ತಾಪಕ್ಕೆ ಬತ್ತುತ್ತಿದೆ ಮುಲ್ಲಾಮಾರಿ ನದಿ
ಜಲಾಶಯದಿಂದ ನದಿಗೆ ನೀರು ಬಿಡಲು ಒತ್ತಾಯದನಕರುಗಳಿಗೂ ಕುಡಿಯಲು ಸಿಗುತ್ತಿಲ್ಲ ನೀರು
Team Udayavani, Mar 21, 2020, 10:35 AM IST
ಚಿಂಚೋಳಿ: ಸೇಡಂ ಮತ್ತು ಚಿಂಚೋಳಿ ತಾಲೂಕಿನ ಜನರ ಜೀವನಾಡಿ ಆಗಿರುವ ಮುಲ್ಲಾಮಾರಿ ನದಿ ಬಿಸಿಲಿನ ತಾಪಕ್ಕೆ ದಿನೇ ದಿನೇ ಬತ್ತಿ ಹೋಗುತ್ತಿದ್ದು, ನದಿಯಲ್ಲಿನ ನೀರು ಗಬ್ಬು ವಾಸನೆ ಹೊಡೆಯುತ್ತಿದೆ.
ನೀರು ಹರಿಯದೇ ನಿಂತಲ್ಲೆ ನಿಂತು ಹಾಸುಗಟ್ಟುತ್ತಿದೆ. ಇದರಿಂದ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಆದ್ದರಿಂದ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ನದಿಗೆ ನೀರು ಹರಿ ಬಿಡಬೇಕೆಂದು ಸಾಮಾಜಿಕ ಕಾರ್ಯಕರ್ತ ಭೀಮಶೆಟ್ಟಿ ಮುಕ್ಕಾ ಒತ್ತಾಯಿಸಿದ್ದಾರೆ.
ಕೆಳದಂಡೆ ಮುಲ್ಲಾಮಾರಿ ನದಿ ಪಾತ್ರದಲ್ಲಿ ಬರುವ ಚಿಮ್ಮನಚೋಡ, ತಾಜಲಾಪುರ, ಕನಕಪುರ, ಗಾರಂಪಳ್ಳಿ, ಗೌಡನಹಳ್ಳಿ,ನಿಮಾಹೊಸಳ್ಳಿ, ಚಿಂಚೋಳಿ, ಅಣವಾರ, ಗಂಗನಪಳ್ಳಿ, ಪರದಾರ ಮೋತಕಪಳ್ಳಿ, ಗರಗಪಳ್ಳಿ, ಇರಗಪಳ್ಳಿ, ಬುರುಗಪಳ್ಳಿ, ಕರಚಖೇಡ, ಚತ್ರಸಾಲ, ಜಟ್ಟೂರ, ಪೋತಂಗಲ್, ಹಲಕೋಡಾ ಗ್ರಾಮ ಮತ್ತು ಸೇಡಂ ತಾಲೂಕಿನ 15 ಹಳ್ಳಿಗಳ ಜನರು ಮುಲ್ಲಾಮಾರಿ ನದಿ ನೀರಿನ ಮೇಲೆ ಅವಲಂಬಿತರಾಗಿದ್ದಾರೆ.
ಕನಕಪುರ, ಗಾರಂಪಳ್ಳಿ, ನಿಮಾಹೊಸಳ್ಳಿ ಬಳಿ ಬ್ಯಾರೇಜ್ ನಿರ್ಮಿಸಿದ್ದರಿಂದ ನದಿಯಲ್ಲಿ ನೀರು ಹರಿಯುತ್ತಿಲ್ಲ. ಇದರಿಂದ ದನಕರುಗಳಿಗೆ ಕುಡಿಯಲು ನೀರು ಸಿಗುತ್ತಿಲ್ಲ. ತೆಗ್ಗು-ಗುಂಡಿಗಳಲ್ಲಿ ನಿಂತ ನೀರು ಹೊಲಸು ನಾರುತ್ತಿದೆ. ತಾಲೂಕಿನ ನಾಗರಾಳ ಗ್ರಾಮದ ಬಳಿ ಮುಲ್ಲಾಮಾರಿ ಜಲಾಶಯ ನಿರ್ಮಿಸಲಾಗಿದೆ. ಆದರೆ ಪ್ರಸಕ್ತ ಸಾಲಿನಲ್ಲಿ ಅಲ್ಪ-ಸ್ವಲ್ಪ ಮಳೆ ಆಗಿರುವುದರಿಂದ ಜಲಾಶಯದ ಸುರಕ್ಷತೆ ಕಾಪಾಡಿಕೊಳ್ಳುವುದಕ್ಕಾಗಿ ಜಲಾಶಯದಿಂದ ಸೆಪ್ಟೆಂಬರ್-ಅಕ್ಟೋಬರ್-ನವೆಂಬರ್ ತಿಂಗಳವರೆಗೆ ಒಟ್ಟು 10 ಸಲ ಜಲಾಶಯದಿಂದ 650 ಕ್ಯೂಸೆಕ್ ನೀರು ಹರಿ ಬಿಟ್ಟರೂ ಜಲಾಶಯದಲ್ಲಿ ನೀರಿನ ಗರಿಷ್ಟಮಟ್ಟ 490.79 ಮೀಟರ್ ಇದೆ.
ಜಲಾಶಯದಿಂದ ಯೋಜನೆಯ ಮುಖ್ಯ ಕಾಲುವೆ ಆಧುನಿಕರಣ ಕಾಮಗಾರಿ ನಡೆಯುತ್ತಿದ್ದುದರಿಂದ ಕಳೆದ ಮೂರು ವರ್ಷಗಳಿಂದ ಮುಖ್ಯ ಕಾಲುವೆಗೆ ನೀರು ಹರಿಸಿಲ್ಲ. ಹೀಗಾಗಿ ಜಲಾಶಯದಲ್ಲಿ ಹೆಚ್ಚಿನ ನೀರು ಸಂಗ್ರಹವಾಗಿದೆ. ಆದ್ದರಿಂದ ದನಕರುಗಳಿಗಾಗಿ ಮುಲ್ಲಾಮಾರಿ ಜಲಾಶಯದಿಂದ ನದಿಗೆ ನೀರು ಹರಿ ಬಿಡಬೇಕೆಂದು ಕಾಂಗ್ರೆಸ್ ಮುಖಂಡ ಸುಭಾಷ ರಾಠೊಡ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಮುಲ್ಲಾಮಾರಿ ನದಿ ನೀರನ್ನು ಕಲ್ಲೂರ ಚೆಟ್ಟಿನಾಡ್ ಸಿಮೆಂಟ್ ಕಂಪನಿ, ಚತ್ರಸಾಲ ಕಲಬುರಗಿ ಸಿಮೆಂಟ್ ಕಂಪನಿ, ಸೇಡಂ ತಾಲೂಕಿನ ವಾಸವದತ್ತಾ ಸಿಮೆಂಟ್ ಕಂಪನಿ ಬಳಕೆ ಮಾಡಿಕೊಳ್ಳುತ್ತಿವೆ. ಆದರೆ ನದಿ ದಿನೇ ದಿನೇ ಬತ್ತುತ್ತಿರುವುದರಿಂದ ಸಿಮೆಂಟ್ ಕಂಪನಿಗಳಿಗೆ ನೀರು ಸರಬರಾಜು ಆಗುತ್ತಿಲ್ಲ. ಇದರಿಂದ ಕಂಪನಿ ನೌಕರರು ದಿನ ಬಳಕೆ, ಕುಡಿಯುವ ನೀರಿಗಾಗಿ ತೊಂದರೆ ಪಡಬೇಕಾಗಿದೆ.
ಮುಲ್ಲಾಮಾರಿ ನದಿ ನೀರಿಲ್ಲದೇ ಬತ್ತುತ್ತಿದೆ. ನದಿ ಪಾತ್ರದ ಗ್ರಾಮಸ್ಥರು, ಜಾನುವಾರುಗಳಿಗೆ ಕುಡಿಯಲು ನೀರಿನ ಸಮಸ್ಯೆ ಉಂಟಾಗಿದೆ. ಅನೇಕ ಗ್ರಾಮಸ್ಥರು ನದಿಗೆ ನೀರು ಹರಿ ಬಿಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಕುರಿತು ಶಾಸಕರು, ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಅಧಿಕಾರಿಗಳು ಆದೇಶ ನೀಡಿದ ತಕ್ಷಣವೇ ಮುಲ್ಲಾಮಾರಿ ನದಿಗೆ ನೀರು ಹರಿದು ಬಿಡಲಾಗುವುದು. .ಹಣಮಂತರಾವ್ ಪೂಜಾರಿ,
ಎಇಇ, ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ
ಮುಲ್ಲಾಮಾರಿ ನದಿ ಬೇಸಿಗೆ ದಿನಗಳಲ್ಲಿ ಬತ್ತುತ್ತಿದೆ. ಕೆಳದಂಡೆ ಮುಲ್ಲಾಮಾರಿ ನದಿಯಿಂದ ಕೂಡಲೇ ನೀರು ಹರಿ ಬಿಡಬೇಕು. ಇಲ್ಲದಿದ್ದರೆ ಯೋಜನೆ ಬಳಿ ಪ್ರತಿಭಟನೆ, ಸತ್ಯಾಗ್ರಹ ನಡೆಸಲಾಗುವುದು.
ಭೀಮಶೆಟ್ಟಿ ಎಂಪಳ್ಳಿ,
ರೈತ ಸಂಘದ ಜಿಲ್ಲಾಧ್ಯಕ್ಷ
ಶಾಮರಾವ ಚಿಂಚೋಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.