ಕೋವಿಡ್ 19 ವೈರಸ್ ಶಂಕಿತರ ಮೇಲೆ ನಿಗಾ
ಪ್ರತ್ಯೇಕ ಕೊಠಡಿಯಲ್ಲಿರುವವರಿಗೆ ಸೌಲಭ್ಯ ಕಲ್ಪಿಸಲು ಸಲಹೆ
Team Udayavani, Mar 20, 2020, 6:09 AM IST
ಮಡಿಕೇರಿ: ಕೋವಿಡ್ 19 ವೈರಸ್ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನುºಕುಮಾರ್ ಅವರು ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ (ಐಸೋಲೇಷನ್) ಇರಿಸಿರುವ ಶಂಕಿತರಿಗೆ ದಿನಪತ್ರಿಕೆ, ಟಿವಿ, ವೈಫೈ ಸೇವೆ ಕಲ್ಪಿಸುವುದು ಹಾಗೂ ಗುಣಮಟ್ಟದ ಆಹಾರವನ್ನು ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು.
ಕೊರೊನಾ ಒಬ್ಬರಿಂದ ಮತ್ತೂಬ್ಬರಿಗೆ ಹರಡುವ ವೈರಸ್ ಆಗಿರುವುದರಿಂದ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದಲ್ಲಿ, ಇದನ್ನು ನಿಯಂತ್ರಣ ಮಾಡಬಹುದಾಗಿದೆ. ಸರ್ಕಾರ ಹೊರಡಿಸುವ ಸಲಹೆ, ಸೂಚನೆಗಳನ್ನು ಪಾಲಿಸಬೇಕಿದ್ದು, ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.
ವಿದೇಶದಿಂದ ಬರುವವರು, ಸೇರಿದಂತೆ ಶಂಕಿತರನ್ನು ಐಸೋಲೇಷನ್ ವಾರ್ಡ್‌ಗೆ ಸೇರಿಸಲಾಗುತ್ತದೆ. ಆ ಸಂದರ್ಭದಲ್ಲಿ ಶಂಕಿತರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು, ಯಾವುದೇ ಕಾರಣಕ್ಕೂ ದೂರುಗಳು ಕೇಳಿಬರಬಾರದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚಿಸಿದರು. ಬಸ್ ನಿಲ್ದಾಣ, ಸಾರ್ವಜನಿಕ ಶೌಚಾಲಯಗಳು ಸೇರಿದಂತೆ ಮತ್ತಿತರ ಕಡೆಗಳಲ್ಲಿ ಬ್ಲೀಚಿಂಗ್ ಪೌಡರ್ ಸಿಂಪಡಿಸಬೇಕು. ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲೆಯ ಕರಿಕೆ, ಕುಟ್ಟ, ಮಾಕುಟ್ಟಗಳಲ್ಲಿ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಪಶುಪಾಲನಾ ಇಲಾಖೆ ವತಿಯಿಂದ ಗಡಿ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಅವರು ತಿಳಿಸಿದರು.
ವಿದೇಶದಿಂದ ಬರುವವರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದ್ದು, ಶಂಕಿತರು ಕಂಡುಬಂದಲ್ಲಿ ಜಿಲ್ಲಾಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕೆ. ಮೋಹನ್ ಅವರು ಮಾಹಿತಿ ನೀಡಿ ಕೊರೊನಾ ವೈರಸ್ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆಯಲ್ಲಿ 22 ಹಾಸಿಗೆಯ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ.
ತಾಲ್ಲೂಕು ಆಸ್ಪತ್ರೆಯಲ್ಲಿ 2 ಹಾಸಿಗೆಯ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು. ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಕಾರ್ಯಪ್ಪ ಅವರು ಕೋವಿಡ್ ಶಂಕಿತರಿಗೆ ಎಲ್ಲÉ ರೀತಿಯ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗಿದೆ ಎಂದರು. ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ತಮ್ಮಯ್ಯ ಅವರು ರಾಜ್ಯದಲ್ಲಿ ಹಕ್ಕಿಜ್ವರ ಕಂಡು ಬಂದಿರುವುದರಿಂದ ಕೊಡಗು ಜಿಲ್ಲೆಯಲ್ಲಿಯೂ ಹೆಚ್ಚಿನ ಗಮನ ಹರಿಸಲಾಗಿದೆ ಎಂದರು. ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಸ್ನೇಹಾ, ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀಕ್ಷಕ ಲೋಕೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ಪೌರಾಯುಕ್ತ ರಮೇಶ್, ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.