ಕರ್ನಾಟಕ ಲಾಕ್ ಡೌನ್: ಕಲಬುರಗಿಯಲ್ಲಿ ತರಕಾರಿ ಮಾರುಕಟ್ಟೆಗಳು ಬಂದ್
Team Udayavani, Mar 24, 2020, 11:50 AM IST
ಕಲಬುರಗಿ: ಜನ ಸಂದಣಿ ಸೇರುತ್ತಿದ್ದ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿ ತರಕಾರಿ ಮಾರುಕಟ್ಟೆಗಳನ್ನು ಮಂಗಳವಾರ ಸಂಪೂರ್ಣವಾಗಿ ಬಂದ್ ಮಂಡಿಸಲಾಯಿತು.
ಕೊವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಪ್ರಮುಖ ಮಾರುಕಟ್ಟೆಗಳಾದ ಕಣ್ಣಿ ಮತ್ತು ಸೂಪರ್ ಮಾರುಕಟ್ಟೆಗಳನ್ನು ಪೊಲೀಸರು ಮತ್ತು ಪಾಲಿಕೆ ಸಿಬ್ಬಂದಿ ಒತ್ತಾಯ ಪೂರ್ವಕವಾಗಿ ಮುಚ್ಚಿಸಿದರು
ಯುಗಾದಿ ಹಬ್ಬ ಹಾಗೂ ದಿನ ನಿತ್ಯದ ಬಳಕೆಗೆಂದು ಮಾರುಕಟ್ಟೆಗಳಲ್ಲಿ ಗುಂಪು-ಗುಂಪಾಗಿ ತರಕಾರಿ, ಹಣ್ಣು ಹಂಪಲು ಖರೀದಿಸುತ್ತಿದ್ದರು. ಒಬ್ಬೊಬ್ಬರಾಗಿ ಖರೀದಿಸಿ ಎಂದರೂ ಜನ ಕೇಳಲಿಲ್ಲ. ಹೀಗಾಗಿ ಜನರನ್ನು ಚದುರಿಸಿ, ವ್ಯಾಪಾರಸ್ಥರಿಂದ ಅಂಗಡಿಗಳನ್ನು ಮುಚ್ಚಿಸಲಾಯಿತು.
ಇನ್ನು, ನಿಷೇಧಾಜ್ಞೆ ನಡುವೆಯೂ ರಸ್ತೆಗಿಳಿದಿದ್ದ ಬೈಕ್, ಆಟೋ ಮತ್ತು ವಾಹನ ಸವಾರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ಅನವಶ್ಯಕವಾಗಿ ಮನೆಯಿಂದ ಹೊರಬಂದವನ್ನು ಬೈದು ಮನೆಗಳಿಗೆ ಕಳುಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.