ಕೋವಿಡ್-19 ಕಳವಳ: ಪೂಲ್ ರೈಡ್ ರದ್ದುಗೊಳಿಸಿದ ಊಬರ್, ಓಲಾ
Team Udayavani, Mar 21, 2020, 12:25 PM IST
ಬೆಂಗಳೂರು: ದೇಶದಾದ್ಯಂತ ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ತಮ್ಮ ವ್ಯಾಪ್ತಿಯನ್ನು ಹೆಚ್ಚಿಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದೇಶದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ರವಿವಾರ ಜನತಾ ಕರ್ಫ್ಯೂ ಗೆ ಕರೆಕೊಟ್ಟಿದ್ದಾರೆ.
ಇದೇ ವೇಳೆಗೆ ಕ್ಯಾಬ್ ಕಂಪನೆಗಳಾದ ಓಲಾ ಮತ್ತು ಊಬರ್ ತನ್ನ ಪೂಲ್ ಡ್ರೈವ್ ಸೇವೆಯನ್ನು ರದ್ದು ಮಾಡಿದೆ. ಕೋವಿಡ್ -19 ಸೋಂಕು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಪೂಲ್ ರೈಡ್ ಅನ್ನು ರದ್ದು ಮಾಡಿದೆ.
ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚಾದ ನಂತರ ಓಲಾ ಮತ್ತು ಊಬರ್ ಗಳಲ್ಲಿ ಪೂಲ್ ರೈಡ್ ಮಾಡುವ ಜನರ ಸಂಖ್ಯೆ ಕಡಿಮೆಯಾಗಿದೆ. ಸೋಂಕಿನ ಕುರಿತು ಭಯಬೀತರಾಗಿರುವ ಜನರು ಪೂಲ್ ರೈಡ್ ಕಡೆಗೆ ಮನಸ್ಸು ಮಾಡುತ್ತಿಲ್ಲ ಎನ್ನಲಾಗಿದೆ.
ಭಾರತದಲ್ಲಿ ಇದುವರೆಗೆ 275 ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಐದು ಜನರು ಸೋಂಕಿನ ಪರಿಣಾಮ ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಶನಿವಾರ ಒಂದು ಹೊಸ ಪ್ರಕರಣ ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.