ವೈದ್ಯರ ಹೋರಾಟಕ್ಕೆ ಪುನೀತ್ ಸೆಲ್ಯೂಟ್
ಕೊರೊನಾ ಎಫೆಕ್ಟ್: #ಬ್ರಾವೋಡಾಕ್ಟರ್ ಅಭಿಯಾನ
Team Udayavani, Mar 21, 2020, 7:04 AM IST
ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿದ್ದು, ಸರ್ಕಾರ ಕೂಡ ಬಿಗಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮತ್ತೂಂದೆಡೆ, ಕೊರೊನಾ ವಿರುದ್ದ ಹೋರಾಟಕ್ಕೆ ಜನ ಸಾಮಾನ್ಯರು, ವಿವಿಧ ಕ್ಷೇತ್ರಗಳ ಗಣ್ಯರು ಕೂಡ ಸಾಥ್ ನೀಡುತ್ತಿದ್ದಾರೆ. ಇನ್ನು ಚಿತ್ರರಂಗದ ಮಂದಿಕೂಡ ಇದರಲ್ಲಿ ಹಿಂದೆ ಬಿದ್ದಿಲ್ಲ. ಈಗಾಗಲೇ ಚಿತ್ರರಂಗದ ಹಲವು ತಾರೆಯರು, ಸ್ಟಾರ್-ಸೆಲೆಬ್ರಿಟಿಗಳು ಕೊರೊನಾ ವಿರುದ್ದ ಜನ ಜಾಗೃತಿ ಕೆಲಸ ಮಾಡುತ್ತಿದ್ದಾರೆ.
ಇದೀಗ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಕೂಡ ಕೊರೊನಾ ಎನ್ನುವ ಮಹಾಮಾರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಹ್ಯಾಟ್ಸಾಫ್ ಹೇಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ “ಬ್ರಾವೋಡಾಕ್ಟರ್’ ಎನ್ನುವ ಹೊಸ ಅಭಿಯಾನ ಪ್ರಾರಂಭವಾಗಿದ್ದು, ಸದ್ಯದ ಅಪಾಯಕಾರಿ ಸಂದರ್ಭದಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಈ ಅಭಿಯಾನದ ಮೂಲಕ ಸೆಲ್ಯೂಟ್ ಹೇಳಲಾಗುತ್ತಿದೆ.
Starting this hashtag challenge – #bravodoctors Pl share and show your solidarity to the medical professionals- our corona warriors …. Saluting our medical professionals who are the most vulnerable and yet are fighting this pandemic from the frontlines..pl share this hashtag pic.twitter.com/AninWWGor0
— Puneeth Rajkumar (@PuneethRajkumar) March 20, 2020
ಸಾಮಾಜಿಕ ಜಾಲತಾಣದಲ್ಲಿ “ಬ್ರಾವೋಡಾಕ್ಟರ್’ ಹ್ಯಾಶ್‌ಟ್ಯಾಗ್ ಬಳಸಿ ಶೇರ್ ಮಾಡುವ ಮೂಲಕ ವೈದ್ಯರಿಗೆ ಸೆಲ್ಯೂಟ್ ಹೇಳುವ ಇಂತಹ ಅಭಿಯಾನದಲ್ಲಿ ಇದೀಗ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೂಡ ಭಾಗಿಯಾಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ “ಬ್ರಾವೋಡಾಕ್ಟರ್’ ಎನ್ನುವ ಹ್ಯಾಶ್ ಟ್ಯಾಗ್ ಬಳಸಿ ಪೋಸ್ಟ್ ಶೇರ್ ಮಾಡಿರುವ ಪುನೀತ್ ರಾಜಕುಮಾರ್, ದಯವಿಟ್ಟು ಎಲ್ಲರೂ ಶೇರ್ ಮಾಡಿ, ಒಗ್ಗಟ್ಟನ್ನು ಪ್ರದರ್ಶಿಸಿ. ಕೊರೊನಾ ವಿರುದ್ಧ ಹೋರಾಡುತ್ತಿರುವ ನಮ್ಮ ವೈದ್ಯಕೀಯ ಸಿಬ್ಬಂದಿಗೆ ಎಲ್ಲರ ಬೆಂಬಲವಿರಲಿ.
ಅಪಾಯಕಾರಿ ವಾತಾವರಣದಲ್ಲೂ ಮುಂದೆ ನಿಂತು ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಹೋರಾಡುತ್ತಿರುವ ಎಲ್ಲ ವೈದ್ಯರಿಗೆ ನನ್ನ ಸೆಲ್ಯೂಟ್. ದಯವಿಟ್ಟು ಹ್ಯಾಶ್ ಟ್ಯಾಗ್ ಶೇರ್ ಮಾಡಿ ಎಂದು ಹೇಳಿದ್ದಾರೆ. ಇನ್ನು ಪುನೀತ್ ರಾಜಕುಮಾರ್ ಶೇರ್ ಮಾಡಿರುವ ಈ ಹ್ಯಾಶ್ ಟ್ಯಾಗ್ ಅನ್ನು ಪುನೀತ್ ಅಭಿಮಾನಿಗಳು ಮತ್ತು ಚಿತ್ರರಂಗದ ಸಾಕಷ್ಟು ಗಣ್ಯರು ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡುವ ಮೂಲಕ ಅಭಿಯಾನದಲ್ಲಿ ಬಾಗಿಯಾಗುತ್ತಿದ್ದಾರೆ. ನಟ ಧನಂಜಯ್ ಕೂಡ ಹ್ಯಾಶ್ ಟ್ಯಾಗ್ ಶೇರ್ ಮಾಡಿ ವೈದ್ಯಕೀಯ ಸಿಬ್ಬಂದಿಗೆ ಸೆಲ್ಯೂಟ್ ಹೇಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.