ಧಾರವಾಡದ ಕೋವಿಡ್-19 ವೈರಸ್ ಸೋಂಕಿತ ವ್ಯಕ್ತಿಯ ಪ್ರಯಾಣ ಮಾಹಿತಿ
Team Udayavani, Mar 22, 2020, 1:06 PM IST
ಧಾರವಾಡ: ಇಲ್ಲಿನ ಹೊಸಯಲ್ಲಾಪುರದ ನಿವಾಸಿಗೆ ಕೋವಿಡ್-19 ವೈರಸ್ ಸೋಂಕು ದೃಢಪಟ್ಟಿದ್ದು, ಇದೀಗ ಆತನ ಪ್ರಯಾಣದ ವಿವರ ಲಭ್ಯವಾಗಿದೆ.
ಈ ವ್ಯಕ್ತಿಯು ಮಾ. 11 ರಂದು ಆಸ್ಟ್ರೇಲಿಯಾ ದೇಶದ ಪರ್ಥ್ ನಗರದಿಂದ ಪ್ರಯಾಣ ಪ್ರಾರಂಭಿಸಿದ್ದಾನೆ. ಇಎ 421 ಎಮಿರೇಟ್ಸ್ ವಿಮಾನದ ಮೂಲಕ ದುಬೈ ತಲುಪಿದ್ದಾರೆ. ದುಬೈನಿಂದ ಓಮನ್ ಏರ್ ಲೈನ್ಸ್ ಮೂಲಕ 12.35 ಕ್ಕೆ ಮಸ್ಕತ್ ನಗರ ತಲುಪಿದ್ದಾರೆ.12- 3-2020 ಮಧ್ಯಾಹ್ನ 2.45 ಕ್ಕೆ ಮಸ್ಕತ್ ನಗರದಿಂದ ಓಮನ್ ಏರ್ ಲೈನ್ಸ್ ಮೂಲಕ ಹೊರಟು ಸಂಜೆ 7 ಗಂಟೆಗೆ ಗೋವಾ ವಿಮಾನ ನಿಲ್ದಾಣ ತಲುಪಿದ್ದಾರೆ.
ಗೋವಾ ವಿಮಾನ ನಿಲ್ದಾಣದಿಂದ ಬಾಡಿಗೆ ಸ್ಕೂಟರ್ ಪಡೆದು ಪಣಜಿ ಬಸ್ ತಲುಪಿದ್ದಾರೆ. (12-3-2020) ಅದೇ ರಾತ್ರಿ 8 .16 ನಿಮಿಷಕ್ಕೆ ವಾಹನ ಸಂಖ್ಯೆ : ಕೆ.ಎ. 26 ಎಫ್ 962 ಪಣಜಿ – ಗದಗ ಬೆಟಗೇರಿ ಕೆ.ಎಸ್.ಆರ್.ಟಿ.ಸಿ.ಬಸ್ ಮೂಲ ಪ್ರಯಾಣ ಮಾಡಿ, 13-3-2020 ರಂದು ಬೆಳಿಗ್ಗೆ 01 ಗಂಟೆಗೆ ಧಾರವಾಡ ಬಸ್ ನಿಲ್ದಾಣಕ್ಕೆ ಆಗಮಿಸಿರುತ್ತಾನೆ. ಅಲ್ಲಿಂದ ಆಟೋ ಮೂಲಕ ಧಾರವಾಡದ ತಮ್ಮ ಮನೆ ತಲುಪಿದ್ದಾರೆ.
ಅನಾರೋಗ್ಯದ ಕಾರಣ 17-03-2020 ಧಾರವಾಡದ ಸ್ಪಂದನಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.18-03-2020 ರಿಂದ 21-03-2020 ರವರೆಗೆ ಓಪಿಡಿ ಸಂಖ್ಯೆ 6 ರೊಂದಿಗೆ ಎಸ್ ಡಿಎಂ ಆಸ್ಪತ್ರೆಯ ರೂಮ್ ನಂಬರ್ 4 ರಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಈ ವ್ಯಕ್ತಿ ಪ್ರಯಾಣಿಸಿರುವ ವಿಮಾನ,ಬಸ್, ಆಟೋ ಮೂಲಕ ಪ್ರಯಾಣಿಸಿರುವವರು, ಆತ ಭೇಟಿ ನೀಡಿರುವ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಹಾಗೂ ಆ ಸಮಯದಲ್ಲಿ ಹಾಜರಿದ್ದ ಸಾರ್ವಜನಿಕರಿಗೂ ಸೋಂಕು ತಗಲುವ ಸಾಧ್ಯತೆ ಇರುವುದರಿಂದ , ಅಂತಹವರು ತಮ್ಮ ಮನೆಯಿಂದ ಹೊರಬರದೇ ಕಡ್ಡಾಯವಾಗಿ ಮನೆಯಲ್ಲಿಯೇ ಇರಬೇಕು. ಕೋರೊನಾ ಸಹಾಯವಾಣಿ 104 ಮತ್ತು 1077 ನಂಬರ್ ಗಳಿಗೆ ಕರೆ ಮಾಡಿ ತಮ್ಮ ವಿವರಗಳನ್ನು ನೀಡಬೇಕು. ಹಾಗೂ ಸೂಕ್ತ ಮಾರ್ಗದರ್ಶನ ಪಡೆದುಕೊಳ್ಳಬೇಕು. ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.