ಜ್ವರವಿರುವ ವಿದ್ಯಾರ್ಥಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿ

Team Udayavani, Mar 20, 2020, 6:02 PM IST

ಜ್ವರವಿರುವ ವಿದ್ಯಾರ್ಥಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿ

ಸಾಂದರ್ಭಿಕ ಚಿತ್ರ

ಕೊಪಳ: ಸರ್ಕಾರವು ಪ್ರತಿನಿತ್ಯ ಕಠಿಣ ನಿಲುವು ಪ್ರಕಟಿಸುವ ಮೂಲಕ ಕೊರೊನಾ ವೈರಸ್‌ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದೆ. ಮಾರ್ಚ್‌ನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಆ ವೇಳೆ ವಿದ್ಯಾರ್ಥಿಗಳಿಗೆ ಜ್ವರ, ಕೆಮ್ಮು, ನೆಗಡಿ ಕಂಡುಬಂದರೆ ಅವರಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿ ವ್ಯವಸ್ಥೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಹೌದು. ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ನಿರ್ಧಾರ ಕೈಗೊಳ್ಳುತ್ತಿದೆ. ಈಗಾಗಲೇ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ಮುಖ್ಯಘಟ್ಟವಿದ್ದು, ಅವರಿಗೆ ಪರೀಕ್ಷೆಯಲ್ಲಿ ತೊಡಗುವಂತೆ ಮಾಡಲು ಹತ್ತಾರು ನಿರ್ಧಾರ ಕೈಗೊಳ್ಳಲಾಗಿದೆ.

ಕೇಂದ್ರದಲ್ಲಿ ಕೈತೊಳೆದುಕೊಳ್ಳಬೇಕು: ರಾಜ್ಯಾದ್ಯಂತ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಬಂದರೆ ಯಾವುದೇ ತೊಂದರೆಯಿಲ್ಲ. ಅಂತಹ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕೂಡುವಂತೆ ಮಾಡಲು ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದೆ. ಕೇಂದ್ರದ ಅಧೀಕ್ಷಕರು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡುವಂತೆಯೂ ಸೂಚನೆ ನೀಡಿದೆ. ಅಲ್ಲದೇ, ಕೇಂದ್ರದಲ್ಲಿ ಸ್ಯಾನಿಟೈಸರ್‌ಗಳನ್ನು ಇಟ್ಟು ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ, ಎಲ್ಲ ಹಂತದ ಅಧಿಕಾರಿಗಳಿಗೆ, ಸಿಬ್ಬಂದಿಗೆ ಕೈಗಳನ್ನು ಸ್ವತ್ಛವಾಗಿ ತೊಳೆದುಕೊಂಡು ಪರೀಕ್ಷಾ ಕಾರ್ಯದಲ್ಲಿ ತೊಡಗುವಂತೆಯೂ ಸೂಚನೆ ನೀಡಿದೆ.

ಕೆಮ್ಮು, ಜ್ವರವಿದ್ದರೆ ಪ್ರತ್ಯೇಕ ಕೊಠಡಿ: ಇನ್ನೂ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆಮ್ಮು, ನೆಗಡಿ ಹಾಗೂ ಜ್ವರವಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಿಸಿ ಅಲ್ಲಿ ಕುಳಿತು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆಯೂ ಎಲ್ಲ ಡಿಡಿಪಿಐ, ಬಿಇಒ ಹಾಗೂ ಡಯಟ್‌ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬಿಇಒಗಳು ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೂ ಈ ವಿಷಯವನ್ನು ರವಾನೆ ಮಾಡಿದ್ದಾರೆ.

ಸೂಕ್ಷ್ಮ ಜಿಲ್ಲೆಗಳಲ್ಲಿ ಹೆಚ್ಚಿನ ಕಾಳಜಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಂಡಿದ್ದು, ಅಂತಹ ಜಿಲ್ಲೆಗಳ ಮೇಲೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ ವಹಿಸಿದೆ. ಸಾಮಾನ್ಯವಾಗಿ ಒಂದು ಪರೀಕ್ಷಾ ಕೊಠಡಿಯಲ್ಲಿ 24 ವಿದ್ಯಾರ್ಥಿಗಳು ಕುಳಿತು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುತ್ತದೆ. ಆದರೆ ಸೂಕ್ಷ್ಮ ಪ್ರದೇಶದ ಜಿಲ್ಲೆಯಲ್ಲಿ 15-20 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿದೆ. ಇನ್ನೂ ವಿದ್ಯಾರ್ಥಿಯಿಂದ ಮತ್ತೂಬ್ಬ ವಿದ್ಯಾರ್ಥಿಯ ನಡುವೆ ಅಂತರ ಕಾಯ್ದುಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಒಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಕ್ಕಳಿಗೆ ಮುಖ್ಯಘಟ್ಟವಾಗಿದ್ದರೆ, ಸರ್ಕಾರಕ್ಕೆ ಇಕ್ಕಟ್ಟಿನ ಪರಿಸ್ಥಿತಿ ಎಂಬಂತ್ತಾಗಿದೆ. ಅನಿವಾರ್ಯತೆ ನಡುವೆಯೂ ಪರೀಕ್ಷೆ ನಡೆಸಲೇಬೇಕಿದೆ. ಈ ಮಧ್ಯೆ ಕೊರೊನಾ ವೈರಸ್‌ ಬಗ್ಗೆ ನಿಗಾ ವಹಿಸಿ ನಿಯಂತ್ರಣದಲ್ಲಿಡಲು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಕೊರೊನಾ ಎಫೆಕ್ಟ್ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ಸರ್ಕಾರದಿಂದ ಆದೇಶ ಬಂದಿದೆ. ಅಂತಹ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಿದ್ದೇವೆ. ಜ್ವರ, ಕೆಮ್ಮು, ನೆಗಡಿ ಇರುವಂತಹ ವಿದ್ಯಾರ್ಥಿಗಳಿದ್ದರೆ ಅಂತಹವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸುವಂತೆಯೂ ಆದೇಶ ಬಂದಿದ್ದು, ಆ ಮಾಹಿತಿಯನ್ನೂ ಎಲ್ಲ ಬಿಇಒಗಳ ಗಮನಕ್ಕೆ ತಂದಿದ್ದೇವೆ. –ದೊಡ್ಡಬಸಪ್ಪ ನೀರಲಕೇರಿ, ಡಿಡಿಪಿಐ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ: ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

9-gangavathi

Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.