ಪಾಕಿಸ್ತಾನ: ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 800ಕ್ಕೂ ಅಧಿಕ, ಸಾವಿನ ಸಂಖ್ಯೆ 6ಕ್ಕೆ ಏರಿಕೆ
ಫೆಡರಲ್ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ 352 ಕೋವಿಡ್ 19 ವೈರಸ್ ಪ್ರಕರಣ ದೃಢಪಟ್ಟಿದೆ.
Team Udayavani, Mar 24, 2020, 3:28 PM IST
Representative Image
ಇಸ್ಲಾಮಾಬಾದ್:ಕಳೆದ 24 ಗಂಟೆಯಲ್ಲಿ 150 ನೂತನ ಕೋವಿಡ್ 19 ವೈರಸ್ ಪ್ರಕರಣಗಳು ದೃಢವಾಗುವ ಮೂಲಕ ಪಾಕಿಸ್ತಾನದಲ್ಲಿ ಕೋವಿಡ್ 19 ಸೋಂಕು ಪೀಡಿತದ ಸಂಖ್ಯೆ 803ಕ್ಕೆ ಏರಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರದೇಶದಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದು, ಇದರೊಂದಿಗೆ ಪಾಕ್ ನಲ್ಲಿ ಕೋವಿಡ್ 19 ಮಹಾಮಾರಿಗೆ ಸಾವನ್ನಪ್ಪಿದ್ದವರ ಸಂಖ್ಯೆ 6ಕ್ಕೆ ಏರಿದೆ. ಫೆಡರಲ್ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ 352 ಕೋವಿಡ್ 19 ವೈರಸ್ ಪ್ರಕರಣ ದೃಢಪಟ್ಟಿದೆ.
ಪಂಜಾಬ್ ಪ್ರಾಂತ್ಯದಲ್ಲಿ 225, ವಾಯುವ್ಯ ಖೈಬರ್ ಪಖ್ತುನ್ ಖಾವಾ ಪ್ರಾಂತ್ಯದಲ್ಲಿ 31, ಪಶ್ಚಿಮ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ 108, ಗಿಲ್ಗಿಟ್ ಬಾಲ್ಟಿಸ್ತಾನ್ ನಲ್ಲಿ 71, ಇಸ್ಲಾಮಾಬಾದ್ ನಲ್ಲಿ 15, ಆಜಾದ್ ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಒಂದು ಪ್ರಕರಣ ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.