ರೈಲ್ವೆ ನಿಲ್ದಾಣದಲ್ಲಿ ಥರ್ಮಲ್‌ ಸ್ಕ್ರೀನಿಂಗ್‌

Team Udayavani, Mar 22, 2020, 4:42 PM IST

mandya-tdy-1

ಮಂಡ್ಯ: ಕೋವಿಡ್ 19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಮದ್ದೂರು ತಾಲೂಕು ಆರೋಗ್ಯ ಇಲಾಖೆ ಪಟ್ಟಣದ ಆಯ್ದ ಸ್ಥಳಗಳಲ್ಲಿ ಶನಿವಾರ ಕೊರೊನಾ ಜನಜಾಗೃತಿ ಅಭಿಯಾನ ನಡೆಸಲಾಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ. ಆಶಾಲತಾ ನೇತೃತ್ವದಲ್ಲಿ ಇಲಾಖೆ ರಾಷ್ಟ್ರೀಯ ಬಾಲಸ್ವಾಸ್ತ್ಯ ಕಾರ್ಯಕರ್ತರ ತಂಡ ಪಟ್ಟಣದ ಶಿವಪುರ ರೈಲು ನಿಲ್ದಾಣ, ನ್ಯಾಯಾಲಯ, ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣ, ಹೊಳೇ ಆಂಜನೇಯಸ್ವಾಮಿ ದೇಗುಲದ ಆವರಣದಲ್ಲಿ ಸಾರ್ವಜನಿಕರನ್ನು ತಪಾಸಣೆಗೊಳಪಡಿಸಿ ಕೊರೊನಾ ವೈರಸ್‌ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ರೈಲು ನಿಲ್ದಾಣದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಆಗಮಿಸಿದ್ದ ಪ್ರಯಾಣಿಕರನ್ನು ಬಾಲಸ್ವಾಸ್ತ್ಯ ಕಾರ್ಯಕರ್ತರ ತಂಡ ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸುವ ಮೂಲಕ ಕೊರೋನಾ ಸೋಂಕಿನ ಭೀತಿ ಇಲ್ಲ ಎಂದು ಹೇಳಿ ಪ್ರಯಾಣಿಕರಲ್ಲಿ ನೈತಿಕವಾಗಿ ಧೈರ್ಯ ತುಂಬಿದರು.

ನಂತರ ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಕೀಲರು ಮತ್ತು ಕಕ್ಷಿದಾರರಿಗೆ ಯಂತ್ರದ ಮೂಲಕ ತಪಾಸಣೆ ನಡೆಸಿ ಕೋವಿಡ್ ಸೋಂಕಿಲ್ಲ ಎಂದು ಖಚಿತಪಡಿಸಿಕೊಂಡರು. ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಭಕ್ತಾದಿಗಳ ತಪಾಸಣೆ ನಡೆಸಿದ ಇದೇ ತಂಡ ಸಾರ್ವಜನಿಕ ಬಸ್‌ ನಿಲ್ದಾಣದಲ್ಲಿ ಬಸ್‌ ಗಳಿಗಾಗಿ ಕಾದು ಕುಳಿತಿದ್ದ ಪ್ರಯಾಣಿಕರನ್ನು ತಪಾಸಣೆ ನಡೆಸಿದರು. ಕೋವಿಡ್ 19 ಸೋಂಕು ಹರಡದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ತಂಡ, ಸಾರ್ವಜನಿಕರು ಮಾಸ್ಕ್, ಸ್ಯಾನಿಟೈಸರ್ ಬಳಕೆ ಕುರಿತು ತಿಳಿವಳಿಕೆ ಮೂಡಿಸಿದರು. ನಂತರ ಸ್ಥಳದಲ್ಲೇ ಕರಪತ್ರ ವಿತರಣೆ ಮಾಡಿದರು.

ರಾಷ್ಟ್ರೀಯ ಬಾಲಸ್ವಾಸ್ತ್ಯ ಕಾರ್ಯಪಡೆ ತಂಡದ ಡಾ.ರಶ್ಮಿ, ಡಾ.ಪದ್ಮಜಾ, ಕಿರಿಯ ಮಹಿಳಾ ಸಹಾಯಕಿ ಎಚ್‌.ಎಂ.ಮಣಿ, ಸಹಾಯಕಿ ಆಶಾ, ಅಂಗನ ವಾಡಿ ಕಾರ್ಯಕರ್ತೆಯರು ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.