅದಕ್ಕಾಗಿ ನಾವು ಪಾಲಿಸಬೇಕಾದ ಜಾಗ್ರತಾ ಕ್ರಮಗಳನ್ನು ಸೂಕ್ತ ರೀತಿಯಲ್ಲಿ ಪಾಲಿಸುವಲ್ಲಿ ಯಾವುದೇ ಉದಾಸೀನ ತೋರಬಾರದು. ಸ್ವತ್ಛತೆಗೆ ಆದ್ಯತೆ ನೀಡಬೇಕಾದುದು ಅತೀ ಅಗತ್ಯವಾಗಿದ್ದು ಬ್ರೇಕ್‌ ದ ಚೈನ್ ಆ ನಿಟ್ಟಿನಲ್ಲಿ ಹೆಚ್ಚು ಮಹತ್ವವನ್ನು ಪಡೆಯುತ್ತದೆ. ಆದಷ್ಟು ಈ ಸಂಕೋಲೆಯನ್ನು ತುಂಡರಿಸಿ ಜನರಿಂದ ಜನರಿಗೆ ಹರಡುವ ವೈರಸ್‌ನ್ನು ಹರಡದಂತೆ ಮಾಡಬೇಕು ಎಂದು ನಗರಸಭಾ ಸದಸ್ಯೆ ಶ್ರೀಲತಾ ಟೀಚರ್‌ ಹೇಳಿದರು.

ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ ಹಾಗೂ ರಕ್ಷಕ-ಶಿಕ್ಷಕ ಸಂಘದ ನೇತƒತ್ವದಲ್ಲಿ ಬ್ರೇಕ್‌ ದ ಚೆ„ನ್‌ ಎಂಬ ಧ್ಯೇಯದೊಂದಿಗೆ ಶಾಲೆಯ ಸಮೀಪದ ಚಕ್ಕರ್‌ ಬಜಾರ್‌ ರಸ್ತೆ ಬದಿಯಲ್ಲಿ ಸ್ಥಾಪಿಸಲಾದ ನೀರಿನ ನಳ್ಳಿಯಲ್ಲಿ ಕೈ ತೊಳೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಆಗಾಗ ಕೈಗಳನ್ನು ಸಾಬೂನಿನಿಂದ ತೊಳೆಯುವುದರಿಂದ ರೋಗ ಹರಡುವುದನ್ನು ಸಾಕಷ್ಟು ಮಟ್ಟಿಗೆ ತಡೆಯಬಹುದು. ಆದುದರಿಂದ ಇಂತಹ ಉತ್ತಮ ಕಾರ್ಯಕ್ಕೆ ಮುಂದಾಗುವ ಮೂಲಕ ಈ ದಾರಿಯಾಗಿ ಬರುವವರಿಗೂ, ಪರಿಸರದ ವ್ಯಾಪಾರಿಗಳಿಗೆ ಮತ್ತು ಗ್ರಾಹಕರಿಗೆ ಉಪಯೋಗವಾಗುವಂತೆ ಸೌಕರ್ಯ ಒದಗಿಸುವ ಮನಸು ಮಾಡುವ ಮೂಲಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತನ್ನ ಜನಪರ ಕಾಳಿಜಿಯಿಂದ ಮಾದರಿಯಾಗಿದೆ ಎಂದರು.
ಶಾಲಾ ಮುಖ್ಯೋಪಾಧ್ಯಾಯಿನಿ ಲೀಲಾ ಟೀಚರ್‌ ಮಾತನಾಡಿ ಕೊರೊನಾವನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಸರಕಾರದ ಆದೇಶವನ್ನು, ಸಲಹೆ-ಸೂಚನೆಗಳನ್ನು ಪಾಲಿಸುವುದು ಅತೀ ಅಗತ್ಯವಾಗಿದೆ. ಇದು ರೋಗ ಹರಡುವುದನ್ನು ತಡೆಯುವಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ. ಆದುದರಿಂದ ಜನಸಾಮಾನ್ಯರಲ್ಲಿ ಎಚ್ಚರಿಕೆ ಮೂಡಿಸುವ ಜತೆಯಲ್ಲಿ ಕೈ ತೊಳೆಯುವ ಅಗತ್ಯ, ಮಹತ್ವವನ್ನರಿತು ಬ್ರೇಕ್‌ ದ ಚೆ„ನ್‌ನಲ್ಲಿ ಭಾಗವಹಿಸುವಂತೆ ಮಾಡುವಲ್ಲಿ ನೆರವಾಗುವ ಪುಟ್ಟ ಪ್ರಯತ್ನವನ್ನು ಮಾಡಲು ಮುಂದಾಗಿದ್ದೇವೆ. ಇದರ ಪ್ರಯೋಜನ ಪಡೆದು ರೋಗಮುಕ್ತವಾಗಿಸಲು ಎಲ್ಲರೂ ಮುಂದಾಗಬೇಕು ಎಂ¨ದರು. ಎಸ್‌.ಎಂ.ಸಿ ಚೆಯರ್‌ಮನ್‌ ರಾಶಿದ್‌ ಪೂರಣಂ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅನಿಲ್‌ ಕುಮಾರ್‌, ಶಿಕ್ಷಕ ವೃಂದದವರು ಹಾಗೂ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಜಾಗ್ರತೆಯಿಂದ ಆರೋಗ್ಯ ರಕ್ಷಣೆ
ಶಾಲಾ ನೀರಿನ ಟ್ಯಾಂಕ್‌ನಿಂದ ನೀರಿನ ಸಂಪರ್ಕವಿರುವ ಈ ನಳ್ಳಿಯಲ್ಲಿ ದಿನದ 24 ಗಂಟೆಯೂ ನೀರು ಲಭ್ಯವಿದ್ದು ಜತೆಯಲ್ಲಿ ಸಾಬೂನು ಹಾಗೂ ಹ್ಯಾಂಡ್‌ ವಾಶ್‌ ದ್ರಾವಣವನ್ನು ನಳ್ಳಿಗೆ ನೇತು ಹಾಕಲಾಗಿದ್ದು ಶಾಲೆಯು ಬ್ರೇಕ್‌ ದ ಚೆ„ನ್‌ಗೆ ಮಹತ್ವದ ಕೊಡುಗೆಯನ್ನು ನೀಡಿದಂತಾಗಿದೆ.

ಕೊರೊನಾ ವೈರಸ್‌ ಜನರಲ್ಲಿ ಆತಂಕ ಸೃಷ್ಟಿಸಿರುವುದನ್ನು ಅಲ್ಲಗಳೆಯುವಂತಿಲ್ಲ. ಆದರೆ ಆದಷ್ಟು ಜಾಗ್ರತೆ ಮತ್ತು ಕಾಳಜಿಯ ಮೂಲಕ ಮಾತ್ರವೇ ದೂರಮಾಡಲು ಸಾಧ್ಯ. ಆದುದರಿಂದ ಪ್ರತಿಯೊಬ್ಬರೂ ಬ್ರೇಕ್‌ ದ ಚೈನ್‌ನಲ್ಲಿ ಭಾಗಿಗಳಾಗಬೇಕು. ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಮೂಲಕ ಕೊರೊನಾದ ದಾಳಿಯಿಂದ ದೂರವಿರಲು ಸಾಧ್ಯ.
– ಅನಿಲ್‌ ಕುಮಾರ್‌, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.