ಆರೋಗ್ಯ ಯೋಧರು : ಅಮ್ಮನ ಸಾವಿನ ಸುದ್ದಿ ಕೇಳಿಯೂ ಕರ್ತವ್ಯ ಬಿಡಲಿಲ್ಲ!
Team Udayavani, Mar 21, 2020, 11:02 AM IST
ಕೋವಿಡ್ 19 ವೈರಸ್ ನಂತಹ ಮಾರಣಾಂತಿಕ ಕಾಯಿಲೆಯೊಂದು ಜಗತ್ತನ್ನೇ ಬೆಚ್ಚಿ ಬೀಳಿಸಿರುವಾಗಲೂ ಅಲ್ಲಲ್ಲಿ ಕೆಲವರ ನಿಸ್ವಾರ್ಥ ಸೇವೆಗಳು, ಕರ್ತವ್ಯಪ್ರಜ್ಞೆ ಹಾಗೂ ಮಾನವೀಯ ನಡೆಗಳು ಭರವಸೆಯ ಬೆಳಕನ್ನು ಮೂಡಿಸುತ್ತಿವೆ. ಜನಮಾನಸದಲ್ಲಿ ಹೀರೋಗಳಾಗಿ ಹೊರಹೊಮ್ಮುತ್ತಿರುವ ಇಂತಹ ವ್ಯಕ್ತಿತ್ವ ಗಳ ಸಾಲಿಗೆ ಹೊಸ ಸೇರ್ಪಡೆಯೆಂದರೆ ಒಡಿಶಾದ ವೈದ್ಯ ಅಶೋಕ್ ದಾಸ್.
ಇಲ್ಲಿನ ಸಂಬಾಲ್ಪುರದ ವೈದ್ಯರಾದ ದಾಸ್ ಅವರು ಕೋವಿಡ್-19ಗೆ ಸಂಬಂಧಿಸಿದ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ 80 ವರ್ಷದ ತಾಯಿಯು ಅಸುನೀಗಿದ ಸುದ್ದಿ ತಿಳಿದೂ, ನೋವನ್ನು ನುಂಗಿಕೊಂಡು, ಅಂದಿನ ತಮ್ಮ ಎಲ್ಲ ಕರ್ತವ್ಯಗಳನ್ನೂ ಪೂರೈಸಿ ಅನಂತರವೇ ಅಮ್ಮನ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಸಾವಿನ ಸುದ್ದಿ ತಲುಪಿದ ಬಳಿಕವೂ, ಹಲವು ಸಭೆಗಳಲ್ಲಿ ಭಾಗಿಯಾಗಿ, ಆಸ್ಪತ್ರೆಗೆ ತೆರಳಿ, ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮುಗಿಸಿ, ಸಂಜೆಯ ವೇಳೆಗೆ ಕೊನೇ ಬಾರಿಗೆ ಅಮ್ಮನ ಮುಖ ನೋಡಿ, ಅಂತಿಮ ವಿಧಿವಿಧಾನ ಪೂರೈಸುವ ಮೂಲಕ ತಮ್ಮ ಕರ್ತವ್ಯಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡಿದ್ದಾರೆ. ಜನಸೇವೆಯೇ ಎಲ್ಲಕ್ಕಿಂತ ಮುಖ್ಯ ಎಂದೂ ಹೇಳಿದ್ದಾರೆ ದಾಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.