ಕೋವಿಡ್‌ 19 ಕುರಿತ ಎಲ್ಲ ಸಂಶಯ ನಿವಾರಣೆಗೆ ಸಹಾಯವಾಣಿ ಸಂಪರ್ಕಿಸಿ

Team Udayavani, Mar 20, 2020, 7:00 AM IST

ಕೋವಿಡ್‌ 19 ಕುರಿತ ಎಲ್ಲ ಸಂಶಯ ನಿವಾರಣೆಗೆ ಸಹಾಯವಾಣಿ ಸಂಪರ್ಕಿಸಿ

ಉಡುಪಿ:ಜಿಲ್ಲೆಯಲ್ಲಿ ಕೋವಿಡ್‌ 19 ವೈರಸ್‌ ಕುರಿತ ನಾಗರಿಕರಲ್ಲಿರುವ ಸಂದೇಹಗಳನ್ನು ಪರಿಹರಿಸಲು, ರೋಗದ ಬಗ್ಗೆ ಮಾಹಿತಿ ನೀಡಲು, ಸಂಶಯಾಸ್ಪದ ರೋಗಿಗಳ ಚಲನವಲನಗಳ ಮಾಹಿತಿ ಸಂಗ್ರಹಿಸಲು, ಐಸೋಲೇಟೆಡ್‌ ಬೆಡ್‌ಗಳ ನಿರ್ವಹಣೆ ಕುರಿತಂತೆ ಸಮಗ್ರ ಮಾಹಿತಿ ಸಂಗ್ರಹಿಸಲು ಸಹಾಯವಾಣಿ ತೆರೆಯಲಾಗಿದೆ.

ಸಹಾಯವಾಣಿಯ ಸಂ. 9663957222 ಅಥವಾ 9663950222 ಆಗಿದ್ದು, ಒಂದೇ ದಿನದಲ್ಲಿ 20ಕ್ಕೂ ಅಧಿಕ ಕರೆಗಳನ್ನು ಸ್ವೀಕರಿಸಿದ್ದು, ಜಿಲ್ಲೆ ಮಾತ್ರವಲ್ಲದೇ ಹೊರ ರಾಜ್ಯದ ಸಾರ್ವಜನಿಕರೂ ಸಹ ಮಾಹಿತಿ ಕೋರಿ ಸಹಾಯವಾಣಿ ಸಂಪರ್ಕಿಸಿದ್ದಾರೆ.

ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಡಿಎಚ್‌ ಒ ಡಾ| ಸುಧೀರ್‌ ಚಂದ್ರ ಸೂಡಾ ಈ ಬಗ್ಗೆ ಮಾಹಿತಿ ನೀಡಿದರು.

ಈ ಸಹಾಯವಾಣಿ 24×7 ಕಾರ್ಯನಿರ್ವಹಿಸುತ್ತಿದ್ದು, ಇದಕ್ಕಾಗಿ 3 ಪಾಳಿಯಲ್ಲಿ ಕಾರ್ಯನಿರ್ವಹಿಸಲು ಒಟ್ಟು 13 ಸಿಬಂದಿ ನಿಯೋಜಿಸಲಾಗಿದ್ದು, ಕೋವಿಡ್‌ 19 ಕುರಿತು ಸಂದೇಹ ಬಗೆಹರಿಸಲು ಕೌನ್ಸಿಲರ್‌ ಸಹ ಇದ್ದು, ಮಾಹಿತಿ ಸಂಗ್ರಹಣೆ, ವಿದೇಶಗಳಿಂದ ಬಂದವರು ಅನುಸರಿಸಬೇಕಾದ ಕ್ರಮಗಳು, ಹೋಂ ಕ್ವಾರಂಟೈನ್‌ ಕುರಿತು ಮಾಹಿತಿ, ಜಿಲ್ಲೆಯ ವಿವಿಧ ಸರಕಾರಿ ಮತ್ತು ಖಾಸಗಿ ಆರೋಗ್ಯ ಕೆಂದ್ರಗಳ ನಡುವಿನ ಮಾಹಿತಿ ವಿನಿಮಯ ಮತ್ತು ದಾಖಲೆಗಳ ಕ್ರೋಡೀಕರಣ ಮಾಡಲಾಗುತ್ತಿದೆ. ಅಲ್ಲದೇ ಜಿಲ್ಲಾ ಮಟ್ಟದಲ್ಲಿ ಕೋವಿಡ್‌ 19 ನಿಯಂತ್ರಣ ಕುರಿತಂತೆ 8 ತಂಡಗಳನ್ನು ರಚಿಸಿದ್ದು, ತಾಲೂಕು ಹಂತದಲ್ಲಿಯೂ ಸಹ ತಂಡಗಳನ್ನು ರಚಿಸಲಾಗಿದೆ ಎಂದು ಡಿಎಚ್‌ ಒ ಡಾ| ಸುದೀರ್‌ ಚಂದ್ರ ಸೂಡಾ ಮಾಹಿತಿ ನೀಡಿದರು.

ಈ ಸಹಾಯವಾಣಿ ಕೇಂದ್ರದಲ್ಲಿ ಯಾವುದೇ ಕೊರೊನಾ ಶಂಕಿತ ರೋಗಿಯ ತಪಾಸಣೆ ನಡೆಸುವುದಿಲ್ಲ. ಆದ್ದರಿಂದ ಸಾರ್ವಜನಿಕರು ಈ ಸಹಾಯವಾಣಿ ಕೇಂದ್ರಕ್ಕೆ ಆಗಮಿಸದಂತೆ ತಿಳಿಸಿದ ಡಿಎಚ್‌ಓ, ಕೊರೋನಾ ಶಂಕಿತ ರೋಗಿಗಳು ಪರೀಕ್ಷೆಗಾಗಿ ಆರೋಗ್ಯ ಇಲಾಖೆಯ ಆಡಳಿತಾತ್ಮಕ ಕಚೇರಿಗೆ ಆಗಮಿಸದೆ, ಸಮೀಪದ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ತೆರಳಿ ಚಿಕಿತ್ಸೆ ಪರೀಕ್ಷಿಸಿಕೊಳ್ಳಬೇಕು. ಆಡಳಿತ ಕಚೇರಿಯಲ್ಲಿ ಚಿಕಿತ್ಸೆ ನೀಡುವ ವೈದ್ಯರು ಹಾಗೂ ಉಪಕರಣಗಳು ಇರುವುದಿಲ್ಲ ಎಂದು ತಿಳಿಸಿದರು.

ಕೋವಿಡ್‌ 19 ಕುರಿತ ಮಾಹಿತಿಯನ್ನು ಜಿಲ್ಲಾಧಿಕಾರಿ ಮತ್ತು ಡಿ.ಎಚ್‌.ಒ. ಮಾತ್ರ ನೀಡಲು ಸರಕಾರದ ಆದೇಶವಿರುವುದಿಂದ ಮಾಹಿತಿ ಕೋರಿ ಸಹಾಯವಾಣಿಯನ್ನು ಸಂಪರ್ಕಿಸುವಂತೆ ಡಿಎಚ್‌ಒ ಸ್ಪಷ್ಟಪಡಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ಕುರಿತಂತೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸೈಬರ್‌ ಕ್ರೆçಂ ಗೆ ದೂರು ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು ಅಂತಹವರ ವಿರುದ್ಧ ಕೋವಿಡ್‌ 19- 2020 ನಿಯಂತ್ರಣ ಕಾಯ್ದೆಯನ್ವಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಜಿಲ್ಲೆಯಿಂದ ವಿದೇಶಗಳಿಗೆ ತೆರಳುವವರು, ತಮಗೆ ಕೊರೊನಾ ಇಲ್ಲದ ಕುರಿತು ಪ್ರಮಾಣ ಪತ್ರ ನೀಡುವಂತೆ ಆಗಮಿಸುತ್ತಿದ್ದು, ಅಂತಹ ಯಾವುದೇ ಪ್ರಮಾಣಪತ್ರ ನೀಡಲು ಆದೇಶವಿಲ್ಲ ಹಾಗೂ ವಿದೇಶ ಪ್ರಯಾಣಕ್ಕೆ ಯಾವುದೇ ಅನುಮತಿ ಸಹ ನೀಡುವುದಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ವಿದೇಶ ಪ್ರಯಾಣವನ್ನು ಮುಂದೂಡುವುದು ಉತ್ತಮ ಎಂದು ಡಿಎಚ್‌ಒ ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್‌ ಭಟ್‌, ಜಿಲ್ಲಾ ಆರ್‌.ಸಿ.ಎಚ್‌. ಅಧಿಕಾರಿ ಡಾ| ಎಂ.ಜಿ.ರಾಮ, ಜಿಲ್ಲಾ ಹಿರಿಯ ಆರೋಗ್ಯ ಮೇಲ್ವಿಚಾರಕ ಸತೀಶ್‌, ಜಿಲ್ಲಾ ಕೋವಿಡ್‌ 19 ನಿಯಂತ್ರಣ ಕಾರ್ಯಪಡೆಯ ಸದಸ್ಯರಾದ ಪ್ರೀತಮ್‌, ಗಿರೀಶ್‌ ಕಡ್ಡೀಪುಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.