ಮಹಾಮಾರಿಯನ್ನು ಗೆದ್ದೇ ಗೆಲ್ಲುವ ಛಲದಲ್ಲಿ ಜಿಲ್ಲಾಡಳಿತ


Team Udayavani, Mar 21, 2020, 11:44 PM IST

ಮಹಾಮಾರಿಯನ್ನು ಗೆದ್ದೇ ಗೆಲ್ಲುವ ಛಲದಲ್ಲಿ ಜಿಲ್ಲಾಡಳಿತ

 

ಉಡುಪಿ: ಜಿಲ್ಲೆಯಲ್ಲಿ ಕೋವಿಡ್- 19 ಸೋಂಕು ಲಕ್ಷಣವನ್ನು ಸಂಪೂರ್ಣವಾಗಿ ನಿವಾರಿಸು ವಂತಾಗಲು ವೈದ್ಯಕೀಯ ಸಿಬಂದಿ 24×7 ಪರಿಶ್ರಮ ಪಡುತ್ತಿದ್ದಾರೆ. ತೆರೆಮರೆಯ ಈ ಶ್ರಮದಿಂದಾಗಿ ಸೋಂಕು ಮತ್ತಷ್ಟು ವ್ಯಾಪಕವಾಗಿ ಹಬ್ಬುವುದನ್ನು ತಡೆಯಲು ಸಾಧ್ಯವಾಗಿದೆ. ಜಿಲ್ಲಾಡಳಿತವೂ ಈ ನಿಟ್ಟಿನಲ್ಲಿ ಸಾಕಷ್ಟು ತಯಾರಿಯನ್ನು ಮಾಡಿಕೊಂಡಿದೆ.

ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 3 ಪಾಳಿಯಂತೆ ವೈದ್ಯರು, ನರ್ಸ್‌ಗಳು, ಅಟೆಂಡರ್‌ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬೆಳಗ್ಗೆ 8ರಿಂದ 2, 2ರಿಂದ 8 ಹಾಗೂ ರಾತ್ರಿ 8ರಿಂದ ಬೆಳಗ್ಗೆ 8ರ ವರೆಗೆ ತಲಾ 3 ಮಂದಿ ಸಿಬಂದಿ ಕಾರ್ಯ ನಿರ್ವಹಿಸುತ್ತಾರೆ. ಕಾರ್ಕಳ, ಕುಂದಾಪುರ, ಮಣಿಪಾಲ ಆಸ್ಪತ್ರೆಯಲ್ಲೂ ಇದೇ ರೀತಿಯಾಗಿ ವೈದ್ಯರ ಕಾರ್ಯಾಚರಣೆ ಮುಂದುವರಿದಿದೆ. ಅಗತ್ಯ ಬಿದ್ದರೆ ಹೆಚ್ಚುವರಿ ವೈದ್ಯರನ್ನೂ ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಅನುಸರಿಸಿ
ಜನರು ಭಯಪಡುವ ಅಗತ್ಯವಿಲ್ಲ. ಸುಳ್ಳು ಸುದ್ದಿಗಳನ್ನು ಹಬ್ಬಿಸಬಾರದು. ಜಿಲ್ಲೆಯಲ್ಲಿ ಈ ವರೆಗೆ ಯಾವುದೇ ಪಾಸಿಟಿವ್‌ ಪ್ರಕರಣಗಳು ವರದಿಯಾಗಿಲ್ಲ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಎಚ್ಚರಿಕೆ ವಹಿಸಬೇಕು. ಬೇರೆ ರಾಜ್ಯ, ದೇಶಗಳಿಂದ ಬಂದ ವ್ಯಕ್ತಿಗಳಿಗೆ ಯಾವುದೇ ಕಿರುಕುಳ ನೀಡದೆ ಅಂತಹವರ ಮಾಹಿತಿಯನ್ನು ಸ್ಥಳೀಯ ಆರೋಗ್ಯ ಕೇಂದ್ರಗಳಿಗೆ ನೀಡಬೇಕು. ಆರೋಗ್ಯ ಇಲಾಖೆ ನೀಡಿದ ಮಾರ್ಗಸೂಚಿಗಳನ್ನು ಅ‌ನುಸರಿಸಿಕೊಳ್ಳಬೇಕು. ಈಗಾಗಲೇ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಳ್ಳಿ-ಹಳ್ಳಿಗಳಿಗೆ ತೆರಳಿ ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಎನ್‌ಜಿಒ ಸಂಸ್ಥೆಗಳಿಂದ ಆಡಿಯೋ, ವೀಡಿಯೋ ಮೂಲಕ ಪ್ರಚಾರ ನೀಡಲಾಗಿದೆ. ವಯಸ್ಕರು ಮನೆಯೊಳಗಿದ್ದರೆ ಉತ್ತಮ. ಕೆಮ್ಮು, ಶೀತ ಇದ್ದವರು ಮಕ್ಕಳು, ಹಿರಿಯರಿಂದ ಆದಷ್ಟು ದೂರವಿದ್ದರೆ ಒಳ್ಳೆಯದು.
-ಡಾ| ಸುಧೀರ್‌ಚಂದ್ರ ಸೂಡ
ಜಿಲ್ಲಾ ಆರೋಗ್ಯಾಧಿಕಾರಿಗಳು, ಉಡುಪಿ

ದಿನನಿತ್ಯ 100ಕ್ಕೂ ಅಧಿಕ ಕರೆ
ಜಿಲ್ಲೆಯಲ್ಲಿ ಕೋವಿಡ್‌ 19 ಸಹಾಯವಾಣಿಗೆ ಬರುತ್ತಿರುವ ಕರೆಗಳ ಸಂಖ್ಯೆಯೂ ದಿನಂಪ್ರತಿ ಹೆಚ್ಚಳವಾಗುತ್ತಿದೆ. ಕೆಲವು ವಾರಗಳ ಹಿಂದೆ 10-15ರಷ್ಟಿದ್ದ ಕರೆಗಳ ಸಂಖ್ಯೆ ಈಗ 100 ದಾಟುತ್ತಿದೆ. ಶನಿವಾರ ಬೆಳಗ್ಗಿನಿಂದ ಸಂಜೆಯ ವೇಳೆಗೆ 50ಕ್ಕೂ ಅಧಿಕ ಕರೆಗಳು ಬಂದಿದ್ದವು. ಕೋವಿಡ್- 19 ರೋಗಲಕ್ಷಣದ ಮಾಹಿತಿ, ಹರಡುವ ಬಗ್ಗೆ, ಚಿಕಿತ್ಸೆಯ ಬಗ್ಗೆ, ವಿದೇಶದಿಂದ ಆಗಮಿಸಿದವರ ವಿವರ ಸಹಿತ ಹಲವಾರು ರೀತಿಯ ಸಂದೇಹಗಳನ್ನು ಸಹಾಯವಾಣಿಯ ಮೂಲಕ ನಿವಾರಿಸಲಾಗುತ್ತದೆ. ಮಾಹಿತಿ ನೀಡಲು ಹಾಗೂ ಪಡೆಯಲು ಸಹಾಯವಾಣಿ ಸಂಖ್ಯೆ 9663957222 ಅಥವಾ 9663950222 ಸಂಖ್ಯೆಗೆ ಕರೆಮಾಡ ಬಹುದಾಗಿದೆ.

ಮನೆಯಿಂದಲೇ ಕರ್ತವ್ಯ
ಜನತಾ ಕರ್ಫ್ಯೂ ಪ್ರಯುಕ್ತ ಮನೆಯಲ್ಲಿಯೇ ಇದ್ದು, ಕೆಲಸ ನಿರ್ವಹಿಸುತ್ತಿದ್ದೇನೆ. ಪ್ರಧಾನಮಂತ್ರಿಗಳ ಆಶಯಕ್ಕೆ ಎಲ್ಲರೂ ಕೈಜೋಡಿಸಬೇಕು. ನಾಳೆ 7ರಿಂದ 9ರವರೆಗೆ ಯಾರು ಕೂಡ ಮನೆಯಿಂದ ಹೊರಬಾರದೆ ಈ ಮಹತ್ಕಾರ್ಯದಲ್ಲಿ ಭಾಗವಹಿಸಬೇಕು.
-ಜಿ.ಜಗದೀಶ್‌, ಜಿಲ್ಲಾಧಿಕಾರಿಗಳು

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

8

Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

5(1

Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.