ಯುಗಾದಿ ಸಡಗರಕ್ಕೆ ಕೋವಿಡ್ 19 ಕರಿನೆರಳು


Team Udayavani, Mar 24, 2020, 5:04 PM IST

ಯುಗಾದಿ ಸಡಗರಕ್ಕೆ ಕೋವಿಡ್ 19 ಕರಿನೆರಳು

ಮೈಸೂರು: ವರ್ಷದ ಮೊದಲ ಹಬ್ಬವಾದ ಯುಗಾದಿ ವರ್ಷದಿಂದ ವರ್ಷಕ್ಕೆ ಸಡಗರ ಸಂಭ್ರಮದಿಂದ ಆಚರಿಸಲ್ಪಡುವುದು ವಾಡಿಕೆ. ಆದರೆ ಈ ಬಾರಿ ಕೋವಿಡ್ 19 ಭೀತಿಯಿಂದಾಗಿ ಯುಗಾದಿ ಸಡಗರಕ್ಕೆ ಬ್ರೇಕ್‌ ಬಿದ್ದಂತಾಗಿದೆ.

ಯುಗಾದಿ ನಮ್ಮೆಲ್ಲರಿಗೂ ಹರ್ಷದ ಸಂಕೇತ. ಅದರಲ್ಲೂ ಹಿಂದೂ ಧರ್ಮೀಯರಿಗೆ ಶುಭದ ಸಂಕೇತ. ಎಲ್ಲಾ ಸಕಲ ಕಾರ್ಯ ಗಳಿಗೂ ಮುನ್ಸೂಚನೆ. ಆದರೆ, ಜಗತ್ತಿನೆಲ್ಲಡೆ ತನ್ನ ಕಬಂಧ ಬಾಹು ವಿಸ್ತರಿಸುತ್ತಿರುವ ಕೋವಿಡ್‌ -19 ಭೀತಿಯಿಂದ ಇಡೀ ರಾಜ್ಯವೇ ಲಾಕ್‌ಡೌನ್‌ ಆಗಿರುವುದರಿಂದ ಜನರು ಸಂಭ್ರಮದಿಂದ ಹಬ್ಬ ಆಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಈಗಾಗಲೇ ಜಿಲ್ಲಾಡಳಿತ ಮೈಸೂರನ್ನು ಲಾಕ್‌ಡೌನ್‌ ಮಾಡಿರುವುದರಿಂದ ಸಭೆ, ಸಮಾರಂಭ, ಉತ್ಸವ, ಜಾತ್ರೆ ಮಾಡದಂತೆ ಕರೆ ನೀಡಿದ್ದು, ಗುಂಪು ಸೇರದಂತೆ ಎಚ್ಚರಿಕೆ ನೀಡಿದೆ. ಈ ನಡುವೆ ಅಗತ್ಯ ವಸ್ತುಗಳಾದ ಹಣ್ಣು, ತರಕಾರಿ, ಆಹಾರ ಸಾಮಗ್ರಿ ಸೇರಿ ದಿನಸಿ ಪದಾರ್ಥಗಳ ಮಾರಾಟಕ್ಕೆ ಅನುವು ಮಾಡಿದೆಯಾದರೂ, ವಾಣಿಜ್ಯ ವಹಿವಾಟಿಗೆ ನಿರ್ಬಂಧ ವಿಧಿಸಿದೆ. ಪರಿಣಾಮ ಹೊಸ ಬಟ್ಟೆ ಖರೀದಿಸಿ ಹಬ್ಬ ಆಚರಿಸುವ ಜನರ ಕನಸಿಗೆ ತಣ್ಣೀರು ಎರಚಿದಂತಾಗಿದೆ.

ಮನೆಯಲ್ಲೇ ಹಬ್ಬ: ಪ್ರತಿ ವರ್ಷ ಹಬ್ಬದಂದು ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವ ವಾಡಿಕೆಗೂ ಕೊರೊನಾ ಕರಿ ನೆರಳು ಬಿದ್ದಿದೆ. ಈಗಾಗಲೇ ಎಲ್ಲಾ ದೇಗುಲಗಳ ಬಾಗಿಲು ಮುಚ್ಚಿಸಿರುವುದರಂದ ಜನ ಮನೆಯಲ್ಲೇ ಹಬ್ಬ ಆಚರಿಸಿಕೊಳ್ಳಲು ಅಣಿಯಾಗುತ್ತಿದ್ದಾರೆ.

ಹೂ ಬೆಳೆದ ರೈತರಿಗೆ ಸಂಕಷ್ಟ: ಯುಗಾದಿ ಹಬ್ಬಕ್ಕೆಂದೇ ರೈತರು ವಿವಿಧ ಭಾಗಗಳಲ್ಲಿ ಸೇವಂತಿಗೆ, ಮಲ್ಲಿಗೆ, ಕಾಕಡ, ಚೆಂಡು ಹೂ ಮತ್ತಿತರೆ ಹೂ ಬೆಳೆಯುವುದು ವಾಡಿಕೆ. ಅದರಂತೆ ಈ ಬಾರಿಯ ಯುಗಾದಿಗೆ ಹೂಗಳನ್ನು ಹತ್ತಾರು ಎಕರೆಗಳಲ್ಲಿ ರೈತರು ಬೆಳೆದಿದ್ದರು. ಆದರೆ ಕಳೆದ ಹದಿನೈದು ದಿನಗಳಿಂದ ವಿಶ್ವಾದ್ಯಂತ ಕೋವಿಡ್ 19 ಆವರಿಸಿದ ಹಿನ್ನೆಲೆ ದೇಶಾದ್ಯಂತ ದೇವಸ್ಥಾನ ಪ್ರವೇಶ ಹಾಗೂ ಹೂ ಮಾರಾಟಕ್ಕೂ ಸರ್ಕಾರ ನಿರ್ಬಂಧ ಹೇರಿದೆ. ಇದರಿಂದಾಗಿ ಹೂ ಬೆಳೆದ ರೈತರ ಬದುಕು ಬೀದಿಗೆ ಬಂದಿದೆ.

ವಸ್ತು ಖರೀದಿಗೆ ಮುಗಿಬಿದ್ದ ಜನ: ಯುಗಾದಿ ಇನ್ನೆರೆಡು ದಿನ ಇರುವಾಗಲೇ ಮೈಸೂರು ಲಾಕ್‌ ಡೌನ್‌ ಮಧ್ಯೆಯೂ ನಗರದ ದೇವರಾಜ ಮಾರುಕಟ್ಟೆ, ಅಗ್ರಹಾರ ಮಾರುಕಟ್ಟೆಗಳಲ್ಲಿ ಜನ ಜಮಾಯಿಸಿ ಹಬ್ಬಕ್ಕೆ ಬೇಕಾಗುವ ಪೂಜಾ ಸಾಮಗ್ರಿ ಖರೀದಿಸಿದರು. ಈ ವೇಳೆ ನೂಕುನುಗ್ಗಲು ಉಂಟಾಗಿದ್ದರಿಂದ ಸರತಿ ಸಾಲಿನಲ್ಲಿ ನಿಂತು ಸಾಮಗ್ರಿ ಖರೀದಿಸಿದರು.

ಆಚರಣೆಗಳಿಗೆ ಬ್ರೇಕ್‌: ಯುಗಾದಿ ಅಂಗವಾಗಿ ನಾನಾ ಭಾಗದ ಗ್ರಾಮೀಣ ಪ್ರದೇಶ ಗಳಲ್ಲಿ ವಿವಿಧ ಸಂಪ್ರದಾಯ ಆಚರಣೆಗಳಿದ್ದು, ಹೊನ್ನಾರು, ಕೋಲಾಟ, ದೇಗುಲಗಳಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ. ಆದರೆ ಕೋವಿಡ್ 19 ಭೀತಿಯಿಂದ ಸರ್ಕಾರ ಸಂಪ್ರದಾಯಿಕ ಆಚರಣೆಗಳಿಗೆ ನಿರ್ಬಂಧ ಹೇರಿದ್ದು ಹಳ್ಳಿಗಳಲ್ಲಿ ಹೊನ್ನಾರು ಕಟ್ಟುವುದು, ಕೋಲಾಟ, ನೃತ್ಯ ಇತರೆ ಚಟುವಟಿಕೆಗಳಿಗೂ ಬ್ರೇಕ್‌ ಬಿದ್ದಂತಾಗಿದೆ.

 

ಸತೀಶ್‌ ದೇಪುರ

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.