ಕೋವಿಡ್‌ 19 ವಿರುದ್ಧ ಸಮರಕ್ಕೆ ಎಲ್ಲ ಕೈಜೋಡಿಸೋಣ: ಡಿ.ವಿ.ಸದಾನಂದಗೌಡ


Team Udayavani, Mar 21, 2020, 10:03 PM IST

ಕೋವಿಡ್‌ 19 ವಿರುದ್ಧ ಸಮರಕ್ಕೆ ಎಲ್ಲ ಕೈಜೋಡಿಸೋಣ: ಡಿ.ವಿ.ಸದಾನಂದಗೌಡ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ಸ್ವಯಂಪ್ರೇರಿತರಾಗಿ ಜನತಾ ಕರ್ಫ್ಯೂ ಆಚರಿಸಲು ಕರೆ ನೀಡಿದ್ದು, ಅದಕ್ಕೆ ನಾವೆಲ್ಲಾ ಸ್ಪಂದಿಸಿ ದೃಢ ಸಂಕಲ್ಪ ಮಾಡೋಣ. ಇದು ಕೋವಿಡ್‌ 19 ರೋಗ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಪುಟ್ಟ ಹೆಜ್ಜೆಯಾಗಿದ್ದು, ದೇಶದ ಹಿತಕ್ಕೆ ಸಣ್ಣ ಸಹಯೋಗ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಡಿ.ವಿ.ಸದಾನಂದಗೌಡ, ಕೋವಿಡ್‌ 19 ರೋಗ ತಡೆಗಟ್ಟಲು ವೈದ್ಯರು, ಅರೆವೈದ್ಯ ಸಿಬ್ಬಂದಿ, ವೈಮಾನಿಕ, ಸಾರಿಗೆ ಸಿಬ್ಬಂದಿ, ಪೊಲೀಸರು, ಯೋಧರು, ಸರ್ಕಾರಿ, ಅರೆ ಸರ್ಕಾರಿ ನೌಕರರು, ಮಾಧ್ಯಮದವರು… ಹೀಗೆ ಲಕ್ಷಾಂತರ ಮಂದಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ಹಾಗಾಗಿ ಭಾನುವಾರ ಸಂಜೆ 5 ಗಂಟೆಗೆ ನಾವೆಲ್ಲಾ ಮನೆಯಿಂದಲೇ ಅವರಿಗೆ 5 ನಿಮಿಷ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸೋಣ ಎಂದು ಪ್ರಧಾನಿಯವರು ಹೇಳಿದ್ದಾರೆ. ಕೋವಿಡ್‌ 19 ರೋಗವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವುದನ್ನು ಮನಗಂಡಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ನಮ್ಮ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಕೋವಿಡ್‌ 19 ಮಾರಿ ವಿರುದ್ಧ ಸಮರ ಸಾರಲಾಗಿದೆ ಎಂದು ತಿಳಿಸಿದ್ದಾರೆ.

ಈ ಸೂಕ್ಷ್ಮ ಸಂದರ್ಭದಲ್ಲಿ ನಮ್ಮ ಜವಾಬ್ದಾರಿ ಹೆಚ್ಚು ಇದೆ. ಈ ರೋಗಕ್ಕೆ ಈವರೆಗೆ ಯಾವುದೇ ಲಸಿಕೆ ಅಭಿವೃದ್ಧಿಯಾಗದ ಕಾರಣ ರೋಗ ಬರದಂತೆ ನೋಡಿಕೊಳ್ಳುವುದೇ ಪರಿಹಾರ. ಸ್ವಲ್ಪ ಕಾಲ ನಮ್ಮ ಸಾಮಾಜಿಕ ಬದುಕು, ಓಡಾಟವನ್ನು ಕಡಿಮೆ ಮಾಡಬೇಕಿದೆ. ನಾಗರಿಕರ ಸಹಕಾರ ಅಗತ್ಯವಾಗಿದೆ. ಹಿರಿಯ ನಾಗರಿಕರು ನಿಯಮಿತ ಆರೋಗ್ಯ ಪರೀಕ್ಷೆಯನ್ನು ಸ್ವಲ್ಪ ಕಾಲ ಮುಂಡಬೇಕು. ಹೊರಗೆ ಹೆಚ್ಚು ಓಡಾಡಬಾರದು. ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರಿಗೆ ಸೋಂಕು ತಗುಲಿದರೆ ಚೇತರಿಕೆ ಕಷ್ಟ. ನಮ್ಮ ಸಂಕಲ್ಪ, ಸಂಯಮ ನಮ್ಮನ್ನು ಮಾತ್ರವಲ್ಲದೆ ನಮ್ಮ ಬಂಧುಗಳು, ಸಮಾಜ, ದೇಶವನ್ನು ಕಾಪಾಡಬಲ್ಲದು. ಯಾರೂ ಭಯಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ವಹಿಸಬೇಕು. ಕೊರೊನಾ ರೋಗದ ಲಕ್ಷಣ ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಇಲ್ಲವೇ ಸಹಾಯವಾಣಿ (11-  23978036) ಸಂಪರ್ಕಿಸಬಹುದು ಎಂದು ಮನವಿ ಮಾಡಿದ್ದಾರೆ.

ದಿನಸಿ, ಹಾಲು, ಹಣ್ಣು- ಹಂಪಲು, ಔಷಧ, ಇಂಧನ ಇತರೆ ಜೀವನಾವಶ್ಯಕ ಎಲ್ಲ ವಸ್ತುಗಳ ಪೂರೈಕೆ ಎಂದಿನಂತಿರುತ್ತದೆ. ಹಾಗಾಗಿ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಆತಂಕದಿಂದ ಅನಗತ್ಯವಾಗಿ ವಸ್ತುಗಳ ಖರೀದಿ, ದಾಸ್ತಾನು ಮಾಡಬಾರದು.

ವಿಶ್ವವ್ಯಾಪಿಯಾಗುತ್ತಿರುವ ಕೋವಿಡ್‌ 19 ರೋಗ ಭಾರತದ ಮೇಲೂ ಆರ್ಥಿಕ ದುಷ್ಪರಿಣಾಮ ಬೀರಬಹುದು. ಇದನ್ನು ಸಮರ್ಥವಾಗಿ ಎದುರಿಸಲು ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಉನ್ನತಾಧಿಕಾರ ಕಾರ್ಯದಳ ರಚಿಸಿದ್ದಾರೆ. ಎಲ್ಲರೂ ಪ್ರಧಾನಿ ಮೋದಿಯವರೊಂದಿಗೆ ಕೈಜೋಡಿಸಿ ಈ ಸವಾಲನ್ನು ಗೆಲ್ಲೋಣ ಎಂದು ವಿನಂತಿಸಿದ್ದಾರೆ.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.